Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ: ಪ್ರವೇಶಾತಿಗೆ ಅರ್ಜಿ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2025-26ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ಪ್ರಥಮ ವರ್ಷದ ಬಿ., ಬಿ.ಕಾಂ, ಬಿ.ಎಸ್ಸಿ, ಬಿ.ಲಿಬ್, ಬಿ.ಸಿ., ಬಿ.ಬಿ., ಬಿ.ಎಸ್.ಡಬ್ಲ್ಯೂ, ಎಂ., ಎಂ.ಕಾಂ, ಎಂ., ಎಂ.ಸಿ.ಜೆ, ಎಂ.ಲಿಬ್, ಎಂ.ಬಿ., ಎಂ.ಸಿ., ಎಂ.ಎಸ್.ಡಬ್ಲ್ಯೂ ಸ್ನಾತಕ, ಸ್ನಾತಕೋತ್ತರ ಪದವಿಗಳಿಗೆ ಮತ್ತು ಪಿಜಿ ಡಿಪ್ಲೋಮಾ, ಡಿಪ್ಲೋಮಾ ಸರ್ಟಿಫಿಕೇಟ್ ಕೋರ್ಸ್‍ಗಳ ಪ್ರವೇಶಾತಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಪ್ರವೇಶಾತಿ ಪ್ರಕ್ರಿಯೆಯು ಈಗಾಗಲೇ 2025ರ ಜುಲೈ 01 ರಿಂದ ಪ್ರಾರಂಭವಾಗಿರುತ್ತದೆ.


ಆಸಕ್ತ ವಿದ್ಯಾರ್ಥಿಗಳು ವಿವಿಧ ಪದವಿ, ಕೋರ್ಸ್‍ಗಳ ಪ್ರವೇಶಾತಿಗೆ ಆನ್‍ಲೈನ್ ಅಡ್ಮಿಷನ್ ಪೋರ್ಟ್‍ಲ್ https://ksouportal.com/views/studentHome.aspx     ನಲ್ಲಿ ಆನ್‍ಲೈನ್ ಮೂಲಕ ಪ್ರವೇಶಾತಿಯ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಿ, ತದನಂತರ ಚಿತ್ರದುರ್ಗ ಪ್ರಾದೇಶಿಕ ಕೇಂದ್ರ ಕಚೇರಿಯನ್ನು ಖುದ್ದಾಗಿ ಭೇಟಿ ನೀಡಿ ಆನ್‍ಲೈನ್ ಮುಖಾಂತರ ಪ್ರವೇಶಾತಿ ಶುಲ್ಕವನ್ನು ಪಾವತಿಸಿ, ಪ್ರವೇಶಾತಿ ಪಡೆಯಬಹುದಾಗಿದೆ.


ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ಅಭ್ಯರ್ಥಿಗಳಿಗೆ, ಡಿಫೆನ್ಸ್ ಹಾಗೂ ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ, ಆಟೋ, ಕ್ಯಾಬ್ ಚಾಲಕರು ಮತ್ತು ಅವರ ಹೆಂಡತಿ ಮತ್ತು ಇಬ್ಬರು ಮಕ್ಕಳಿಗೆ, ಕೆಎಸ್‍ಆರ್‍ಟಿಸಿ ಸಾರಿಗೆ ಸಂಸ್ಥೆಯ ಎಲ್ಲಾ ನೌಕರರಿಗೆ ಬೋಧನಾ ಶುಲ್ಕದಲ್ಲಿ ರಿಯಾಯಿತಿ ಇರುತ್ತದೆ.

ಅಲ್ಲದೇ ಕೋವಿಡ್-19 ನಿಂದ ಮೃತಪಟ್ಟವರ ಮಕ್ಕಳಿಗೆ, ತೃತೀಯ ಲಿಂಗಿಗಳಿಗೆ, ಪೂರ್ಣ ಪ್ರಮಾಣದ ದೃಷ್ಠಿಹೀನ ವಿದ್ಯಾರ್ಥಿಗಳಿಗೆ (ಬಿ.ಇಡಿ, ಎಂ.ಬಿ.ಎ ಕೋರ್ಸುಗಳನ್ನು ಹೊರತುಪಡಿಸಿ) ಪೂರ್ಣ ಶುಲ್ಕದ ವಿನಾಯಿತಿ ಇರುತ್ತದೆ. ಅಲ್ಲದೇ ಎರಡು ಶೈಕ್ಷಣಿಕ ಕೋರ್ಸ್‍ಗಳನ್ನು ಏಕಕಾಲದಲ್ಲಿ ಒಂದು ಭೌತಿಕ ಕ್ರಮದಲ್ಲಿ ಮತ್ತೊಂದು ದೂರಶಿಕ್ಷಣ ಕ್ರಮದಲ್ಲಿ ಓದಲು ಅವಕಾಶವಿರುತ್ತದೆ.


ಆಸಕ್ತ ವಿದ್ಯಾರ್ಥಿಗಳು ಪ್ರವೇಶಾತಿಯ ಅಂತಿಮ ದಿನಾಂಕದೊಳಗೆ ಹೆಚ್ಚಿನ ಸಂಖ್ಯೆಯಲ್ಲಿ ಇದರ ಸದುಪಯೋಗ ಪಡೆದುಕೊಳ್ಳಬಹುದು.


 ಹೆಚ್ಚಿನ ಮಾಹಿತಿಗಾಗಿ    ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‍ಸೈಟ್ www.ksoumysuru.ac.in ವೀಕ್ಷಿಸುವುದು ಅಥವಾ ಮೊಬೈಲ್ ಸಂಖ್ಯೆ 9738014893, 7204352581, 9008905457, 8310111244, 9972499704, 8277205613 ಗೆ ಕರೆ ಮಾಡವುದು ಅಥವಾ ಖುದ್ದಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಚಿತ್ರದುರ್ಗ ಪ್ರಾದೇಶಿಕ ಕೇಂದ್ರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಚಿತ್ರದುರ್ಗ ಪ್ರಾದೇಶಿಕ ನಿರ್ದೇಶಕಿ ಬಿ.ಆರ್.ರಾಧಿಕಾ ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ