Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ರೈತರಿಂದ ಕೃಷಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ಕೃಷಿ ವಿಶ್ವವಿದ್ಯಾಲಯವು ರಾಜ್ಯ
, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅರ್ಹ ರೈತ, ರೈತ ಮಹಿಳೆ ಮತ್ತು ವಿಸ್ತರಣಾ ಕಾರ್ಯಕರ್ತರಿಂದ ವಿವಿಧ ಕೃಷಿ ಪ್ರಶಸ್ತಿಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ.

ಅಕ್ಟೋಬರ್ 15 ರಿಂದ 18 ರವರೆಗೆ ಜಿಕೆವಿಕೆ ಆವರಣದಲ್ಲಿ ವೈವಿಧ್ಯಮಯ ಕೃಷಿ: ಮುಂದಿನ ಪೀಳಿಗೆಗೆಎಂಬ ಘೋಷವಾಕ್ಯದೊಂದಿಗೆ ಹಮ್ಮಿಕೊಳ್ಳಲಾಗಿರುವ 'ಕೃಷಿಮೇಳ-2026' ರ ಸಂದರ್ಭದಲ್ಲಿ ಈ ಗೌರವಾನ್ವಿತ ಪ್ರಶಸ್ತಿಗಳನ್ನು ವಿತರಿಸಲಾಗುವುದು.

Advertisement

ರಾಜ್ಯ ಮಟ್ಟದ ಪ್ರಶಸ್ತಿಗಳು (ರಾಜ್ಯ ವ್ಯಾಪ್ತಿ):
ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ರಾಜ್ಯ ಮಟ್ಟದ ಅತ್ಯುತ್ತಮ ರೈತ / ರೈತ ಮಹಿಳೆ ಪ್ರಶಸ್ತಿ
, ಡಾ. ಎಂ.ಹೆಚ್. ಮರಿಗೌಡ ರಾಜ್ಯ ಮಟ್ಟದ ಅತ್ಯುತ್ತಮ ತೋಟಗಾರಿಕಾ ರೈತ / ರೈತ ಮಹಿಳೆ ಪ್ರಶಸ್ತಿ.

ರಾಜ್ಯ ಮಟ್ಟದ ಪ್ರಶಸ್ತಿಗಳು (ಕೃಷಿ ವಿಶ್ವವಿದ್ಯಾಲಯ, ಬೆಂಗಳೂರಿನ ಆಡಳಿತ ವ್ಯಾಪ್ತಿಯ 06 ಜಿಲ್ಲೆಗಳು):
ಕೆನರಾ ಬ್ಯಾಂಕ್ ಅತ್ಯುತ್ತಮ ರೈತ ಮತ್ತು ರೈತ ಮಹಿಳೆ ಪ್ರಶಸ್ತಿಗಳು
, ಡಾ. ಆರ್. ದ್ವಾರಕೀನಾಥ್ ಅತ್ಯುತ್ತಮ ರೈತ / ರೈತ ಮಹಿಳೆ ಪ್ರಶಸ್ತಿ, ಡಾ. ಆರ್. ದ್ವಾರಕೀನಾಥ್ ಅತ್ಯುತ್ತಮ ವಿಸ್ತರಣಾ ಕಾರ್ಯಕರ್ತ ಪ್ರಶಸ್ತಿ.

ಜಿಲ್ಲಾ ಮಟ್ಟದ ಪ್ರಶಸ್ತಿಗಳು (06 ಜಿಲ್ಲೆಗಳು): ಜಿಲ್ಲಾ ಮಟ್ಟದ ಪ್ರಗತಿಪರ ರೈತ ಮತ್ತು ರೈತ ಮಹಿಳೆ ಪ್ರಶಸ್ತಿಗಳು.

ತಾಲ್ಲೂಕು ಮಟ್ಟದ ಪ್ರಶಸ್ತಿಗಳು (35 ತಾಲ್ಲೂಕುಗಳು): ತಾಲ್ಲೂಕು ಮಟ್ಟದ ಯುವ ರೈತ ಮತ್ತು ಯುವ ರೈತ ಮಹಿಳೆ ಪ್ರಶಸ್ತಿಗಳನ್ನು ನೀಡಲಾಗುವುದು.

ನಿಗದಿತ ಅರ್ಜಿ ನಮೂನೆಗಳು ಆಯಾ ಜಿಲ್ಲೆಗಳ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಬೆಂಗಳೂರಿನ ಜಿಕೆವಿಕೆ ವಿಸ್ತರಣಾ ನಿರ್ದೇಶಕರ ಕಚೇರಿ ಹಾಗೂ ಹದೋನಹಳ್ಳಿ (ದೊಡ್ಡಬಳ್ಳಾಪುರ), ಚಂದೂರಾಯನಹಳ್ಳಿ (ಮಾಗಡಿ), ಕೋನೇಹಳ್ಳಿ (ತಿಪಟೂರು) ಮತ್ತು ಕುರುಬೂರು ಫಾರಂ (ಚಿಂತಾಮಣಿ) ಕೃಷಿ ವಿಜ್ಞಾನ ಕೇಂದ್ರಗಳಲ್ಲಿ ಲಭ್ಯವಿರುತ್ತವೆ ಹಾಗೂ ವಿಶ್ವವಿದ್ಯಾಲಯದ ವೆಬ್‍ಸೈಟ್ www.uasbangalore.edu.in ನಲ್ಲೂ ಅರ್ಜಿಗಳನ್ನು ಡೌನ್‍ಲೋಡ್ ಮಾಡಿಕೊಳ್ಳಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು 2026 ರ ಜುಲೈ 31 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ವಿವರಗಳಿಗಾಗಿ ವಿಸ್ತರಣಾ ನಿರ್ದೇಶಕರ ಕಚೇರಿ, ಕೃಷಿ ವಿಶ್ವವಿದ್ಯಾಲಯ, ಜಿಕೆವಿಕೆ, ಬೆಂಗಳೂರು-560065 ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 080-23330153 (ವಿಸ್ತರಣೆ: 401) ಮೂಲಕ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು