Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

​"ಯಾರಪ್ಪನ ಮನೆ ಹಣದಲ್ಲಿ ಗ್ಯಾರಂಟಿ ಕೊಡ್ತಿದ್ದೀರಿ?": ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

Advertisement
ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಯಾರಪ್ಪನ ಮನೆಯಿಂದ ಹಣ ತಂದು ಗ್ಯಾರಂಟಿ ಕೊಡ್ತಾ ಇದ್ದಾರೆ?" ಎಂದು ಖಾರವಾಗಿ ಪ್ರಶ್ನಿಸಿದರು.​


​ತೆರಿಗೆಯ ಹಣವೇ ಗ್ಯಾರಂಟಿ: ಜನರ ಮೇಲೆ ಪದೇ ಪದೇ ತೆರಿಗೆ ಹೇರಿಕೆ ಮಾಡುವ ಮೂಲಕ ಸಂಗ್ರಹಿಸಿದ ಹಣದಲ್ಲೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ ಹೊರತು ಬೇರೆಲ್ಲಿಂದಲೂ ಅಲ್ಲ ಎಂದು ಅವರು ಟೀಕಿಸಿದರು.
​ಅಭಿವೃದ್ಧಿ ಕುಂಠಿತ: ಸರ್ಕಾರದ ಬಳಿ ಗ್ಯಾರಂಟಿ ಕೊಡಲು ಹಣವಿದೆಯೇ ಹೊರತು ಅಭಿವೃದ್ಧಿ ಕೆಲಸಗಳಿಗೆ ಹಣವಿಲ್ಲ. ಈ ಸರ್ಕಾರಕ್ಕೆ 'ಅಭಿವೃದ್ಧಿ' ಪದದ ಅರ್ಥವೇ ಗೊತ್ತಿಲ್ಲ ಎಂದು ಕಿಡಿಕಾರಿದರು.

​ಸಾಲ ಮನ್ನಾ ಉದಾಹರಣೆ: "ನಾನು ಸಿಎಂ ಆಗಿದ್ದಾಗ ರೈತರ ಸಾಲ ಮನ್ನಾ ಮಾಡಿದ್ದೆ, ಆದರೆ ಅಭಿವೃದ್ಧಿ ಕೆಲಸಗಳಿಗೆ ಹಣವಿಲ್ಲ ಎಂದು ಯಾವತ್ತೂ ಹೇಳಿರಲಿಲ್ಲ" ಎಂದು ತಮ್ಮ ಆಡಳಿತವನ್ನು ನೆನಪಿಸಿಕೊಂಡರು.

​ರಾಜ್ಯದ ಆರ್ಥಿಕ ಸ್ಥಿತಿ: ರಾಜ್ಯವು ತಲಾ ಆದಾಯದಲ್ಲಿ ಎರಡನೇ ಸ್ಥಾನದಲ್ಲಿದೆ ಎಂದು ಸಿಎಂ ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ. ರಾಜ್ಯ ಅಷ್ಟು ಶ್ರೀಮಂತವಾಗಿದ್ದರೆ ಮತ್ತು ಜನರು ಆರ್ಥಿಕವಾಗಿ ಸಬಲರಾಗಿದ್ದರೆ ಈ ಗ್ಯಾರಂಟಿಗಳ ಅಗತ್ಯವೇನಿತ್ತು? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

​ಚುನಾವಣಾ ಅಕ್ರಮದ ಆರೋಪ: ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆಗಳಲ್ಲಿ ಹಣದ ಹೊಳೆ ಹರಿಯುತ್ತಿದೆ. ಜನರು ಸರ್ಕಾರದ ಕೆಲಸ ನೋಡಿ ವೋಟ್ ಹಾಕಬೇಕೋ ಅಥವಾ ಇವರು ಹರಿಸುತ್ತಿರುವ ಹಣದ ಹೊಳೆ ನೋಡಿ ವೋಟ್ ಹಾಕಬೇಕೋ ಎಂದು ಗೇಲಿ ಮಾಡಿದರು.

​ದಾವಣಗೆರೆ ದಕ್ಷಿಣ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಪರ ಪ್ರಚಾರ ನಡೆಸಲು ಆಗಮಿಸಿದ್ದ ವೇಳೆ ಕುಮಾರಸ್ವಾಮಿ ಅವರು ಈ ಹೇಳಿಕೆಗಳನ್ನು ನೀಡಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣದಿಂದ ಮಾತ್ರ ಜೀವನದಲ್ಲಿ ಬದಲಾವಣೆ ಕಂಡುಕೊಳ್ಳಲು ಸಾಧ್ಯ-- ನಿರುದ್ಯೋಗಿ ಯುವಕ-ಯುವತಿಯರಿಗೆ ಉಚಿತ ಟೈಲರಿಂಗ್ ತರಬೇತಿ ಹಾಗೂ ಯಂತ್ರೋಪಕರಣಗಳ ವಿತರಣೆಗೆ ಅರ್ಜಿ ಆಹ್ವಾನಪ್ರತಿಷ್ಠಿತ ಶಾಲೆಗಳ ಪ್ರವೇಶಕ್ಕೆ ಅರ್ಹತಾ ಪರೀಕ್ಷೆ: 321 ವಿದ್ಯಾರ್ಥಿಗಳು ಹಾಜರುನಿರುದ್ಯೋಗಿಗಳಿಗೆ ರುಡ್‍ಸೆಟ್  ಸಂಸ್ಥೆಯಿಂದ ಉದ್ಯೋಗ ತರಬೇತಿಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನಅದ್ದೂರಿಯಾಗಿ ನಡೆದ ಉಜ್ಜನಿ ಬೀರಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವಭಾರತದ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ರಾಯಭಾರಿ ಸ್ವಾಮಿ ರಂಗನಾಥಾನಂದಜೀಡಾ. ಅಂಬೇಡ್ಕರ್ ಅವರ ಜಯಂತಿ ಕೇವಲ ಒಂದು ಜಾತಿ ಧರ್ಮಕ್ಕೆ ಮೀಸಲಾಗಬಾರದುಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ 70ನೇ ಜನ್ಮೋತ್ಸವಕ್ಕೆ ಸಚಿವ ಎಂ.ಬಿ. ಪಾಟೀಲ್‌ಗೆ ಆಮಂತ್ರಣಜನರ ಅಹವಾಲು ಆಲಿಸಿದ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್: ದಾವಣಗೆರೆಯಲ್ಲಿ ‘ಜನತಾದರ್ಶನ’