Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮನೆಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ; ₹18 ಲಕ್ಷ ಮೌಲ್ಯದ ಚಿನ್ನಾಭರಣ ವಶ!

Advertisement
Advertisement

ಚಂದ್ರವಳ್ಳಿ ನ್ಯೂಸ್ ಹಿರಿಯೂರು : ಹಿರಿಯೂರು ನಗರದಲ್ಲಿ ಬೀಗ ಹಾಕಿದ್ದ ಮನೆಯೊಂದರ ಬೀಗ ಮುರಿದು ಕಳವು ಮಾಡಿದ್ದ ಇಬ್ಬರು ಅಂತರ್ ಜಿಲ್ಲಾ ಕಳ್ಳರನ್ನು ಹಿರಿಯೂರು ನಗರ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 18 ಲಕ್ಷ ರೂಪಾಯಿ ಮೌಲ್ಯದ 138 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.  

ಪ್ರಕರಣದ ಹಿನ್ನೆಲೆ:
​ಹಿರಿಯೂರು ಟೌನ್‌ನ ವೇದಾವತಿ ನಗರದ ನಿವಾಸಿ ರತ್ನಮ್ಮ (ಗಂಡ ಲೇಟ್ ಮೂಡಲಗಿರಿಯಪ್ಪ) ಎಂಬುವವರು ದಿನಾಂಕ 25.06.2026 ರಂದು ಹಿರಿಯೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದಿನಾಂಕ 24.06.2026 ರ ರಾತ್ರಿ 10:45 ರಿಂದ 25.06.2026 ರ ಬೆಳಿಗ್ಗೆ 05:45 ರ ಮಧ್ಯದ ಅವಧಿಯಲ್ಲಿ ಯಾರೋ ಕಳ್ಳರು ಅವರ ಮನೆಯ ಬೀಗ ಮುರಿದು ಒಳಗೆ ನುಗ್ಗಿ, 10 ಗ್ರಾಂ ಚಿನ್ನಾಭರಣ ಹಾಗೂ 48 ಸಾವಿರ ರೂ. ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿತ್ತು. ಈ ಸಂಬಂಧ ಹಿರಿಯೂರು ನಗರ ಠಾಣೆಯಲ್ಲಿ ಮೊಬೈಲ್ ಸಂಖ್ಯೆ: 170/2026 ಕಲಂ; 331(4), 305 ಬಿ.ಎನ್.ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.  

ಕಾರ್ಯಾಚರಣೆ ಮತ್ತು ಆರೋಪಿಗಳ ಬಂಧನ:
​ಚಿತ್ರದುರ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ರಂಜಿತ್ ಕುಮಾರ್ ಬಂಡಾರು (ಐಪಿಎಸ್) ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಡಾ. ಆರ್. ಶಿವಕುಮಾರ್ (ಕೆ.ಎಸ್.ಪಿ.ಎಸ್) ರವರ ಮಾರ್ಗದರ್ಶನದಲ್ಲಿ ವಿಶೇಷ ತಂಡವೊಂದನ್ನು ರಚಿಸಲಾಗಿತ್ತು. ಹಿರಿಯೂರು ಉಪ ವಿಭಾಗದ ಪೊಲೀಸ್‌ ಉಪ ಅಧೀಕ್ಷಕರಾದ ಶ್ರೀ ಟಿ.ಎಂ. ಶಿವಕುಮಾರ್ ಅವರ ನೇತೃತ್ವದಲ್ಲಿ, ಪಿಐ ಮಹಮ್ಮದ್ ಸಿರಾಜ್, ಬೆರಳು ಮುದ್ರೆ ಘಟಕದ ಪಿಐ ವಿಶ್ವನಾಥ್, ಪಿಎಸ್‌ಐ ಭೀಮನಗೌಡ ಪಾಟೀಲ್ ಹಾಗೂ ಸಿಬ್ಬಂದಿಗಳನ್ನೊಳಗೊಂಡ ತಂಡವು ತನಿಖೆ ಕೈಗೊಂಡಿತ್ತು.  

ದಿನಾಂಕ 02.07.2026 ರಂದು ಕಾರ್ಯಾಚರಣೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.  
​ಎ-1: ಪರಶುರಾಮ ಚಂದಳ್ಳಿ @ ಪರಸ (34 ವರ್ಷ, ರಾಣೆಬೆನ್ನೂರು ಟೌನ್)  
​ಎ-2: ಸಚಿನ್ (27 ವರ್ಷ, ಮೊದಲಿಯಾರ್ ಶಿವಮೊಗ್ಗ)  
​ಬಂಧಿತ ಆರೋಪಿಗಳಿಂದ ಕಳವು ಮಾಡಲಾಗಿದ್ದ ಒಟ್ಟು 138 ಗ್ರಾಂ ಚಿನ್ನಾಭರಣಗಳನ್ನು (ಅಂದಾಜು ಬೆಲೆ ₹18 ಲಕ್ಷ) ವಶಪಡಿಸಿಕೊಳ್ಳಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.  

ಪೊಲೀಸ್ ಅಧಿಕಾರಿಗಳ ಶ್ಲಾಘನೆ:
​ಕಷ್ಟಸಾಧ್ಯವಾದ ಈ ಕಳವು ಪ್ರಕರಣವನ್ನು ಅತಿ ಶೀಘ್ರದಲ್ಲಿ ಬೇಧಿಸಿ, ಮಾಲು ಮತ್ತು ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾದ ಹಿರಿಯೂರು ನಗರ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರ ಕಾರ್ಯಕ್ಷಮತೆಯನ್ನು ಚಿತ್ರದುರ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ರಂಜಿತ್ ಕುಮಾರ್ ಬಂಡಾರು ಅವರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.