Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಅರವಿಂದ್ ಕೇಜ್ರಿವಾಲ್

Advertisement
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಅರವಿಂದ್ ಕೇಜ್ರಿವಾಲ್
ಚಂದ್ರವಳ್ಳಿ ನ್ಯೂಸ್, ಹೊಸದಿಲ್ಲಿ :
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಘೋಷಿಸಿದ್ದಾರೆ. ಇನ್ನೆರಡು ದಿನಗಳಲ್ಲಿ ರಾಜೀನಾಮೆ ಸಲ್ಲಿಸಿ, ಚುನಾವಣೆಗೆ ಹೋಗುವುದಾಗಿ ಅವರು ತಿಳಿಸಿದ್ದಾರೆ.

ದೆಹಲಿ ಸರ್ಕಾರದ ಅಬಕಾರಿ ನೀತಿ ಪರಿಷ್ಕರಣೆ ಕೇಸ್ ನಲ್ಲಿ ಅವರು ಮಾರ್ಚ್ ತಿಂಗಳಲ್ಲಿ ಬಂಧನಕ್ಕೊಳಗಾಗಿದ್ದರು. ಇದೇ ವಾರ ಅವರು ಜಾಮೀನಿನ ಮೇರೆಗೆ ದೆಹಲಿ ಜೈಲಿನಿಂದ ಹೊರಬಂದಿದ್ದರು.ಜಾಮೀನಿನ ಮೇರೆಗೆ ಹೊರಬಂದ ಕೂಡಲೇ ಅವರು ರಾಜೀನಾಮೆ ಘೋಷಿಸಿರುವುದು ಆಪ್ ಕಾರ್ಯಕರ್ತರು ಸೇರಿದಂತೆ ಹಲವರನ್ನು ದಿಗ್ರ್ಭಮೆಗೊಳಿಸಿದೆ.

ಆದರೆ, ಕೇಜ್ರಿವಾಲ್ ಅವರು ತಮ್ಮ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ. 'ಜನತಾ ನ್ಯಾಯಾಲಯದ ತೀರ್ಪು ಬೇಕು'ದೆಹಲಿ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿಯಿವೆ. ಅಷ್ಟರಲ್ಲಾಗಲೇ ನನ್ನ ರಾಜಕೀಯ ಜೀವನವನ್ನು ಹತ್ತಿಕುವ ಕೆಲಸವನ್ನು ಬಿಜೆಪಿ ಮಾಡಿದೆ. ನನಗೆ ಕಾನೂನಿನ ನ್ಯಾಯಾಲಯದಲ್ಲಿ ಈಗಾಗಲೇ ನ್ಯಾಯ ಸಿಕ್ಕಿದೆ. ಅದರ ಜೊತೆಗೆ ನನಗೆ ಜನತಾ ನ್ಯಾಯಾಲಯದಲ್ಲಿ ತೀರ್ಪು ಬೇಕಿದೆ. ಅವರು ನಾನು ನಿರಪರಾಧಿಯೆಂದು ಎನ್ನಿಸಿ, ನಾನು ಪ್ರಾಮಾಣಿಕ ಎಂದು ತೀರ್ಮಾನಿಸಿದರೆ,

ಅದಕ್ಕಿಂತ ದೊಡ್ಡ ಸಂತೋಷ ಬೇರೇನೂ ಇಲ್ಲ ಎಂದು ತಿಳಿಸಿದರು. ಜನರು ತಮ್ಮ ಆದೇಶ ಕೊಟ್ಟ ನಂತರವಷ್ಟೇ ನಾನು ಸಿಎಂ ಕುರ್ಚಿಯ ಮೇಲೆ ಕುಳಿತುಕೊಳ್ಳುತ್ತೇನೆ ಎಂದು ಹೇಳಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ