ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡಿಗರ bana)ವತಿಯಿಂದ ಎಸ್. ಎಸ್. ಎಲ್. ಸಿ. ಹಾಗೂ ದ್ವಿತೀಯ ಪಿ. ಯು. ಸಿ. ಪರೀಕ್ಷೆಗಳಲ್ಲಿ ಶೇ 95ಕ್ಕೂ ಅಧಿಕ ಪಡೆದು ತೇರ್ಗಡೆಯಾಗಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರನ್ನು ಪ್ರಶಂಸಿಸಿ ಪ್ರೋತ್ಸಾಹಿಸುವ ಸಲುವಾಗಿ ಪ್ರತಿಭಾ ಪುರಸ್ಕಾರ ವನ್ನು ಹಮ್ಮಿಕೊಳ್ಳಲಾಗಿದೆ.
ಅದಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ತಮ್ಮ ಹೆಸರು, ಅಂಕಪಟ್ಟಿ ಜೆರಾಕ್ಸ್ ಪ್ರತಿ, ಇತ್ತೀಚಿನ ಭಾವಚಿತ್ರ, ದೂರವಾಣಿ ಸಂಖ್ಯೆ ಮುಂತಾದ ವಿವರಗಳನ್ನೊಳಗೊಂಡ ಅರ್ಜಿಗಳನ್ನು ಶ್ರೀ ಬಾಲಾಜಿ ಕನ್ಸ್ ಟ್ರಕ್ಷನ್, ನೆಲಮಾಳಿಗೆ, ರಿಲಯನ್ಸ್ ಡಿಜಿಟಲ್ ಕಟ್ಟಡ, ಡಾ. ಅಂಬೇಡ್ಕರ್ ರಸ್ತೆ, ದೊಡ್ಡಬಳ್ಳಾಪುರ ಇವರ ವಿಳಾಸಕ್ಕೆ ದಿ. 10.7.2026 ರೊಳಗಾಗಿ ತಲುಪಿಸಲು ಕೋರಿದೆ.
ಹೆಚ್ಚಿನ ವಿವರಗಳಿಗೆ ಬಿ. ಎಸ್. ಚಂದ್ರಶೇಖರ್ (0960302558) ರಂಜಿತ್ (7899533012) ಉದಯ್ (8105996976) ತಾಯೇಗೌಡ (9741378966) ರನ್ನು ಸಂಪರ್ಕಿಸಲು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.



