Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಿರುದ್ಯೋಗಿ ಯುವಕ-ಯುವತಿಯರಿಗೆ ಉಚಿತ ಟೈಲರಿಂಗ್ ತರಬೇತಿ ಹಾಗೂ ಯಂತ್ರೋಪಕರಣಗಳ ವಿತರಣೆಗೆ ಅರ್ಜಿ ಆಹ್ವಾನ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವತಿಯಿಂದ ಜಿಲ್ಲೆಯ ಪರಿಶಿಷ್ಟ ಜಾತಿ ಭೋವಿ ಜನಾಂಗದ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗಾಗಿ ಉಚಿತ ಟೈಲರಿಂಗ್ ತರಬೇತಿ ಹಾಗೂ ಯಂತ್ರೋಪಕರಣಗಳ ವಿತರಣೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಮೇ
18 ಅರ್ಜಿ ಸಲ್ಲಿಸಲು ಕೊನೆಯ ದಿನ.

ಭೋವಿ ಜನಾಂಗದ ನಿರುದ್ಯೋಗಿಗಳಲ್ಲಿ ಸ್ವಯಂ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಮತ್ತು ಆರ್ಥಿಕ ಸ್ವಾವಲಂಬನೆ ಸಾಧಿಸಲು ನೆರವಾಗುವ ಉದ್ದೇಶದಿಂದ ಈ ಕಾರ್ಯಕ್ರಮ  ಹಮ್ಮಿಕೊಳ್ಳಲಾಗಿದ್ದು, ಅಭ್ಯರ್ಥಿಗಳು 18 ರಿಂದ 50 ವರ್ಷ ವಯೋಮಿತಿಯೊಳಗಿರಬೇಕು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗಮದ ಚಿತ್ರದುರ್ಗ ಜಿಲ್ಲಾ ಕಚೇರಿಗೆ ಭೇಟಿ ನೀಡಿ ಅರ್ಜಿಗಳನ್ನು ಪಡೆಯಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಲು ಇದೇ ಮೇ 18 ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ 9448154584 ಹಾಗೂ ಚಿತ್ರದುರ್ಗ ನಗರದ ಬಿ.ಡಿ. ರಸ್ತೆಯಲ್ಲಿರುವ ಐಸಿಐಸಿಐ ಬ್ಯಾಂಕ್ ಮುಂಭಾಗದ ಪಾಲಾಕ್ಷ ಕಾಂಪೌಂಡ್‍ನ 2ನೇ ಮಹಡಿಯಲ್ಲಿರುವ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST