Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ವಿವಿಧ ವಿಭಾಗಗಳ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಆಹ್ವಾನ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು
ನೃಪತುಂಗ ವಿಶ್ವವಿದ್ಯಾಲಯದಲ್ಲಿ ಆಂಗ್ಲ ಸಹಾಯಕ ಪ್ರಾಧ್ಯಾಪಕರು, ಹಿಂದಿ  ಸಹಾಯಕ ಪ್ರಾಧ್ಯಾಪಕರು, ಸಂಸ್ಕೃತ ಸಹಾಯಕ ಪ್ರಾಧ್ಯಾಪಕರು, ತೆಲುಗು ಸಹಾಯಕ ಪ್ರಾಧ್ಯಾಪಕರು ಹಾಗೂ ತಮಿಳು ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು 179 ದಿವಸಗಳ ಅವಧಿಗೆ ಮೀರದಂತೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಆಯಾ ಭಾಷೆಯ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಆಯಾ ಭಾಷೆಯಲ್ಲಿ ಸ್ನಾತಕೋತ್ತರ ಪದವಿಯೊಂದಿಗೆ ಕನಿಷ್ಟ ಶೇ. 50 ಅಂಕಗಳನ್ನು ಗಳಿಸಿರಬೇಕು. ಎನ್‍ಇಟಿ ಅಥವಾ ಕೆಸೆಟ್ ಅರ್ಹತಾ ಪರೀಕ್ಷೆ ಅಥವಾ ಪಿಹೆಚ್‍ಡಿ ಅಥವಾ ಯುಜಿಸಿ ನಿಯಮಾನುಸಾರ ವಿದ್ಯಾರ್ಹತೆ ಹೊಂದಿರಬೇಕು. ಮಾಸಿಕ ವೇತನ ರೂ. 35000/- ಮಾತ್ರ ನೀಡಲಾಗುವುದು.

ನೇಮಕಾತಿ ಪಡೆಯಲು ಬಯಸುವ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಗೆ ಸಂಬಂಧಪಟ್ಟ ಎಲ್ಲಾ ಮೂಲ ದಾಖಲೆಗಳು ಹಾಗೂ ಮೂಲದಾಖಲೆಗಳ ಎರಡು ಜೆರಾಕ್ಸ್ ಪ್ರತಿಗಳು ಮತ್ತು ಎರಡು ಭಾವಚಿತ್ರಗಳನ್ನು ಅರ್ಜಿ ನಮೂನೆಯೊಂದಿಗೆ ಅಕ್ಟೋಬರ್ 4 ರಂದು ಬೆಳಿಗ್ಗೆ 11 ಗಂಟೆಗೆ ವಿಶ್ವವಿದ್ಯಾಲಯದ ಕುಲಪತಿಗಳ ಕಚೇರಿಗೆ ಸಂದರ್ಶನಕ್ಕೆ ಹಾಜರಾಗುವುದು. ಯಾವುದೇ ಸಂದರ್ಭದಲ್ಲಿ ಅರ್ಜಿಯನ್ನು ಮುಂಗಡವಾಗಿ ಕಳುಹಿಸಬಾರದು.

ಸಂದರ್ಶನಕ್ಕೆ ಬರುವ ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗುವುದು. ಯಾವುದೇ ತರಹದ ಭತ್ಯೆ ನೀಡಲಾಗುವುದಿಲ್ಲ.

ನೇಮಕಾತಿಯು ತಾತ್ಕಾಲಿಕವಾಗಿರುವುದರಿಂದ ಯಾವುದೇ ಸಮಯದಲ್ಲಿ ಯಾವುದೇ ಕಾರಣ ತಿಳಿಸದೇ ಕರ್ತವ್ಯದಿಂದ ತೆಗೆದು ಹಾಕುವ ಅಧಿಕಾರ ನೃಪತುಂಗ ವಿಶ್ವವಿದ್ಯಾಲಯಕ್ಕೆ ಇರುವುದು ಹಾಗೂ ನೇರ ನೇಮಕಾತಿಗಾಗಿ ಯಾವುದೇ ತರಹದ ಹಕ್ಕಿಗೆ ಒಳಪಟ್ಟಿರುವುದಿಲ್ಲ ಎಂದು ನೃಪತುಂಗ ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಖ್ಯಮಂತ್ರಿಯವರ ತಾಂತ್ರಿಕ ಸಲಹೆಗಾರರಾಗಿ ನಿವೃತ್ತ ಕಾರ್ಯದರ್ಶಿ ಡಾ. ಕೆ. ಜೈಪ್ರಕಾಶ್ ನೇಮಕಜೆಎನ್‌ಯು ಪ್ರೊಫೆಸರ್ ಹಾಗೂ ಕಾಂಗ್ರೆಸ್ ಸಂಸದರಿಂದ ಲೈಂಗಿಕ ಕಿರುಕುಳ ಆರೋಪ, ಸೇವೆಯಿಂದ ವಜಾಆರ್‌ಬಿಐ ಬಿಗ್ ಶಾಕ್: ರೆಪೋ ದರ ಏರಿಕೆಯಿಂದ ಸಾಲಗಾರರಿಗೆ ಹೆಚ್ಚಳವಾದ ಇಎಂಐ ಬರೆ!ಎಸ್‌ಐಆರ್ ರದ್ದುಪಡಿಸುವಂತೆ ಜನತಾ ನ್ಯಾಯಾಲಯ ಸಮಾವೇಶ: ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ10 ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ಸುಪಾರಿ - ಶಾಸಕ ಗಣಿಗ ರವಿ ಸ್ಫೋಟಕ ಪೆನ್‌ಡ್ರೈವ್ ಬಾಂಬ್!ಸಚಿವರಿಗೆ ಬಲೆ ಬೀಳಿಸಲು ಯತ್ನ: ಸಿಎಂ ಎಚ್ಚರಿಕೆ ನೀಡಿದ್ದಾರೆ ಎಂದ ಸತೀಶ್ ಜಾರಕಿಹೊಳಿಕೇಂದ್ರದೊಂದಿಗೆ ಜಿಎಸ್‌ಟಿ ಸಭೆ: ರಾಜ್ಯದ ಬಾಕಿ ಹಣದ ಕುರಿತು 'ಸಿಹಿ ಸುದ್ದಿ' ನೀಡಿದ ಸಿಎಂ ಡಿ.ಕೆ ಶಿವಕುಮಾರ್ ಸುಳಿವು!ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಮೊಬೈಲ್ ಪತ್ತೆ ಪ್ರಕರಣ: ಹಿಂಡಲಗಾ ಜೈಲಿಗೆ ಸ್ಥಳಾಂತರಪ್ರತಿಭಟನೆ ಹೆಸರಲ್ಲಿ ಎಲ್ಲವನ್ನೂ ಬಂದ್ ಮಾಡಲು ಆಗದು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ದಾವಣಗೆರೆಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ವಕೀಲರ ಪಟ್ಟು: ಮಧ್ಯಕರ್ನಾಟಕದಲ್ಲಿ ತೀವ್ರಗೊಂಡ ಹೋರಾಟ