Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ 10 ಆರೋಪಿಗಳ ಬಂಧನ

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಪಾದಚಾರಿ ಮಾರ್ಗಗಳ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆಗೆ ತೆರಳಿದ್ದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ 10 ಆರೋಪಿಗಳನ್ನು ಕಮರ್ಷಿಯಲ್ ಸ್ಟ್ರೀಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಿರಣ್ (34), ಬಸವರಾಜ್ (28), ರಂಜಿತ್ (19), ರಂಗಸ್ವಾಮಿ (49), ಮುಜಾಹಿದಾ ಅಹಮದ್ (39) ಕೊಟ್ರೇಶ್ (26), ಪರಶುರಾಮ್ (27), ರಘು (28) ಪಾರ್ಥೀಬನ್ (23) ಹಾಗೂ ಭರತ್ (24) ಎಂಬ ಬಂಧಿತರು.

ಮಂಗಳವಾರ ಬೆಳಗ್ಗೆ ಶಿವಾಜಿನಗರದಲ್ಲಿ ಜಿಬಿಎ ವತಿಯಿಂದ ನಡೆದ ಫುಟ್​ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಪಾಲಿಕೆ ಸಿಬ್ಬಂದಿ ಮತ್ತು ಪೊಲೀಸರೊಂದಿಗೆ ಸ್ಥಳೀಯ ಸಂಘಟನೆಗಳ ಸದಸ್ಯರು ಮಾತಿನ ಚಕಮಕಿ ನಡೆಸಿದ್ದರು. ತೆರವು ಕಾರ್ಯಾಚರಣೆಗೆ ಅಡ್ಡಿಪಡಿಸಿದ್ದ ಆರೋಪಿಗಳು, ಪಾಲಿಕೆಯ ಇಂಜಿನಿಯರ್‌ಗಳು ಮತ್ತು ಜೆಸಿಬಿ ಚಾಲಕನ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪ ಸಹ ಕೇಳಿಬಂದಿದೆ.

ಉದ್ವಿಗ್ನ ಪರಿಸ್ಥಿತಿಯುಂಟಾದ ಬಳಿಕ ಕೆಲಕಾಲ ಕಾರ್ಯಾಚರಣೆಯನ್ನ ತಾತ್ಕಾಲಿಕವಾಗಿ ನಿಲ್ಲಿಸಲಾಗಿತ್ತು. ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ, ಜೆಸಿಬಿ ಚಾಲಕನ ಮೇಲೆ ಪೆಪ್ಪರ್ ಸ್ಪ್ರೇ ಮಾಡಿರುವುದಾಗಿ ಕೆಲಸಕ್ಕೆ ಅಡ್ಡಿಪಡಿಸಲಾಯಿತು ಎಂದು ಆರೋಪಿಸಿ ಜಿಬಿಎ ಅಧಿಕಾರಿಗಳು ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ನ್ಯಾಯಾಲಯದ ಆದೇಶದಂತೆ ಜಿಬಿಎ ಅಧಿಕಾರಿ ಮತ್ತು ಸಿಬ್ಬಂದಿಗಳ ನೇತೃತ್ವದಲ್ಲಿ ನಗರದಲ್ಲಿ ಪಾದಚಾರಿ ಮಾರ್ಗಗಳ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆ ಸಂದರ್ಭದಲ್ಲಿ ಅಧಿಕಾರಿಗಳ‌ಕೆಲಸಕ್ಕೆ ಅಡ್ಡಿಪಡಿಸಿ ಹಲ್ಲೆ ಮಾಡಿರುವ ಆರೋಪಿಗಳನ್ನ ಬಂಧಿಸಲಾಗಿದೆ. ಹಲ್ಲೆ‌ಮಾಡಿರುವ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿವೆ. ಆರೋಪಿಗಳ ಹಿನ್ನೆಲೆಯ ಬಗ್ಗೆ ನಮ್ಮ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ‌.

ಪಾದಚಾರಿ ಮಾರ್ಗ ಒತ್ತುವರಿ ತೆರವು ಮುಂದುವರೆಯಲಿದೆ - ಸಿಎಂ: "ಜುಲೈ 1 ರಿಂದ ಇಲ್ಲಿಯವರೆಗೆ ಒಟ್ಟು 435 ಕಿ.ಮೀ. ಉದ್ದದ ಪಾದಚಾರಿ ಮಾರ್ಗಗಳಲ್ಲಿ ಒಟ್ಟು 9,878 ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ. ಐದೂ ಪಾಲಿಕೆಗಳ ವ್ಯಾಪ್ತಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರೆಯಲಿದೆ" ಎಂದು ಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದರು.

ನಗರದ ವಿವಿಧ ಕಡೆಗಳಲ್ಲಿ ಪಾದಚಾರಿ ಮಾರ್ಗ ಒತ್ತುವರಿ ಹಾಗೂ ವ್ಯಾಪಾರಿಗಳ ತೆರವು ಕಾರ್ಯಾಚರಣೆ ಕುರಿತು ಸಿಎಂ ಡಿ.ಕೆ. ಶಿವಕುಮಾರ್ ಅವರು ಕಳೆದ ಶುಕ್ರವಾರ ನಗರ ಪ್ರದಕ್ಷಿಣೆ ನಡೆಸಿ ಬೆಂಗಳೂರು ನಗರಾಭಿವೃದ್ದಿ ಸಚಿವರಾದ ಕೃಷ್ಣ ಬೈರೇಗೌಡರಿಂದ ಮಾಹಿತಿ ಪಡೆದರು. ಬಳಿಕ ಮಾತನಾಡಿದ ಅವರು, "ಒಟ್ಟು 1,340 ಅಂಗಡಿಗಳಿದ್ದವು, ಸುಮಾರು 1,800 ತಳ್ಳುವ ಗಾಡಿಗಳಿದ್ದವು. ತಳ್ಳುವ ಗಾಡಿಗಳನ್ನು ತೆಗೆದುಕೊಂಡು ಹೋಗಲು ಅವಕಾಶ ನೀಡಲಾಗಿದೆ. ಸುಮಾರು 2,267 ಅಂಗಡಿ ಮುಂಭಾಗದಲ್ಲಿ ತಗಡಿನ ಶೀಟ್​ಗಳನ್ನು ಅಳವಡಿಸಲಾಗಿತ್ತು. ಅದನ್ನೂ ಸಹ ತೆಗೆಯಲಾಗಿದೆ. 2,300 ಮೆಟ್ಟಿಲು, ರ್ಯಾಂಪ್​ಗಳು, 2,662 ಪಿಲ್ಲರ್​ಗಳು ಬೋರ್ಡ್​ಗಳು, 2,247 ಶೆಡ್​ಗಳನ್ನು ತೆರವುಗೊಳಿಸಲಾಗಿದೆ. ತೆರವಾದ ತ್ಯಾಜ್ಯವನ್ನು ವಿಲೇವಾರಿ ಮಾಡಿದ್ದು ಜೊತೆಗೆ ಪಾದಚಾರಿ ಮಾರ್ಗಗಳನ್ನು ದುರಸ್ಥಿ ಮಾಡುವ ಕೆಲಸವನ್ನೂ ಮಾಡಿಕೊಂಡು ಬರಲಾಗುತ್ತಿದೆ" ಎಂದು ವಿವರಿಸಿದ್ದರು.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.