Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Education News

ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
        ಚಿತ್ರದುರ್ಗ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಮಾಧ್ಯಮ ಕ್ಷೇತ್ರದಲ್ಲಿ ಮತ್ತು ಮಾಧ್ಯಮ ಚಟುವಟಿಕೆಗಳ ಕಾರ್ಯನಿರ್ವಹಣೆ ಕುರಿತು 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

       ವಿಶೇಷ ಘಟಕ ಯೋಜನೆಯಡಿ ಹಾಗೂ ಗಿರಿಜನ ಉಪಯೋಜನೆಯಡಿ ನೀಡುವ 12 ತಿಂಗಳ ಅಪ್ರೆಂಟಿಸ್ ತರಬೇತಿಗಾಗಿ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತ್ತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ, ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು.

       ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು. ಅರ್ಜಿ ಲಕೋಟೆಯ ಮೇಲೆ ಕಡ್ಡಾಯವಾಗಿ ವಿಶೇಷ ಘಟಕ ಯೋಜನೆಯಡಿ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ನೀಡುವ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ' ಎಂದು ನಮೂದಿಸಬೇಕು.

ಆಯ್ಕೆಯಾದ ಅಭ್ಯರ್ಥಿಗಳು ಸಂದರ್ಶನದ ವೇಳೆ ಮೂಲ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸುವುದು. ಆಯ್ಕೆಯಾಗಿ ತರಬೇತಿಗೆ ಹಾಜರಾಗುವ ಸಂದರ್ಭದಲ್ಲಿ ಮೂಲ ದಾಖಲಾತಿಗಳನ್ನು ಜಿಲ್ಲಾ ವಾರ್ತಾಧಿಕಾರಿಗಳಿಗೆ ಸಲ್ಲಿಸಬೇಕು.

       ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ಅಭ್ಯರ್ಥಿಗಳು ಪದವಿಯ ಎಲ್ಲ ವರ್ಷಗಳ ಅಂಕಪಟ್ಟಿಗಳು, ಸ್ನಾತ್ತಕೋತ್ತರ ಪದವಿಯ ಎಲ್ಲ ಅಂಕಪಟ್ಟಿಯೊಂದಿಗೆ ಅರ್ಜಿಸಲ್ಲಿಸಬೇಕು.  ತರಬೇತಿಯ ಅವಧಿ ವೇಳೆ ಮಾಹೆಯಾನ 15,000/- ರೂ. ಗಳ ಸ್ಟೈಫೆಂಡ್ ನೀಡಲಾಗುವುದು.

ತರಬೇತಿಯು 2025 ಜನವರಿಯಿಂದ ಡಿಸೆಂಬರ್ ವರೆಗೆ 12 ತಿಂಗಳ ಅವಧಿಯದಾಗಿದ್ದು, ತಾತ್ಕಾಲಿಕವಾಗಿರುತ್ತದೆ. ತರಬೇತಿ ಮುಗಿದ ನಂತರ ಮುಂದುವರೆಸಲು ಅಥವಾ ಖಾಯಂಗೊಳಿಸಲು ಯಾವುದೇ ಅವಕಾಶ ಇರುವುದಿಲ್ಲ.  ತರಬೇತಿಯ ಅವಧಿಯಲ್ಲಿ ತರಬೇತಾರ್ಥಿಗಳು ಬೇರೆ ಉದ್ಯೋಗ ಮಾಡುವಂತಿಲ್ಲ.

ತರಬೇತಿ ಅವಧಿಯ ಮಧ್ಯದಲ್ಲಿ ಬಿಟ್ಟು ಹೋದರೆ, ಮೂಲ ದಾಖಲಾತಿಗಳನ್ನು ಅವಧಿಗೆ ಮುನ್ನ ಹಿಂದುರುಗಿಸುವುದಿಲ್ಲ.  ಒಮ್ಮೆ ಫಲಾನುಭವಿಯಾದವರನ್ನು ಯೋಜನೆಯಡಿ ಮತ್ತೊಂದು ಅವಧಿಗೆ ಆಯ್ಕೆ ಮಾಡಲು ಅವಕಾಶವಿರುವುದಿಲ್ಲ ಹಾಗೂ ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದ್ದಲ್ಲಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು.

       ಅರ್ಜಿ ಸಲ್ಲಿಸಲು ನವೆಂಬರ್ 08 ಕೊನೆಯ ದಿನವಾಗಿದ್ದು, ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ ಆವರಣ, ಚಿತ್ರದುರ್ಗ ಇವರನ್ನು ಸಂಪರ್ಕಿಸಬಹುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ತುಕಾರಾಂರಾವ್ ಬಿ.ವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು