ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ಆರ್ಯ ವೈಶ್ಯ ಸಮುದಾಯಗಳ ಅಭಿವೃದ್ಧಿ ನಿಗಮವು 2026-27ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಹ ಆರ್ಯ ವೈಶ್ಯ ಸಮುದಾಯದವರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸೆಪ್ಟೆಂಬರ್ 15 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಬ್ಯಾಂಕುಗಳ ಸಹಯೋಗದೊಂದಿಗೆ ಆರ್ಯ ವೈಶ್ಯ ಆಹಾರ ವಾಹಿನಿ/ವಾಹಿನಿ ಯೋಜನೆ, ವಾಸವಿ ಗಂಗಾ ಕಲ್ಯಾಣ ಯೋಜನೆ ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆಗಳಿಗೆ ಈ ಸೌಲಭ್ಯ ದೊರೆಯಲಿದೆ.
ಸಾಮಾನ್ಯ ವರ್ಗದಲ್ಲಿನ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದ, ಕರ್ನಾಟಕದಲ್ಲಿ ವಾಸವಾಗಿರುವ ಹಾಗೂ ಚಾಲ್ತಿಯಲ್ಲಿರುವ "ನಮೂನೆ-ಜಿ" ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹೊಂದಿರುವವರು ಅರ್ಜಿ ಸಲ್ಲಿಸಬಹುದು. ಅರ್ಜಿದಾರರ ಮೊಬೈಲ್ ಸಂಖ್ಯೆ ಆಧಾರ್‍ನೊಂದಿಗೆ ಜೋಡಣೆಯಾಗಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಆಗಿರಬೇಕು. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯ ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ಮೂಲಕ ಅರ್ಹರನ್ನು ಆಯ್ಕೆ ಮಾಡಲಾಗುತ್ತದೆ.
ಆಸಕ್ತರು ನಿಗಮದ ವೆಬ್‍ಸೈಟ್ http://kacdc.karnataka.gov.in ಮೂಲಕ ಅಕ್ಟೋಬರ್ 15 ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ನಿಗಮದ ಸಹಾಯವಾಣಿ ಸಂಖ್ಯೆ 9448451111 / 96116 12302 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ವ್ಯವಸ್ಥಾಪಕ ಹೆಚ್.ಸಿ.ಸಾತ್ವಿಕ್ ತಿಳಿಸಿದ್ದಾರೆ.




