Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಅಧ್ಯಕ್ಷ, ಉಪಾಧ್ಯಕ್ಷರ ನೇಮಕ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ಬಂದಿದ್ದು ರಾಜ್ಯ ಸರ್ಕಾರ, ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಅಧ್ಯಕ್ಷರು, ಉಪಾಧ್ಯಕ್ಷ ಹಾಗೂ ಪದನಿಮಿತ್ತ ಸದಸ್ಯರನ್ನು ನೇಮಿಸಿ ಆದೇಶಿಸಿದೆ.


ಗ್ರೇಟರ್​ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧ್ಯಕ್ಷರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಾಧ್ಯಕ್ಷರಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ನೇಮಕ ಮಾಡಲಾಗಿದೆ.
ಗ್ರೇಟರ್​ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಬೆಂಗಳೂರಿನ ಸಚಿವರು
, ಸಂಸದರು, ಶಾಸಕರು ಹಾಗೂ ಎಂಎಲ್​ ಸಿಗಳು ಪದನಿಮಿತ್ತ ಸದಸ್ಯರನ್ನಾಗಿ ನೇಮಿಸಲಾಗಿದೆ.


ಮುಖ್ಯವಾಗಿ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಅವರನ್ನೂ ಸಹ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸದಸ್ಯರನ್ನಾಗಿ ಮಾಡಲಾಗಿರುವುದು ವಿಶೇಷವಾಗಿದೆ.
ಜಿಬಿಎ ವ್ಯಾಪ್ತಿಯ
5 ಪಾಲಿಕೆಗಳ ಮೇಯರ್, ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯ ಕಾರ್ಯದರ್ಶಿ ಮತ್ತು ಪದನಿಮಿತ್ತ ಸದಸ್ಯರು ಸೇರಿ ಒಟ್ಟು 75 ಜನರನ್ನು ನೇಮಕ ಮಾಡಲಾಗಿದೆ.


ಸಿಎಂ ಸಿದ್ದರಾಮಯ್ಯ ಜಿಬಿಎ ಪದನಿಮಿತ್ತ ಅಧ್ಯಕ್ಷರಾಗಿದ್ದರೆ, ಉಪಾಧ್ಯಕ್ಷರಾಗಿ ಡಿಸಿಎಂ ಮತ್ತು ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಸಚಿವ ಡಿ.ಕೆ. ಶಿವಕುಮಾರ್ ಅವರನ್ನ ನೇಮಕ ಮಾಡಲಾಗಿದೆ. ಇದಲ್ಲದೆ ಕೇಂದ್ರ ಸರ್ಕಾರದ ಬೆಂಗಳೂರಿನ ಸಚಿವರು, ರಾಜ್ಯ ಸರ್ಕಾರದಲ್ಲಿನ ಬೆಂಗಳೂರಿನ ಸಚಿವರು, ಬೆಂಗಳೂರಿನ ಸಂಸದರು, ರಾಜ್ಯಸಭಾ ಸದಸ್ಯರು, ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರನ್ನು ಜಿಬಿಎ ಪದನಿಮಿತ್ತ ಸದಸ್ಯರನ್ನಾಗಿ ನೇಮಿಸಲಾಗಿದೆ.

ಎನ್​​.ಆರ್​.ಚೌಕದಲ್ಲಿರುವ ಪಾಲಿಕೆಯ ಆಡಳಿತಾಧಿಕಾರಿಯ ಕಚೇರಿಯನ್ನು ಇನ್ನು ಮುಂದೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ಅಧ್ಯಕ್ಷರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಚೇರಿಯಾಗಿದೆ. ಇನ್ನು ಗ್ರೇಟರ್‌ಬೆಂಗಳೂರು ಆಡಳಿತ ವಿಧೇಯಕ-2024ರ ಅಡಿಯಲ್ಲಿ ಸರ್ಕಾರ ಗ್ರೇಟರ್‌ಬೆಂಗಳೂರು ಪ್ರಾಧಿಕಾರ ರಚನೆ ಮಾಡಲಾಗಿದೆ. ಈ ಪ್ರಾಧಿಕಾರದ ಅಡಿಯಲ್ಲಿ ಐದು ಪಾಲಿಕೆಗಳನ್ನು ರಚನೆ ಮಾಡಲಾಗಿದೆ.


5 ಪಾಲಿಕೆಗಳು?
1 ಬೆಂಗಳೂರು ದಕ್ಷಿಣ ಮಹಾನಗರ ಪಾಲಿಕೆ, 2 ಬೆಂಗಳೂರು ಉತ್ತರ ಮಹಾನಗರ ಪಾಲಿಕೆ, 3 ಬೆಂಗಳೂರು ಕೇಂದ್ರ ಮಹಾನಗರ ಪಾಲಿಕೆ, 4 ಬೆಂಗಳೂರು ಪಶ್ಚಿಮ ಮಹಾನಗರ ಪಾಲಿಕೆ, 5 ಬೆಂಗಳೂರು ಪೂರ್ವ ಮಹಾನಗರ ಪಾಲಿಕೆ.


ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ 2024ಅನ್ನು 2025ರ ಮೇ 15ರಿಂದ ಜಾರಿಗೊಳಿಸಲಾಗಿದ್ದು, ಬಿಬಿಎಂಪಿ ವ್ಯಾಪ್ತಿಯಯನ್ನು ಗ್ರೇಟರ್ ಬೆಂಗಳೂರು ಪ್ರದೇಶ ಎಂದು ಹೆಸರಿಸಲಾಗಿದೆ.
ಆ ಪ್ರದೇಶದ ವ್ಯಾಪ್ತಿಯಲ್ಲಿಯೇ ಐದು ನಗರ ಪಾಲಿಕೆಗಳನ್ನು ರಚಿಸಿ ಜುಲೈ
19ರಂದು ಕರಡು ಅಧಿಸೂಚನೆ ಹೊರಡಿಸಲಾಗಿತ್ತು. ಆಗಸ್ಟ್ 18ರವರೆಗೂ ಸಾರ್ವಜನಿಕರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿತ್ತು.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ