Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರತಿಷ್ಠಿತ ಶಾಲೆ ಪ್ರವೇಶ: ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ಪರಿಶಿಷ್ಟ ವರ್ಗದ (ಎಸ್.ಟಿ) ಪ್ರತಿಭಾವಂತ ವಿದ್ಯಾರ್ಥಿಗಳನ್ನು ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ದಾಖಲಿಸಲು, ಪರಿಶಿಷ್ಟ ವರ್ಗಗಳ ಇಲಾಖೆ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಮೇ 04 ಅರ್ಜಿ ಸಲ್ಲಿಸಲು ಕೊನೆಯ ದಿನ.

ಅರ್ಹ ವಿದ್ಯಾರ್ಥಿಗಳು ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ/ತಾಲ್ಲೂಕು ಪರಿಶಿಷ್ಟ ವರ್ಗಗಳ ಕಚೇರಿಗಳಿಂದ ಅರ್ಜಿಗಳನ್ನು ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಆಯಾ ತಾಲ್ಲೂಕು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ/ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಮೇ 04 ಸಂಜೆ 5 ಗಂಟೆಯಾಗಿರುತ್ತದೆ. ಅಪೂರ್ಣಗೊಂಡ ಹಾಗೂ ಅವಧಿ ಮೀರಿ ಬಂದ ಅರ್ಜಿಗಳನ್ನು ಕಡ್ಡಾಯವಾಗಿ ತಿರಸ್ಕರಿಸಲಾಗುವುದು.


ಷರತ್ತುಗಳು: 2026-27ನೇ ಸಾಲಿನ ಪ್ರತಿಷ್ಠಿತ ಶಾಲೆಗಳಿಗೆ ಪ್ರತಿಭಾವಂತ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳನ್ನು ಉಚಿತವಾಗಿ ಅರ್ಹತಾ ಪರೀಕ್ಷಾ ಮೂಲಕ ಆಯ್ಕೆ ಮಾಡಲಾಗುವುದು. 5ನೇ ತರಗತಿಯಲ್ಲಿ ತೇರ್ಗಡೆಯಾಗಿ ಶೇ.60ಕ್ಕಿಂತ ಹೆಚ್ಚು ಅಂಕಗಳಿಸಿದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಆಯ್ಕೆಗೊಂಡ ವಿದ್ಯಾರ್ಥಿಗಳನ್ನು  ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ ದಾಖಲು ಮಾಡಲಾಗುವುದು. 6ನೇ ತರಗತಿಗೆ ಮಾತ್ರ ಜಿಲ್ಲೆಗೆ  ನಿಗಧಿ ಪಡಿಸಿರುವ ಗುರಿಗೆ ಅನುಗುಣವಾಗಿ ನಿಯಮಾನುಸಾರ ಪ್ರವೇಶ ಅವಕಾಶವನ್ನು ನೀಡಲಾಗುವುದು.

6ನೇ ತರಗತಿಗೆ ಮಾತ್ರ ಜಿಲ್ಲೆಗೆ ನಿಗಧಿಪಡಿಸಿರುವ ಗುರಿಗೆ ಅನುಗುಣವಾಗಿ ನಿಯಮಾನುಸಾರ ಪ್ರವೇಶ ಅವಕಾಶ ನೀಡಲಾಗುವುದು.  ವಿದ್ಯಾರ್ಥಿಯು ಪರಿಶಷ್ಟ ಪಂಗಡ ಸೇರಿದ್ದು, ಕುಟುಂಬದ ವಾರ್ಷಿಕ ಆದಾಯ ರೂ.2 ಲಕ್ಷ ಮೀರಿರಬಾರದು. ಜಾತಿ ಆದಾಯ ಪ್ರಮಾಣ ಪತ್ರ ಹಾಗೂ ದೃಢೀಕೃತ ಅಂಕಪಟ್ಟಿಯನ್ನು ಅರ್ಜಿ ಜೊತೆ ಕಡ್ಡಾಯವಾಗಿ ಸಲ್ಲಿಸಬೇಕು. ಮುಖ್ಯೋಪಾಧ್ಯಾಯರಿಂದ ಕಡ್ಡಾಯವಾಗಿ ಶೇಕಡವಾರು  ನಮೂದಿಸಿದ ಅಂಕಪಟ್ಟಿಯನ್ನು  ಮಾತ್ರ  ಪರಿಗಣಿಸಲಾಗುವುದು. ಅಂಕಪಟ್ಟಿಯಲ್ಲಿ ಗ್ರೇಡ್‍ಅನ್ನು ನಮೂದಿಸಿದ್ದಲ್ಲಿ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.

ವಿದ್ಯಾರ್ಥಿಗಳ ಶುಲ್ಕ ಮತ್ತು ನಿರ್ವಹಣಾ ವೆಚ್ಚವನ್ನು  ಸರ್ಕಾರ ನಿಗಧಿ ಪಡಿಸಿದ ದರದಲ್ಲಿ ನೀಡಲಾಗುವುದು. ವಿದ್ಯಾರ್ಥಿ ಜಿಲ್ಲೆ ವ್ಯಾಪ್ತಿಗೆ ಒಳಪಟ್ಟಿರಬೇಕು. ಪೋಷಕರು ಒಂದು ಬಾರಿ ಶಾಲೆಯನ್ನು ಆಯ್ಕೆಗೊಳಿಸಿದ  ಮೇಲೆ ಅದೇ ಶಾಲೆಗೆ ದಾಖಲಾತಿ  ಮಾಡಲಾಗುವುದು ಯಾವುದೇ ಕಾರಣಕ್ಕೂ ಶಾಲೆಯನ್ನು ಬದಲಾಯಿಸುವುದಿಲ್ಲ.

ಆಯ್ಕೆಯಾದ ವಿದ್ಯಾರ್ಥಿಯು ಆಯ್ಕೆಯಾದ ಶಾಲೆಯಲ್ಲಿ ಯಾವ ಪಠ್ಯಕ್ರಮ ಇರುತ್ತದೆಯೋ ಅದೇ ಪಠ್ಯಕ್ರಮದಲ್ಲಿ ವಿದ್ಯಾಭ್ಯಾಸ ಮಾಡಲಾಗುವುದು. ಈ ಷರತ್ತಿನಲ್ಲಿ ಯಾವುದೇ ಬದಲಾವಣೆ ಮಾಡಲಾಗುವುದಿಲ್ಲ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ