Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
2026-27ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಕೋರ್ಸ್ ಕಲಿಕೆಗಾಗಿ ವಿವಿಧ ಸಂಸ್ಥೆಗಳಲ್ಲಿನ 39 ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿಯ ಪ್ರಕಾರ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ.2,500 ರಂತೆ ಶಿಷ್ಯವೇತನ ನೀಡಲಾಗುವುದು ಹಾಗೂ ಪುರುಷ ಅಭ್ಯರ್ಥಿಗಳಿಗೆ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು.

Advertisement

ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷ್‍ನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು. ದಿನಾಂಕ: 01-07-2026 ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15 ರಿಂದ 23 ರ ವಯೋಮಿತಿಯಲ್ಲಿರಬೇಕು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 15 ರಿಂದ 25 ರ ವಯೋಮಿತಿಯಲ್ಲಿರಬೇಕು. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೋಢೀಕೃತ ಅಂಕಗಳು ಮೆರಿಟ್, ಲೆಕ್ಕಾಚಾರಕ್ಕೆ ಆಧಾರವಾಗಿರುತ್ತವೆ.

ಡಿಪ್ಲೋಮಾ ಕೋರ್ಸ್‍ಗಾಗಿ ಲಭ್ಯವಿರುವ ಸಂಸ್ಥೆಗಳು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಗದಗ-ಬೆಟಗೇರಿ (ಕರ್ನಾಟಕ) 22 ಅಭ್ಯರ್ಥಿಗಳು, ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಸೇಲಂ (ತಮಿಳುನಾಡು) 12 ಅಭ್ಯರ್ಥಿಗಳು, ಎಸ್.ಪಿ.ಕೆ.ಎಂ. ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ ವೆಂಕಟಗಿರಿ (ನೆಲ್ಲೂರು ಜಿಲ್ಲೆ, ಆಂಧ್ರಪ್ರದೇಶ)-03, ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಕಣ್ಣೂರು (ಕೇರಳಂ) - 02 ಅಭ್ಯರ್ಥಿಗಳು ಸೇರಿದಂತೆ ಒಟ್ಟು 39 ಅಭ್ಯರ್ಥಿಗಳಿಗೆ ಅವಕಾಶವಿದೆ.

ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾ ಡಿಪ್ಲೋಮಾ ಸಂಸ್ಥೆಗಳಲ್ಲಿ, ಕೋರ್ಸ್ ಪ್ರವೇಶ ಕುರಿತಂತೆ ಕೌನ್ಸಿಲಿಂಗ್‍ಗಾಗಿ ಕರೆಯಲಾಗುವುದು. ಆಸಕ್ತಿ ಇರುವ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ಮತ್ತು ಅರ್ಜಿಗಾಗಿ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ, ಮೊಬೈಲ್ ಸಂಖ್ಯೆ: 9916143619 ಅಥವಾ ಕಚೇರಿ ದೂರವಾಣಿ ಸಂಖ್ಯೆ:08372-259664 ಆಯಾ ಜಿಲ್ಲೆಯ ಜಂಟಿ/ಉಪ/ಸಹಾಯಕ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ ಅಥವಾ ಜಿಲ್ಲಾ ಪಂಚಾಯತ್, ಇವರುಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ.

ಅರ್ಜಿಗಳನ್ನು https://khtigadag.ac.in/AdmissionForm.pdf ವೆಬ್ ಸೈಟ್ ಮೂಲಕ ಡೌನ್‍ಲೋಡ್ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ "ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ-582102 ಇವರಿಗೆ 2026 ನೇ ಮೇ 30 ರೊಳಗೆ ಸಲ್ಲಿಸಬೇಕು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಆಯುಕ್ತರು ಹಾಗೂ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು