Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಂಗನವಾಡಿ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನೆ ಕಚೇರಿ ವ್ಯಾಪ್ತಿಯಲ್ಲಿ ಖಾಲಿ ಇರುವ 29 ಅಂಗನವಾಡಿ ಕಾರ್ಯಕರ್ತೆ ಹಾಗೂ 228 ಅಂಗನವಾಡಿ ಸಹಾಯಕಿ ಹುದ್ದೆಗಳು ಸೇರಿ ಒಟ್ಟು 257 ಹುದ್ದೆಗಳನ್ನು ಗೌರವ ಸೇವೆಯ ಆಧಾರದಲ್ಲಿ ನೇಮಕಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ದ್ವೀತಿಯ ಪಿಯುಸಿ ಹಾಗೂ ಸಹಾಯಕಿ ಹುದ್ದೆಗೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. 19 ರಿಂದ 35 ವರ್ಷದೊಳಗಿನ ಸ್ಥಳೀಯ ಮಹಿಳಾ ಅಥವಾ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.


ಭರಮಸಾಗರ ಶಿಶು ಅಭಿವೃದ್ದಿ ಯೋಜನೆ ವ್ಯಾಪ್ತಿಯಲ್ಲಿ 7 ಕಾರ್ಯಕರ್ತೆ, 23 ಸಹಾಯಕಿ ಸೇರಿ 30 ಹುದ್ದೆಗಳು, ಚಿತ್ರದುರ್ಗದಲ್ಲಿ 2 ಕಾರ್ಯಕರ್ತೆ, 9 ಸಹಾಯಕಿ ಸೇರಿ 11 ಹುದ್ದೆಗಳು, ಚಳ್ಳಕೆರೆಯಲ್ಲಿ 2 ಕಾರ್ಯಕರ್ತೆ, 24 ಸಹಾಯಕಿ ಸೇರಿ 26 ಹುದ್ದೆಗಳು, ಹಿರಿಯೂರಿನಲ್ಲಿ 2 ಕಾರ್ಯಕರ್ತೆ, 53 ಸಹಾಯಕಿ ಸೇರಿ 55 ಹುದ್ದೆಗಳು,

ಹೊಳಲ್ಕೆರೆಯಲ್ಲಿ 4 ಕಾರ್ಯಕರ್ತೆ, 45 ಸಹಾಯಕಿ ಸೇರಿ 49 ಹುದ್ದೆಗಳು, ಹೊಸದುರ್ಗದಲ್ಲಿ 11 ಕಾರ್ಯಕರ್ತೆ, 53 ಸಹಾಯಕಿ ಸೇರಿ 64 ಹುದ್ದೆಗಳು, ಮೊಳಕಾಲ್ಮೂರು ನಲ್ಲಿ 1 ಕಾರ್ಯಕರ್ತೆ, 21 ಸಹಾಯಕಿ ಸೇರಿ 22 ಹುದ್ದೆಗಳ ನೇಮಕಕ್ಕೆ ಪ್ರಕಟಣೆ ಹೊರಡಿಸಲಾಗಿದೆ.


ಸೆಪ್ಟೆಂಬರ್ 5 ಸಂಜೆ 5:30ರ ಒಳಗಾಗಿ ವೆಬ್‌ಸೈಟ್  https://karnemakaone.kar.inc.in/abcd/ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಬಳಕೆದಾರರ ಕೈಪಿಡಿಯಲ್ಲಿನ ಸೂಚನೆಗಳನ್ನು ಸ್ಪಷ್ಟಾವಾಗಿ ಓದಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯಕುಮಾರ್ ತಿಳಿಸಿದ್ದಾರೆ.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ