Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿಜಿಟಲ್‌ ಜಾಹೀರಾತಿಗೆ ಮಾಧ್ಯಮ, ಏಜೆನ್ಸಿಗಳ ನೊಂದಣಿಗೆ ಅರ್ಜಿ ಆಹ್ವಾನ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸರ್ಕಾರದ ನೀತಿ ಮತ್ತು ಯೋಜನೆಗಳನ್ನು ಅಂತರ್ಜಾಲ ಬಳಸುವ ಜನರಿಗೆ ಡಿಜಿಟಲ್ಜಾಹೀರಾತುಗಳ ಮೂಲಕ ತಲುಪಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕರ್ನಾಟಕ ಡಿಜಿಟಲ್ಜಾಹೀರಾತು ಮಾರ್ಗಸೂಚಿ – 2024 ಅನ್ನು ಜಾರಿಗೆ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕರ್ನಾಟಕ ಸರ್ಕಾರವು ಡಿಜಿಟಲ್ಜಾಹೀರಾತಿಗಾಗಿ ಡಿಜಿಟಲ್ಜಾಹೀರಾತು ಏಜೆನ್ಸಿ ಮತ್ತು ಡಿಜಿಟಲ್ಮಾಧ್ಯಮಗಳನ್ನು ಎಂಪ್ಯಾನಲ್ಮೆಂಟ್ಮಾಡಿಕೊಳ್ಳುತ್ತಿದೆ. ದೇಶದಲ್ಲಿಯೇ ಮೊದಲ ಬಾರಿಗೆ ಡಿಜಿಟಲ್ಏಜೆನ್ಸಿ ಮತ್ತು ಮಾಧ್ಯಮಗಳನ್ನು ನೊಂದಾಯಿಸಿಕೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೆಲವು ವರ್ಷಗಳಿಂದ ಮಾಧ್ಯಮದ ವ್ಯಾಪ್ತಿ ಮತ್ತು ಸ್ವರೂಪ ಬದಲಾಗಿದೆ. ಅಂತರ್ಜಾಲ, ಖಾಸಗಿ ಕಂಪ್ಯೂಟರ್, ಸ್ಮಾರ್ಟ್ಟಿವಿ ಹಾಗೂ ಸ್ಮಾರ್ಟ್ಫೋನ್, ಸಾಮಾಜಿಕ ಜಾಲತಾಣಗಳ ಬಳಕೆ ಹೆಚ್ಚಾಗಿದೆ. ಸಾಂಪ್ರದಾಯಿಕ ಜಾಹೀರಾತುಗಳಿಗಿಂತ ಡಿಜಿಟಲ್ಜಾಹೀರಾತು ಹೆಚ್ಚು ಪ್ರಭಾವಶಾಲಿಯಾಗಿದೆ. ಜೊತೆಗೆ, ಹೆಚ್ಚು ವ್ಯಾಪ್ತಿ ಮತ್ತು ನಿರ್ದಿಷ್ಟ ಜನರನ್ನು ತಲುಪುತ್ತಿದೆ. ಹಿನ್ನೆಲೆಯಲ್ಲಿ ಸರ್ಕಾರದ ಕಾರ್ಯಕ್ರಮಗಳು ಮತ್ತು ನೀತಿಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಹಾಗೂ ಮಾಹಿತಿ, ಶಿಕ್ಷಣ ಮತ್ತು ಸಂವಹನ (ಐಇಸಿ) ಮಾದರಿಯಲ್ಲಿ ಡಿಜಿಟಲ್ಜಾಹೀರಾತು ನೀಡಲು ಕರ್ನಾಟಕ ಡಿಜಿಟಲ್ಜಾಹೀರಾತು ಮಾರ್ಗಸೂಚಿಯನ್ನು ಸರ್ಕಾರ ಹೊರತಂದಿದೆ ಎಂದು ಮುಖ್ಯಮಂತ್ರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೊಸ ಕರ್ನಾಟಕ ಡಿಜಿಟಲ್ಜಾಹೀರಾತು ಮಾರ್ಗಸೂಚಿ ಅನ್ವಯ ಎಲ್ಲಾ ಇಲಾಖೆಗಳು, ನಿಗಮಗಳು, ಪ್ರಾಧಿಕಾರಗಳು, ಮಂಡಳಿಗಳು, ಸ್ಥಳೀಯಾಡಳಿತಗಳು, ಪುರಸಭೆಗಳು, ನಗರ ಪಾಲಿಕೆಗಳು ಮೊದಲಾದವುಗಳಲ್ಲಿ ಡಿಜಿಟಲ್ಜಾಹೀರಾತುಗಳನ್ನು ಕಡ್ಡಾಯವಾಗಿ ಮಾರ್ಗಸೂಚಿಗೆ ಅನುಸಾರವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮೂಲಕ ಬಿಡುಗಡೆ / ಪೂರೈಸಬೇಕಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಕರ್ನಾಟಕ ಡಿಜಿಟಲ್ಜಾಹೀರಾತು ಮಾರ್ಗಸೂಚಿ ಅನ್ವಯ ವೀಡಿಯೊ ಸ್ಟ್ರೀಮಿಂಗ್ ಪ್ಲಾಟ್ಫಾರ್ಮ್ಗಳಾದ ಗೂಗಲ್(ಯೂಟ್ಯೂಬ್), ಮೆಟಾ (ಫೇಸ್ಬುಕ್, ಇನ್ಸ್ಟಾಗ್ರಾಂ, ವಾಟ್ಸಾಪ್ಬಿಸಿನೆಸ್, ವಾಟ್ಸಾಪ್ಚಾನಲ್), ಸರ್ಚ್ ಇಂಜಿನ್ಗಳಾದ ಗೂಗಲ್, ಬಿಂಗ್, ಸಾಮಾಜಿಕ ಜಾಲತಾಣಗಳಾದ ಎಕ್ಸ್( ಹಿಂದೆ ಟ್ವಿಟರ್), ಫೇಸ್ಬುಕ್, ಇನ್ಸ್ಟಾಗ್ರಾಂ, ಲಿಂಕ್ಡ್ಇನ್, ವಾಟ್ಸಾಪ್, ಸ್ನಾಪ್ಚಾಟ್, ಟೆಲಿಗ್ರಾಂ, ಒಟಿಟಿ ಪ್ಲಾಟ್ಫಾರ್ಮ್ಗಳಾದ ನೆಟ್ಫ್ಲಿಕ್ಸ್, ಅಮೇಜಾನ್ಫ್ರೈಮ್, ಡಿಸ್ನಿ ಹಾಟ್ಸ್ಟಾರ್ ಸೋನಿಲೈವ್, ಜಿಯೋ ಸಿನಿಮಾ, ಜೀ 5, ವೂಟ್, ಸನ್ನೆಕ್ಸ್ಟ್ಮತ್ತು ಟಾಕೀಸ್, ಫಿನ್ಟೆಕ್ಪ್ಲಾಟ್ಫಾರ್ಮ್ಗಳಾದ ಪೇಟಿಎಂ, ಪೋನ್ಪೇ ಮತ್ತು ಜಿಪೇ ಸೇರಿದಂತೆ ಇನ್ನಿತರ ಡಿಜಿಟಲ್ವೇದಿಕೆಗಳಡಿ ಜಾಹೀರಾತು ಅರ್ಹ ಏಜೆನ್ಸಿಗಳ ಮೂಲಕ ನೀಡಲು ಅವುಗಳನ್ನು ಎಂಪ್ಯಾನಲ್ಮಾಡಿಕೊಳ್ಳಲು ವಾರ್ತಾ ಇಲಾಖೆಯು ಉದ್ದೇಶಿಸಿದೆ.

ಹಾಗೆಯೇ, ಅಪ್ಲಿಕೇಶನ್ ಡೌನ್ಲೋಡ್ ಪ್ಲಾಟ್ಫಾರ್ಮ್ ಅಡಿಯಲ್ಲಿ ಬರುವ ವೀಡಿಯೊ, ಡಿಸ್ಪ್ಲೇ ಮತ್ತು ಸರ್ಚ್ಸೇರಿದಂತೆ ವಿವಿಧ ವೇದಿಕೆಗಳಡಿ ಜಾಹೀರಾತು ನೀಡಿಕೆ, ಗೂಗಲ್ಪ್ಲೇ ಸ್ಟೋರ್ಅಥವಾ ಆಪಲ್ಆಪ್ಸ್ಟೋರ್ನಲ್ಲಿ ಕನಿಷ್ಠ 1 ಲಕ್ಷ ಡೌನ್ಲೋಡ್ಹೊಂದಿರುವ ಯಾವುದೇ ಆಪ್ಮತ್ತು ಸುದ್ದಿಗಳನ್ನು ಪ್ರಸಾರ ಮಾಡುವ ಯಾವುದೇ ಡಿಜಿಟಲ್ ಘಟಕ-ವೆಬ್ ಅಪ್ಲಿಕೇಶನ್ ಅಥವಾ ಮೊಬೈಲ್ ಅಪ್ಲಿಕೇಶನ್ ಸೇರಿದಂತೆ ವಿವಿಧ ಮೂಲಗಳಿಂದ ಸುದ್ದಿಗಳನ್ನು ಸಂಗ್ರಹಿಸಿ ಜನರಿಗೆ ನೀಡುವ ವೇದಿಕೆಗಳು. ಇನ್ಶಾರ್ಟ್ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಫಾಲೋವರ್ಗಳನ್ನು ಹೊಂದಿರುವ ಇನ್ಫ್ಲ್ಯುಯೆನ್ಸರ್ಗಳು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನೋಂದಾಯಿಸಿಕೊಂಡು ಜಾಹೀರಾತು ಪಡೆಯಲು ಅರ್ಹತೆ ಹೊಂದುತ್ತವೆ.

ಡಿಜಿಟಲ್ ಜಾಹೀರಾತಿಗಾಗಿ ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯೊಂದಿಗೆ ಸಹಯೋಗ ಹೊಂದಲು ಬಯಸುವ ಏಜೆನ್ಸಿಗಳು ಭಾರತ ಸರ್ಕಾರದ ರಿಜಿಸ್ಟ್ರಾರ್ಆಫ್ಕಂಪನೀಸ್ನಲ್ಲಿ ನೋಂದಣಿಯಾದ ಪ್ರೈವೇಟ್ಲಿಮಿಟೆಡ್ಕಂಪನಿ, ಪಬ್ಲಿಕ್ಲಿಮಿಟೆಡ್ಕಂಪನಿ, ಪಾಲುದಾರಿಕೆ, ಲಿಮಿಟೆಡ್ಲಯಬಿಲಿಟಿ ಪಾಲುದಾರಿಕೆ ಹೊಂದಿರಬೇಕು. ಎಂಪ್ಯಾನೆಲಿಂಗ್ಸಮಯದಲ್ಲಿ ಕನಿಷ್ಠ ಎರಡು ವರ್ಷವಾಗಿರಬೇಕು. ಜಿಎಸ್ಟಿ ನೋಂದಣಿ ಇರಬೇಕು. ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿರಬೇಕು ಅಥವಾ ಕರ್ನಾಟಕದಲ್ಲಿ ಪೂರ್ಣ ಪ್ರಮಾಣದ ಕಚೇರಿ ಇರಬೇಕು. ಕನ್ನಡ ಮತ್ತು ಇಂಗ್ಲಿಷ್ನಲ್ಲಿ ಪ್ರಾವೀಣ್ಯತೆ ಇರಬೇಕು.

ಡಿಜಿಟಲ್ ಜಾಹೀರಾತು ಮತ್ತು ಸಾಮಾಜಿಕ ಜಾಲತಾಣದ ಬಗ್ಗೆ ಆಳವಾದ ಜ್ಞಾನವಿರಬೇಕು. ಸರ್ಕಾರಗಳಿಗೆ ಪ್ಲಾಟ್ಫಾರ್ಮ್ಗಳಲ್ಲಿ ಡಿಜಿಟಲ್ ಜಾಹೀರಾತು ನೀಡಲು ಗೂಗಲ್ಅಥವಾ ಮೆಟಾ ಜೊತೆಗೆ ಮಾನ್ಯವಾದ ಒಪ್ಪಂದ/ಒಡಂಬಡಿಕೆ ಹೊಂದಿರಬೇಕು. ತಮ್ಮ ಪ್ಲಾಟ್ಫಾರ್ಮ್ಗಳಲ್ಲಿ ಸರ್ಕಾರದ ಜಾಹೀರಾತು ನೀಡಲು ಗೂಗಲ್ಅಥವಾ ಮೆಟಾದಿಂದ ಅನುಮತಿ ಪಡೆದುಕೊಂಡಿರಬೇಕು ಎಂದು ಷರತ್ತುಗಳನ್ನು ನಿಗದಿ ಪಡಿಸಿದೆ.

ಡಿಜಿಟಲ್ಮಾಧ್ಯಮ ಘಟಕಕ್ಕೆ ಅರ್ಹತೆ-
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯೊಂದಿಗೆ ಡಿಜಿಟಲ್ಜಾಹೀರಾತು ನೀಡಲು ಎಂಪ್ಯಾನೆಲ್ಮೆಂಟ್ಗಾಗಿ ಡಿಜಿಟಲ್ಮಾಧ್ಯಮ ಘಟಕವು ಭಾರತದ ಸರ್ಕಾರದ ರಿಜಿಸ್ಟ್ರಾರ್ಆಫ್ಕಂಪನೀಸ್ನಲ್ಲಿ ನೋಂದಣಿಯಾದ ಕಾನೂನುಬದ್ಧ ಸಂಘಟಿತ ಘಟಕವಾಗಿರಬೇಕು. ಕನಿಷ್ಠ ಒಂದು ವರ್ಷ ಕಾಲ ಯಾವುದೇ ಸಮಯದ ಅಂತರವಿಲ್ಲದೆ ನಿರಂತರವಾಗಿ ಕಂಟೆಂಟ್ಪ್ರಕಟಿಸಿರಬೇಕು. ಜಿಎಸ್ಟಿ ನೋಂದಣಿ ಇರಬೇಕು.

ರಾಜ್ಯ ಅಥವಾ ಕೇಂದ್ರ ಸರ್ಕಾರ ಅಥವಾ ಅದರ ಏಜೆನ್ಸಿಗಳ ಎಲ್ಲ ಶಾಸನಬದ್ಧ ಅವಶ್ಯಕತೆಗಳನ್ನು ಅನುಸರಿಸಲು ವಿಫಲವಾದರೆ ಎಂಪ್ಯಾನೆಲ್ಮೆಂಟ್ ರದ್ದುಗೊಳಿಸಲಾಗುತ್ತದೆ. ಭಾರತದ ಕಾನೂನನ್ನು ಉಲ್ಲಂಘಿಸುವ ಪದ, ದೃಶ್ಯಗಳು, ಆಡಿಯೋ ಅಥವಾ ಅಂತಹ ಯಾವುದೇ ವಿಷಯವನ್ನು ಪ್ರಕಟಿಸಿರಬಾರದು ಎಂಬ ಷರತ್ತುಗಳನ್ನು ವಿಧಿಸಲಾಗಿದೆ.
ಮೇಲ್ಕಂಡ ಅರ್ಹತೆಗಳನ್ನು ಹೊಂದಿರುವ ಡಿಜಿಟಲ್ಮಾಧ್ಯಮ ಘಟಕಗಳು ಮತ್ತು ಡಿಜಿಟಲ್ಜಾಹೀರಾತು ಏಜೆನ್ಸಿಗಳು sevasindhu.karnataka.gov.in ಗೆ ಭೇಟಿ ನೀಡಿ, ನಿಗದಿ ಪಡಿಸಿರುವ ದಾಖಲಾತಿಗಳೊಂದಿಗೆ ಶುಲ್ಕ ಪಾವತಿಸಿ, ಮೇ 15 ಒಳಗೆ ಅರ್ಜಿ ಸಲ್ಲಿಸಲು ಕೋರಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ