ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೊಳಪಡುವ ಇಂದಿರಾ ಗಾಂಧಿ ವೃತ್ತಿ ಮತ್ತು ಅಭಿವೃದ್ಧಿ ಕೇಂದ್ರದ ವತಿಯಿಂದ 2026-27ನೇ ಸಾಲಿಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಾದ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳ ಮಾರ್ಗದರ್ಶನ ಹಾಗೂ ತರಬೇತಿ ಕಾರ್ಯಕ್ರಮಗಳಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ಹಾಗೂ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲಾಖೆಯ ಅಧಿಕೃತ ವೆಬ್‍ಸೈಟ್ igccd.karnataka.gov.in ಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದುಕೊಂಡು ಅರ್ಜಿ ಸಲ್ಲಿಸಬಹುದು ಎಂದು ಬೆಂಗಳೂರು ಇಂದಿರಾ ಗಾಂಧಿ ವೃತ್ತಿ ಮತ್ತು ಅಭಿವೃದ್ಧಿ ಕೇಂದ್ರದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



