LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಕ್ರಮವಾಗಿ ಗಾಂಜವನ್ನು ಸಂಗ್ರಹಿಸಿಟ್ಟಿದ್ದ ವ್ಯಕ್ತಿಯ ಬಂಧನ

Advertisement
Advertisement

ಚಂದ್ರವಳ್ಳಿ ನ್ಯೂಸ್,ದೊಡ್ಡಬಳ್ಳಾಪುರ:
ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 6 ಕೆಜಿ 126 ಗ್ರಾಂ ಒಣ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ದೊಡ್ಡಬಳ್ಳಾಪುರ ನಗರ ಪೊಲೀಸ್‌ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಸಂಬಂಧ ಒಬ್ಬ ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಬಂಧಿತನನ್ನು ಮುಷರಪ್ ಅಲಿ (23) ಎಂದು ಗುರುತಿಸಲಾಗಿದ್ದು, ಈತ ಉತ್ತರ ಪ್ರದೇಶದ ಮುರಾದಾಬಾದ್ ಮೂಲದವನಾಗಿದ್ದಾನೆ. ಪ್ರಸ್ತುತ ದೊಡ್ಡಬಳ್ಳಾಪುರ ನಗರದ ಅರ್ಕಾವತಿ ಬಡಾವಣೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದನು.

 ಉತ್ತರ ಪ್ರದೇಶದಿಂದ ದೊಡ್ಡಬಳ್ಳಾಪುರಕ್ಕೆ ಒಣ ಗಾಂಜಾವನ್ನು ತಂದು ಮಾರಾಟ ಮಾಡುವ ಉದ್ದೇಶದಿಂದ ತನ್ನ ಮನೆಯಲ್ಲಿ ಶೇಖರಿಸಿಟ್ಟಿದ್ದಾನೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಈ ಮಾಹಿತಿ ಆಧರಿಸಿ ದೊಡ್ಡಬಳ್ಳಾಪುರ ನಗರ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ. 

ದಾಳಿಯ ವೇಳೆ ಆರೋಪಿಯ ವಶದಲ್ಲಿದ್ದ 6 ಕೆಜಿ 126 ಗ್ರಾಂ ಅಕ್ರಮ ಒಣ ಗಾಂಜಾವನ್ನು ವಶಪಡಿಸಿಕೊಂಡು, ಆರೋಪಿಯನ್ನು ಬಂಧಿಸಿದ್ದಾರೆ. ಈ ಕುರಿತು ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕೊಂಡು  ಹೆಚ್ಚಿನ ತನಿಖೆ  ಪ್ರಾರಂಭಿಸಿದ್ದಾರೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕುಟುಂಬ ಕಲಹ ಪ್ರಕರಣ ಅಧ್ಯಯನ: ಪುರುಷರಿಗೂ ಕಾನೂನು ರಕ್ಷಣೆ ಅಗತ್ಯ:ಆನಂದ್ ಸಿ ತಿರುಮಲಆನಂದ್ ಸಿ. ತಿರುಮಲಗೆ ಪ್ರತಿಷ್ಠಿತ 'ಸಾಧಕ ರತ್ನ ಪ್ರಶಸ್ತಿ' ಪ್ರದಾನಮಹಾಭಾರತದ ಭೀಷ್ಮನ ವ್ಯಕ್ತಿತ್ವ ಅತ್ಯಂತ ಕುತೂಹಲಕಾರಿ-ಡಾ. ತಾರಿಣಿ ಶುಭದಾಯಿನಿಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಮಸ್ಯೆಗಳ ಕುರಿತು ಪ್ರಸನ್ನಾನಂದ ಸ್ವಾಮೀಜಿಗೆ ಮನವಿ ಸಲ್ಲಿಕೆಕೃತಕ ಬುದ್ಧಿಮತ್ತೆ ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನಕೋಟೆ ಮುಂಭಾಗ ಮತ್ತೊಂದು ಟಿಕೆಟ್ ಕೌಂಟರ್ ತೆರೆಯುವ ಬೇಡಚಿತ್ರದುರ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಅನೇಕ ರಾಜಕೀಯ ಸವಾಲುಗಳನ್ನು ಎದುರಿಸುತ್ತಿದೆವಿಜೃಂಭಣೆಯಿಂದ ನಡೆದ ಸಂಭ್ರಮದ ಭೂತ ನೆರಿಗೆಗಾಳಿ ಪಟ ಕಲೆಗೆ ಉತ್ತೇಜನ ಅಗತ್ಯ-ಹೆಚ್. ಎಸ್. ಶಿವಶಂಕರ್ಆನೇಕಲ್ ಬಳಿ ಭೀಕರ ಅಗ್ನಿ ಅವಘಡ: ಧಗಧಗನೆ ಉರಿದು ಭಸ್ಮವಾದ 4 ಖಾಸಗಿ ಬಸ್‌ಗಳು!