Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಪಿಎಲ್​ ಕುಟುಂಬಗಳಿಗೆ ಇಂದಿರಾ ಕಿಟ್​ ಪೌಷ್ಟಿಕ ಆಹಾರ ವಿತರಣೆಗೆ ಅನುಮೋದನೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್​ ಕಾರ್ಡ್​ ಫಲಾನುಭವಿಗಳಿಗೆ ಇಂದಿರಾ ಕಿಟ್​ನಲ್ಲಿ ಪೌಷ್ಟಿಕ ಆಹಾರ ವಿತರಣೆಗೆ ಅನುಮೋದನೆ ಸಿಕ್ಕಿದೆ.


ವಿಧಾನಸೌಧದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದ್ದು ರಾಜ್ಯ ಸರ್ಕಾರದಿಂದ 5 ಕೆಜಿ ಅಕ್ಕಿ ಬದಲು ಆಹಾರ ಧಾನ್ಯಗಳ ವಿತರಣೆ ಮಾಡಲಾಗುತ್ತದೆ. ಕೇಂದ್ರ ಸರ್ಕಾರ ನೀಡುವ 5 ಕೆಜಿ ಅಕ್ಕಿಯ ಜೊತೆಗೆ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ 5 ಕೆಜೆ ಅಕ್ಕಿಯನ್ನು ಸೇರಿಸಿ ಒಟ್ಟು 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತಿದೆ.


ಈ ಮುಂಚೆ ಅಕ್ಕಿಯ ಅಭಾವ ಹಿನ್ನಲೆ  ಫಲಾನುಭವಿಗಳ ಖಾತೆಗೆ 175 ರೂ ಜಮಾ ಮಾಡಲಾಗುತ್ತಿತ್ತು. ಅಕ್ಕಿಯ ದರ ಇಳಿಕೆ ಆದ ಬಳಿಕ ಕಳೆದ ಕೆಲ ತಿಂಗಳಿನಿಂದ ಮತ್ತೆ ಹಣದ ಬದಲಾಗಿ ಉಚಿತ ಅಕ್ಕಿ ನೀಡಲಾಗುತ್ತಿದೆ. ಇದೀಗ ಅನ್ನ ಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಇಂದಿರಾ ಕಿಟ್​ನಲ್ಲಿ ಪೌಷ್ಟಿಕ ಆಹಾರ ವಿತರಣೆಗೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. 

ಕಿಟ್​ನಲ್ಲಿ ಏನೇನು ಇರುತ್ತೆ-
5 ಕೆಜಿ ಅಕ್ಕಿ ಬದಲು ಆಹಾರ ಧಾನ್ಯಗಳ ವಿತರಣೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಇಂದಿರಾ ಆಹಾರ ಕಿಟ್​ನಲ್ಲಿ ತೊಗರಿಬೆಳೆ, ಅಡುಗೆ ಎಣ್ಣೆ, ಉಪ್ಪು ಮತ್ತು ಸಕ್ಕರೆ ವಿತರಿಸಲು ನಿರ್ಧರಿಸಲಾಗಿದೆ. ಅನ್ನಭಾಗ್ಯ ಯೋಜನೆ ಅಕ್ಕಿ ಕಳ್ಳ ಸಾಗಾಟವಾಗುತ್ತಿದ್ದ ಹಿನ್ನೆಲೆ ಅದಕ್ಕೆ ಕಡಿವಾಣ ಹಾಕಲು ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಎರಡನೇ ಹಂತದಲ್ಲಿ 11 ಶ್ರಮಿಕ ವಸತಿ ಶಾಲೆಗಳನ್ನು 405.55 ಕೋಟಿ ಅಂದಾಜು ಮೊತ್ತದಲ್ಲಿ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ (ತಿದ್ದುಪಡಿ) ವಿಧೇಯಕ, 2025 ಅನುಮೋದನೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ