Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೋಂದಣಿ ಪ್ರಮಾಣ ಪತ್ರ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಸೇವಾಸಿಂಧು ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ, ನೋಂದಣಿ ಪ್ರಮಾಣ ಪತ್ರ ಪಡೆಬೇಕು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳಿಗೆ ಹಿಂದೆ ಮ್ಯಾನುಯಲ್ ಆಗಿ ವಿತರಿಸಲಾಗುತ್ತಿದ್ದ ನೋಂದಣಿ ಪ್ರಮಾಣ ಪತ್ರಗಳನ್ನು ರದ್ದುಗೊಳಿಸಿ ಆದೇಶಿಸಲಾಗಿದೆ.

ವಿದ್ಯುನ್ಮಾನ ನಾಗರಿಕ ಸೇವಾ ವಿತರಣ ನಿರ್ದೇಶನಾಲಯ ಆಡಳಿತ ಇಲಾಖೆಯ ಸೇವಾ ಸಿಂಧು ಯೋಜನೆಯಡಿ ನೋಂದಣಿ ಮಾಡಿಸಲು ಆನ್ಲೈನ್ ತಂತ್ರಾಂಶ ಅಭಿವೃದ್ದಿ ಪಡಿಸಿದ್ದು, ತಂತ್ರಾಂಶ ಬಳಸಿ ಸ್ವಯಂ ಸೇವಾ ಸಂಸ್ಥೆಗಳಿಗೆ ನೋಂದಣಿ, ನವೀಕರಣ ಪ್ರಮಾಣ ಪತ್ರ ವಿತರಿಸಲಾಗುವುದು.

ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ  ಹಾಗೂ ಹಿರಿಯ ನಾಗರಿಕರ ವೃದ್ದಾಶ್ರಮಗಳನ್ನು ನಡೆಸುತ್ತಿರುವ ಎಲ್ಲಾ ಅನುದಾನಿತ/ಅನುದಾನರಹಿತ ಸ್ವಯಂ ಸೇವಾ ಸಂಸ್ಥೆಗಳು ಆನ್ಲೈನ್ ಮೂಲಕ https://sevasindhu.karnataka.gov.in ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಿ ನೋಂದಣೆ ಪ್ರಮಾಣ ಪತ್ರ ಪಡೆಯಬೇಕೆಂದು ಮೂಲಕ ಕೋರಿದೆ.

      ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ. ಜಿಲ್ಲಾ ಬಾಲಭವನ ಆವರಣ, ಸ್ಟೇಡಿಯಂ ಹತ್ತಿರ, ಚಿತ್ರದುರ್ಗ ದೂರವಾಣಿ ಸಂಖ್ಯೆ:08194-235284 ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.

 

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ