Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರಿ ನೌಕರಿ ಆಮಿಷವೊಡ್ಡಿ ಲಕ್ಷಾಂತರ ವಂಚಿಸಿದ್ದ ಚಿತ್ರದುರ್ಗದ ಶ್ರೀನಿನಾಥ್ ಬಂಧನ

Advertisement
ಸರ್ಕಾರಿ ನೌಕರಿ ಆಮಿಷವೊಡ್ಡಿ ಲಕ್ಷಾಂತರ ವಂಚಿಸಿದ್ದ ಚಿತ್ರದುರ್ಗದ ಶ್ರೀನಿನಾಥ್ ಬಂಧನ
ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ರಾಜಕೀಯ ನಾಯಕನಂತೆ ಸೋಗು ಹಾಕಿ, ಜನರಿಗೆ ಸರ್ಕಾರಿ ನೌಕರಿ ಕೊಡಿಸುವ ಆಮಿಷವೊಡ್ಡಿ ದಾವಣಗೆರೆಯಲ್ಲಿ ಲಕ್ಷಾಂತರ ರೂಪಾಯಿ ವಂಚಿಸಿದ್ದ ಆರೋಪಿ ಶ್ರೀನಾಥ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ರಾಜಕಾರಣಿಯಂತೆ ಬಿಂಬಿಸಿಕೊಂಡಿರುವ ಚಿತ್ರದುರ್ಗದ ಶ್ರೀನಾಥ್
, ಹಲವು ವರ್ಷಗಳಿಂದ ಸರ್ಕಾರಿ ಉದ್ಯೋಗದ ಆಕಾಂಕ್ಷಿಗಳಿಗೆ ವಂಚನೆ ಮಾಡಿದ್ದಾನೆ. ಜಲಸಂಪನ್ಮೂಲ ಇಲಾಖೆಯಲ್ಲಿ ಡಿ ದರ್ಜೆ ಹುದ್ದೆಗಳನ್ನು ಕೊಡಿಸುವುದಾಗಿ ನಂಬಿಸಿ, ಪ್ರತಿ ವ್ಯಕ್ತಿಯಿಂದ ಮೂರರಿಂದ ನಾಲ್ಕು ಲಕ್ಷ ರೂ.ಗಳನ್ನು ಪಡೆದಿದ್ದಾನೆ.

ನಾಗರಾಜ್ ಎಂಬುವವರು ತಮ್ಮ ಮಗನಿಗೆ ಅಟೆಂಡರ್ ಹುದ್ದೆಗಾಗಿ ಮೂರುವರೆ ಲಕ್ಷ ರೂಪಾಯಿ ನೀಡಿದ್ದು, ಶ್ರೀನಾಥ್ ನಕಲಿ ನೇಮಕಾತಿ ಪತ್ರ ಮತ್ತು ಸರ್ಕಾರಿ ಸೀಲ್‌ಗಳನ್ನು ಬಳಸಿ ವಂಚಿಸಿದ್ದ.

ಈ ಬಗ್ಗೆ ತಿಳಿಯಲು ಬೆಂಗಳೂರಿನ ಜಲಸಂಪನ್ಮೂಲ ಕಚೇರಿಗೆ ತೆರಳಿದಾಗ ಮೋಸ ಹೋಗಿರುವುದು ನಾಗರಾಜ್ ಅವರಿಗೆ ತಿಳಿದುಬಂದಿದೆ. ನಂತರ ನಾಗರಾಜ್ ಹಾಗೂ ಇತರ ಸಂತ್ರಸ್ತರು ಆರೋಪಿ ಶ್ರೀನಾಥ್‌ ವಿರುದ್ಧ ದಾವಣಗೆರೆ ಕೆಟಿಜೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಆರೋಪಿ ಶ್ರೀನಾಥ್ ಹತ್ತಾರು ಜನರಿಗೆ ಉದ್ಯೋಗ ಕೊಡಿಸುವ ಆಮಿಷವೊಡ್ಡಿ ಲಕ್ಷಾಂತರ ವಂಚನೆ ಎಸಗಿರುವ ಶಂಕೆ ವ್ಯಕ್ತವಾಗಿದೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ