ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ದೇವಸ್ಥಾನಗಳನ್ನೆ ಗುರಿಯಾಗಿಸಿಕೊಂಡು ಸರಣಿ ಕಳ್ಳತನ ನಡೆಸುತ್ತಿದ್ದ ಅಪ್ಪ ಹಾಗೂ ಇಬ್ಬರು ಮಕ್ಕಳನ್ನೊಳಗೊಂಡ ಖತರ್ನಾಕ್ ಕಳ್ಳರ ಜಾಲವನ್ನು ದೊಡ್ಡಬೆಳವಂಗಲ ಠಾಣೆ ಪೊಲೀಸರು ಭೇದಿಸಿದ್ದು, ಮೂವರು ಆರೋಪಿಗಳನ್ನು ಬಂಧಿಸಿವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ಮಹೇಶ್ @ ಓಟಿ, ರಘು ಜಿ, ಅಂಜನ್ ಕುಮಾರ್ ಎಂದು ಗುರುತಿಸಲಾಗಿದೆ. ಪ್ರಕರಣದ ಮತ್ತೋರ್ವ ಆರೋಪಿ ಗಂಗರೆಡ್ಡಿ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಬಂಧಿತರಿಂದ ಅಪಾರ ಮೌಲ್ಯದ ದೇವರ ಬೆಳ್ಳಿ ಕಿರೀಟಗಳು, ಚಿನ್ನಾಭರಣಗಳು ಹಾಗೂ ಕಳ್ಳತನಕ್ಕೆ ಬಳಸುತ್ತಿದ್ದ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತರ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ದೇವಸ್ಥಾನ ಕಳ್ಳತನಕ್ಕೆ ಸಂಬಂಧಿಸಿದ ಹಲವು ಪ್ರಕರಣಗಳು ದಾಖಲಾಗಿರುವ ಶಂಕೆ ವ್ಯಕ್ತವಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ. 2 ಕೇಬಲ್ ಪ್ರಕರಣಗಳ ಬೆನ್ನತ್ತಿದ್ದ ಪೊಲೀಸರಿಗೆ ಇಬ್ಬರು ಆರೋಪಿಗಳು ತಗಲಾಕ್ಕೊಂಡಿದ್ದಾರೆ.
ಬಂಧಿತ ಆರೋಪಿಗಳು-
ಹುಸೇನ್ ಶೇಖ್(19), ಬಾಟೆಲ್ ಆಯುವ ಕೆಲಸ, ಆರೀಪ್ ಶೇಖ್(27) ಪೇಪರ್ ಆಯುವ ಕೆಲಸ.
ಬಂಧಿತರಿಂದ 3 ಲಕ್ಷ ಬೆಲೆ ಬಾಳುವ ಕಂಡಕ್ಟರ್ ಕೇಬಲ್ ಹಾಗೂ 35 ಸಾವಿರ ರೂ. ಬೆಲೆ ಬಾಳುವ 300 ಮೀಟರ್ ಕೇಬಲ್ ಹಾಗೂ ಆರೋಪಿಗಳು ಕೃತ್ಯಕ್ಕೆ ಉಪಯೋಗಿಸಿದ್ದ ಒಂದು ಕ್ಯಾಂಟರ್, ಒಂದು ಅಶೋಕ ಲೈಲ್ಯಾಂಡ್ ದೋಸ್ತ್ ಹಾಗೂ ಒಂದು ಆಟೋ ಹಾಗೂ ಬೈಕನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.



