Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆರ್ಯವೈಶ್ಯ ವಿದ್ಯಾ ಸಂಸ್ಥೆ ನಿಸ್ವಾರ್ಥ ಸೇವಾ ಮನೋಭಾವದಿಂದ ಕೆಲಸಮಾಡುತ್ತಿದೆ: ಕೆ.ವಿ.ಅಮರೇಶ್

Advertisement
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಆರ್ಯವೈಶ್ಯ ವಿದ್ಯಾ ಸಂಸ್ಥೆಗಳ ಒಕ್ಕೂಟ ಕಳೆದ 40 ವರ್ಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು, ಯಾವುದೇ ಫಲಅಪೇಕ್ಷೆ ಇಲ್ಲದೆ ನಿಸ್ವಾರ್ಥ ಸೇವಾಮನೋಭಾವದಿಂದ ಕೆಲಸ ಮಾಡುತ್ತಿದೆ. ಸಮಾಜಕ್ಕೆ ಸಮುದಾಯದ ವತಿಯಿಂದ ಉತ್ತಮಶಿಕ್ಷಣ ಕೊಡಿಸುವ ಉದ್ದೇಶ ಮಹಾಸಭಾ ಹೊಂದಿದೆ ಎಂಬುದಾಗಿ ರಾಜ್ಯ ಆರ್ಯವೈಶ್ಯ ವಿದ್ಯಾಸಂಸ್ಥೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕೆ. ವಿ.ಅಮರೇಶ್ ಹೇಳಿದರು.

ನಗರದ ಶ್ರೀವಾಗ್ದೇವಿ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಕರ್ನಾಟಕ ಆರ್ಯವೈಶ್ಯ ವಿದ್ಯಾ ಸಂಸ್ಥೆಗಳ ಒಕ್ಕೂಟದ ಆಡಳಿತ ಮಂಡಳಿಯವರಿಗೆ ಕರ್ನಾಟಕ ಆರ್ಯವೈಶ್ಯ ವಿದ್ಯಾ ಸಂಸ್ಥೆಗಳ ಒಕ್ಕೂಟ ಮತ್ತು ಶ್ರೀ ವಾಗ್ದೇವಿ ವಿದ್ಯಾ ಸಂಸ್ಥೆ ವತಿಯಿಂದ ಹಮ್ಮಿಕೊಳ್ಳಲಾಗಿ ಒಂದು ದಿನದ ವಿಶೇಷ ಶೖಕ್ಷಣಿಕ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜದ ಅಭಿವೃದ್ಧಿಗೆ ಮುಂದಾಗಿ ತನ್ನದೇ ಆದ ವಿದ್ಯಾ ಸಂಸ್ಥೆಗಳನ್ನು ಸ್ಥಾಪಿಸಿಕೊಂಡು ಶಿಕ್ಷಣ ಕ್ಷೇತ್ರದ ಉನ್ನತಿಗೆ ಶ್ರಮಿಸುತ್ತಿದೆ ಎಂಬುದಾಗಿ ಅವರು ಹೇಳಿದರು.

ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿ ದಾವಣಗೆರೆ ಶ್ರೀನಿವಾಸ್ ಮಾತನಾಡಿ ಶಿಕ್ಷಣವೆಂಬದು ಜ್ಞಾನ, ಸತತ ಪರಿಶ್ರಮ, ಸಾಧನೆ ಅನುಭವದ ಮೂಲಕ ಪಡೆಯುವುದಾಗಿದೆ. ಶಿಕ್ಷಣಸಂಸ್ಥೆಗಳು ನೆಪ ಮಾತ್ರಕ್ಕೆ ಶಿಕ್ಷಣನೀಡದೆ.

ಶಿಕ್ಷಣದಲ್ಲಿ ಗುಣಮಟ್ಟ, ತಾಂತ್ರಿಕತೆ ಕೌಶಲ್ಯ. ಆಧುನಿಕತೆ ಸೌಲಭ್ಯಗಳನ್ನು ನೀಡುವಲ್ಲಿ ಮುಂದಾಗಬೇಕು. ಶಿಕ್ಷಕರಿಗೆ ಕಾಲಕಾಲಕ್ಕೆ ತರಬೇತಿಗಳನ್ನು ಕೊಡಿಸಬೇಕು. ತರಗತಿ ಕೋಣೆಯಲ್ಲಿ ಶಿಕ್ಷಕರು ಕಲಿಕೆ ಮತ್ತು ಕಲಿಸುವಿಕೆ ಸ್ವತಂತ್ರ ಮತ್ತು ಪರಿಶ್ರಮದಾಯಕವಾಗಿರಬೇಕು.

ಮಕ್ಕಳ ಕಲಿಕಾ ಸಾಮರ್ಥ್ಯದ ಬಗ್ಗೆ ಶಿಕ್ಷಕರ ಹಾಗೂ ಪೋಷಕರ ಸಂಪೂರ್ಣ ಸಹಕಾರವಿರಬೇಕು.ವಿದ್ಯಾ ಸಂಸ್ಥೆಗಳ ಮೇಲೆ ಪೋಷಕರ ನಂಬಿಕೆ ವಿಶ್ವಾಸ ಬರುವಂತ ಶಿಕ್ಷಣವನ್ನ ಕೊಡಿಸುವಲ್ಲಿ ನಡೆಯುತ್ತಿರಬೇಕು ವಿಶೇಷವಾಗಿ ಕಲಿಕೆಯಲ್ಲಿ ಕೌಶಲ್ಯಗಳನ್ನು ಅಳವಡಿಸಬೇಕು ಕಲಿಕೆ ಸಂತಸದಾಯಕವಾಗಿರಬೇಕು ಎಂದು ಅವರು ಹೇಳಿದರು.
ಈ ಕಾರ್ಯಕ್ರಮದಲ್ಲಿ
ಆರ್ಯವೈಶ್ಯ ಮಂಡಳಿ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ