Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಖೋಟಾ ನೋಟ್ ಪ್ರಿಂಟ್ ಮಾಡುತ್ತಿದ್ದ ಆರೋಪಿ ಬಂಧನ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹೋಟೆಲ್ ರೂಮ್‌ನಲ್ಲಿ ಖೋಟಾ ನೋಟ್ ಪ್ರಿಂಟ್ ಮಾಡುತ್ತಿದ್ದ ಆರೋಪಿಯನ್ನು ಕಮರ್ಷಿಯಲ್ ಸ್ಟ್ರೀಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕ್ರಿಷ್ ಮಾಲಿ(
23) ಬಂಧಿತ ಆರೋಪಿ ಆಗಿದ್ದಾನೆ.

ಟಸ್ಕರ್ ಟೌನ್‌ನಲ್ಲಿರುವ ಹೋಟೆಲ್‌ನಲ್ಲಿ ಜೂನ್ 1ರಂದು ರೂಮ್ ಬುಕ್ ಮಾಡಿದ್ದ ಆರೋಪಿ, ಖೋಟಾ ನೋಟುಗಳನ್ನು ಪ್ರಿಂಟ್ ಮಾಡಿದ್ದ. ಅಲ್ಲದೇ ಜೂನ್ 7ರಂದು ಹೋಟೆಲ್‌ನಿಂದ ಚೆಕ್ ಔಟ್ ಆಗುವಾಗ ನಕಲಿ ನೋಟುಗಳ ಮೂಲಕ ಬಿಲ್​ ಪಾವತಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಟೆಕ್ಸ್ ಟೈಲ್ಸ್ ಉದ್ಯಮಿಯೊಬ್ಬರ ಮಗನಾಗಿರುವ ಕ್ರಿಷ್ ಮಾಲಿ, ಮನೆಯಲ್ಲಿ ಕ್ಷುಲ್ಲಕ ವಿಚಾರಕ್ಕೆ ಜಗಳ ಮಾಡಿಕೊಂಡು ಆನ್‌ಲೈನ್‌ ಮೂಲಕ ಹೋಟೆಲ್‌ನಲ್ಲಿ ರೂಮ್ ಬುಕ್ ಮಾಡಿದ್ದ. ತನ್ನ ಬಳಿಯಿರುವ ಹಣ ಎಷ್ಟು ದಿನಗಳ ಕಾಲ ಸಾಲಬಹುದು ಎಂದು ಯೋಚಿಸಿದ್ದ ಆರೋಪಿ ಖೋಟಾ ನೋಟುಗಳನ್ನು ಪ್ರಿಂಟ್ ಮಾಡಲು ಯೋಚಿಸಿದ್ದ ಎನ್ನಲಾಗಿದೆ.

ಬ್ಯಾಗ್‌ನಲ್ಲಿ ಪ್ರಿಂಟರ್, ಸ್ಕ್ಯಾನರ್‌ಗಳನ್ನು ತಂದಿದ್ದ ಆರೋಪಿ ಹೋಟೆಲ್‌ನಲ್ಲಿ ಕುಳಿತೇ 500 ರೂ. ಮುಖಬೆಲೆಯ ನಕಲಿ ನೋಟುಗಳನ್ನು ಕಲರ್ ಜೆರಾಕ್ಸ್ ಮಾಡಿದ್ದ. ಬಳಿಕ ಜೂನ್ 7ರಂದು ಮಧ್ಯಾಹ್ನ ಹೋಟೆಲ್‌ನಿಂದ ಚೆಕ್ ಔಟ್ ಆಗುವಾಗ ನಕಲಿ ನೋಟುಗಳ ಮೂಲಕವೇ 3 ಸಾವಿರ ರೂ. ಬಿಲ್ ಪಾವತಿಸಿ ತೆರಳಿದ್ದ. ಅದೇ ದಿನ ಬೆಳಗ್ಗೆ ಹೋಟೆಲ್‌ನಿಂದ ಸಂಗ್ರಹಿಸಲಾದ ತ್ಯಾಜ್ಯದಲ್ಲಿ ಕೆಲ ನಕಲಿ ನೋಟುಗಳು ಪತ್ತೆಯಾಗಿರುವುದನ್ನು ಪೌರಕಾರ್ಮಿಕ ಸಿಬ್ಬಂದಿ ಹೋಟೆಲ್ ಮ್ಯಾನೇಜರ್ ಬಳಿ ಹೇಳಿದ್ದರು.

ಆರೋಪಿಯ ಚೆಕ್ ಔಟ್ ಆದ ಕೆಲ ಸಮಯದ ಬಳಿಕ ಅನುಮಾನಗೊಂಡ ಹೋಟೆಲ್ ಸಿಬ್ಬಂದಿ ಆತ ನೀಡಿದ್ದ ನೋಟುಗಳನ್ನು ಪರಿಶೀಲಿಸಿದಾಗ ಅವು ನಕಲಿ ಎಂದು ತಿಳಿದು ಬಂದಿತ್ತು. ಬಳಿಕ ಆತ ತಂಗಿದ್ದ ರೂಮ್‌ನಲ್ಲಿ ಪರಿಶೀಲಿಸಿದಾಗ ಬಿಳಿ ಹಾಳೆಗಳ ಬಂಡಲ್, ನಕಲಿ ನೋಟ್​ನ ಚೂರುಗಳು ಪತ್ತೆಯಾಗಿದ್ದವು. ನಂತರ ಹೋಟೆಲ್ ಮ್ಯಾನೇಜರ್ ಮೊಹಮ್ಮದ್ ಷರೀಫ್ ಉದ್ದೀನ್ ಅವರು ಕಮರ್ಷಿಯಲ್ ಸ್ಟ್ರೀಟ್ ಠಾಣೆಗೆ ದೂರು ನೀಡಿದ್ದರು.

ರೂಮ್ ಬಾಡಿಗೆಗೆ ಪಡೆದುಕೊಳ್ಳುವಾಗ ಆರೋಪಿ ನೀಡಿದ್ದ ಆಧಾರ್‌ನಲ್ಲಿದ್ದ ವಿಳಾಸ ಆಧರಿಸಿ ಆರೋಪಿಯನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ. ಈ ರೀತಿಯ ನಕಲಿ ನೋಟುಗಳನ್ನು ಆರೋಪಿ ಬೇರೆ ಎಲ್ಲಿಯಾದರೂ ನೀಡಿದ್ದನಾ ಎಂದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ