Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾರ್ಚ್-14 ರಂದು ನಗರಕ್ಕೆ ಸೋಮನಾಥ ಜ್ಯೋತಿರ್ಲಿಂಗ ಆಗಮನ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಮಾರ್ಚ್ 14ರ ಶನಿವಾರದಂದು ತಾಲ್ಲೂಕಿನ ಸೋಮೇಶ್ವರ ದೇವಾಲಯದಲ್ಲಿ ಬೆಳಿಗ್ಯೆ 7ರಿಂದ 11 ಗಂಟೆವರೆಗೆ ಸೋಮನಾಥ ಜ್ಯೋತಿರ್ಲಿಂಗ  ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಹಾರ್ಟ್ ಆಫ್ ಲಿವಿಂಗ್ ಪ್ರಮುಖ ಸುನಿಲ್  ವೆಂಕಟೇಶ್ ತಿಳಿಸಿದರು.


ನಗರದ ಹಾರ್ಟ್ ಆಫ್ ಲಿವಿಂಗ್  ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮೊಘಲರಿಂದ ಹಲ್ಲೆಗೊಳಗಾಗಿ ಛಿದ್ರವಾಗಿದ್ದ ಸೋಮನಾಥ  ಜ್ಯೋತಿರ್ಲಿಂಗವು ಸೀತಾ ರಾಮ ಶಾಸ್ತ್ರಿಯವರ ಮುಖೇನಾ 2025 ರಲ್ಲಿ ಮರಳಿ ಹಾರ್ಟ್ ಆಫ್ ಲಿವಿಂಗ್ ನ ಶ್ರೀ ರವಿ ಶಂಕರ್ ಗುರೂಜಿ ಕೈ ಸೇರಿದ್ದು , ದೇಶದಾದ್ಯಂತ ಜನರ ದರ್ಶನಕ್ಕೆ ಅವಕಾಶ ಕಲ್ಪಿಸಬೇಕೆಂಬ ಗುರೂಜಿಯವರ ಮಹತ್ಸಂಕಲ್ಪದಿಂದ 1000 ವರ್ಷಗಳ ಪುರಾತನ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ದರ್ಶನವನ್ನು ದೊಡ್ಡಬಳ್ಳಾಪುರ ಜನತೆಗೆ ಮಾರ್ಚ್ 14 ರಂದು ಕಲ್ಪಿಸಲಾಗಿದೆ ಎಂದರು.

100 ದಂಪತಿಗಳಿಂದ ವಿಶೇಷ ರುದ್ರಾರ್ಚನೆ, ಮಾರ್ಚ್ 14 ರಂದು ವಿಶೇಷ ರುದ್ರಾಭಿಷೇಕ ಆಯೋಜನೆ ಮಾಡಿದ್ದು, ಈ ಪೂಜಾ ಕಾರ್ಯಕ್ರಮದಲ್ಲಿ 100 ದಂಪತಿಗಳಿಗೆ ಅವಕಾಶ ಕಲ್ಪಿಸಿದ್ದು  ಮುಂಗಡ ಬುಕಿಂಗ್ ವ್ಯವಸ್ಥೆ ಮಾಡಲಾಗಿದೆ ಹಾಗೂ ದೇವರ ದರ್ಶನಕ್ಕೆ ಬರುವ ಭಕ್ತಾದಿಗಳ ದರ್ಶನಕ್ಕೆ ಸೂಕ್ತ ಅವಕಾಶ ಕಲ್ಪಿಸಿದ್ದು  ಜಿಲ್ಲೆ ಹಾಗೂ ತಾಲ್ಲೂಕಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ  ದೇವರ ಕೃಪೆಗೆ ಪಾತ್ರರಾಗುವಂತೆ ಕೋರಲಾಗಿದೆ.

ಸುದ್ದಿ ಗೋಷ್ಠಿಯಲ್ಲಿ ಹಿರಿಯ ಶಿಕ್ಷಕ ವೆಂಕಟ ರಾಮು, ಸ್ವಯಂ ಸೇವಕರು ಮಂಜುನಾಥ್, ಶಿಲ್ಪಾ, ಸುನಿಲ್ ವೆಂಕಟೇಶ್ ಹಾಜರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ