Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಲ್ತುಳಿತ ದುರ್ಘಟನೆ ನಾಲ್ವರ ಬಂಧನ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಯಲ್ ಚಾಲೆಂಜರ್ಸ್ ಬೆಂಗಳೂರು
ತಂಡದ ಸಂಭ್ರಮಾಚರಣೆ ವೇಳೆ ಉಂಟಾದ ಕಾಲ್ತುಳಿತದಿಂದ 11 ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್​ ಸೇರಿದಂತೆ ಕೆಲ ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶಿಸಲಾಗಿದೆ. ಈ ದುರ್ಘಟನೆಗೆ ಸಂಬಂಧಿಸಿದಂತೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಿದ್ದ ಮೂವರು ಆಯೋಜಕರು ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಏರ್​​ಪೋರ್ಟ್​ನಲ್ಲಿ ಮೂವರು ಆಯೋಜಕರು ಸೇರಿ ನಾಲ್ವರನ್ನು ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಮತ್ತು ಸಿಸಿಬಿ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಆರ್​ಸಿಬಿ ಮಾರ್ಕೆಟಿಂಗ್​ ಮುಖ್ಯಸ್ಥ​​​​​​​ ನಿಖಿಲ್​ ಸೋಸಲೆ, ಡಿಎನ್​ಎ ಮ್ಯಾನೇಜ್​ಮೆಂಟ್​​ ಸಿಬ್ಬಂದಿ ಸುನೀಲ್ ಮ್ಯಾಥ್ಯೂ, ಕಿರಣ್ ಮತ್ತು ಸುಮಂತ್​ ಇವರುಗಳು ಮುಂಬೈಗೆ ತೆರಳಲು ವಿಮಾನ ನಿಲ್ದಾಣದಲ್ಲಿದ್ದ ಸಂದರ್ಭದಲ್ಲಿ ಪೊಲೀಸರು ಬಂಧಿಸಿದ್ದಾರೆ.

ನಾಲ್ವರು ಆರೋಪಿಗಳನ್ನು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಕರೆತರಲಾಗಿದ್ದು, ಶೇಷಾದ್ರಿಪುರಂ ಎಸಿಪಿ ಪ್ರಕಾಶ್ ವಿಚಾರಣೆ ನಡೆಸಿದ್ದಾರೆ. ಬೆಂಗಳೂರಿನ ವಿಧಾನ ಸೌಧದಿಂದ ಚಿನ್ನಸ್ವಾಮಿ ಸ್ಟೇಡಿಯಂವರೆಗೂ ವಿಕ್ಟರಿ ಪರೇಡ್ ಅಂತ ಪೊಲೀಸರು ಅನುಮತಿ ನಿರಾಕರಿಸಿದ ನಂತರವು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ನಂತರ ಡಿಲೀಟ್ ಮಾಡಲಾಗಿತ್ತು.

ಸ್ಟೇಡಿಯಂನಲ್ಲಿ ಸೆಲೆಬ್ರೇಷನ್​ಗೆ ಉಚಿತ ಟಿಕೆಟ್ ಎಂದು ಘೋಷಿಸಿದ್ದು, ಗೇಟ್ 9 ಮತ್ತು 10ರ ಬಳಿ ಮಧ್ಯಾಹ್ನ 1 ಗಂಟೆಗೆ ಟಿಕೆಟ್ ಸಿಗುತ್ತದೆ ಎಂದು ಹೇಳಿದ್ದು, 1 ಗಂಟೆ ಆದರೂ ಟಿಕೆಟ್ ವಿತರಣೆ ಆಗದಿರುವುದು. ಬಳಿಕ ಮಧ್ಯಾಹ್ನ 3 ಗಂಟೆಗೆ ಸ್ಟೇಡಿಯಂಗೆ ಅಭಿಮಾನಿಗಳ ಪ್ರವೇಶ ಅಂತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಧಿಕೃತ ಖಾತೆಯಲ್ಲಿ ಪೋಸ್ಟ್ ಮಾಡಿದ್ದ ಕಾರಣಕ್ಕೆ ಆರ್​ಸಿಬಿ ಮಾರ್ಕೆಟಿಂಗ್​ ಮುಖಸ್ಥ​​​​​​​ ನಿಖಿಲ್​ ಸೋಸಲೆ ಬಂಧಿಸಲಾಗಿದೆ ಎಂದು ಹೇಳಲಾಗುತ್ತಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ