Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Education News

ಮಹಿಳಾ ಪತ್ರಕರ್ತರಿಗಾಗಿ ತರಬೇತಿಗೆ ಅರ್ಜಿ ಆಹ್ವಾನ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಮಾಧ್ಯಮ ಅಕಾಡೆಮಿಯು
Infosys Springboard ಸಿ.ಎಸ್.ಆರ್ ಕಾರ್ಯಕ್ರಮದಡಿ ಮಹಿಳಾ ಪತ್ರಕರ್ತರಿಗಾಗಿಯೇ ವಿಶೇಷವಾಗಿ ತರಬೇತಿ ಕಾರ್ಯಕ್ರಮವನ್ನು ಮಾರ್ಚ್-25 ರಿಂದ 27ರ ವರೆಗೆ ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್‍ನಲ್ಲಿ ಆಯೋಜಿಸಿದ್ದು, ಮಹಿಳಾ ಪತ್ರಕರ್ತರಿಂದ ಅರ್ಜಿ ಆಹ್ವಾನಿಸಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕನಿಷ್ಠ 5 ವರ್ಷ ಸೇವಾನುಭವ ಹೊಂದಿರುವ ಮಹಿಳಾ ಪತ್ರಕರ್ತರು ಅರ್ಜಿ ಸಲ್ಲಿಸಬಹುದು.

ಆಸಕ್ತ ಮಹಿಳಾ ಪತ್ರಕರ್ತರು ಗೂಗಲ್ ಫಾರ್ಮ್ https://forms.gle/tozr4GxUQibDHBvk9  ನಲ್ಲಿ ಮಾಹಿತಿ ಹಾಗೂ ದಾಖಲೆಗಳನ್ನು ಒದಗಿಸುವ ಮೂಲಕ ತರಬೇತಿಗೆ ನೋಂದಾಯಿಸಬಹುದಾಗಿದೆ.

ಅರ್ಜಿ ನಮೂನೆಯಲ್ಲಿ ಸೂಚಿಸಿರುವಂತೆ ಮಹಿಳಾ ಪತ್ರಕರ್ತರು ಭಾವಚಿತ್ರ, ವಯಸ್ಸಿನ ದಾಖಲೆ, ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಯ ಮುಖ್ಯಸ್ಥರ ದೃಢೀಕರಣ ಅಥವಾ ಕಚೇರಿಯ ಅಧಿಕೃತ ಗುರುತಿನಚೀಟಿ, ಸದರಿ ಮಾಧ್ಯಮ ಸಂಸ್ಥೆಯು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿ ಸೇರ್ಪಡೆಯಾಗಿರುವ ಕುರಿತ ದಾಖಲೆ ಹಾಗೂ ಕನಿಷ್ಠ 5 ವರ್ಷ ಸೇವೆ ಸಲ್ಲಿಸಿರುವ ಕುರಿತು ಸೇವಾನುಭವ ದಾಖಲೆಗಳನ್ನು ಸಲ್ಲಿಸಬೇಕು.

ಇದು ಮೂರು ದಿನಗಳ ವಸತಿಯುತ ತರಬೇತಿಯಾಗಿದ್ದು, ತರಬೇತಿಗೆ ಆಯ್ಕೆಯಾದ ಮಹಿಳಾ ಪತ್ರಕರ್ತರಿಗೆ ನಿಯಮಾನುಸಾರ ಪ್ರಯಾಣ ಭತ್ಯೆ ನೀಡಲಾಗುವುದು. ಈ ತರಬೇತಿ ಕಾರ್ಯಕ್ರಮದಲ್ಲಿ ಡಿಜಿಟಲ್ ಮಾಧ್ಯಮ, ಎಐ ಬಳಕೆ ಹಾಗೂ ಸಾಫ್ಟ್ ಸ್ಕಿಲ್ ಅಭಿವೃದ್ಧಿ ಮತ್ತು ನಾಯಕತ್ವ ತರಬೇತಿ ನೀಡಲಾಗುವುದು.

ಪತ್ರಕರ್ತೆಯರ ಆಯ್ಕೆ ಕುರಿತ ಅಂತಿಮ ನಿರ್ಧಾರ ಅಕಾಡೆಮಿಯದ್ದೇ ಆಗಿರುತ್ತದೆ. ಅರ್ಜಿ ಸಲ್ಲಿಸಲು 2026 ರ ಮಾರ್ಚ್-10 ಕೊನೆಯ ದಿನವಾಗಿದೆ ಎಂದು ಪ್ರಕಟಣೆ ತಿಳಿಸಿದೆ.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು