LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿಜೃಂಭಣೆಯಿಂದ ನಡೆದ ಆಷಾಡ ಏಕಾದಶಿ ಪೂಜೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲ್ಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ಆಚರಣೆಗಳೊಂದಿಗೆ ವಿಜೃಂಭಣೆಯಿಂದ ಆಚರಿಸಲಾಯಿತು.

ಹಬ್ಬದ ಅಂಗವಾಗಿ ಗ್ರಾಮದಲ್ಲಿ ತಮಟೆ ವಾದ್ಯದ ಮೊಳಗುವಿಕೆಯಲ್ಲಿ ಪ್ರತಿಯೊಂದು ಮನೆಯಿಂದ ಯುವತಿಯರು, ಮಹಿಳೆಯರು ಹಾಗೂ ಪುಟಾಣಿ ಮಕ್ಕಳು ತಂಬಿಟ್ಟಿನ ಆರತಿ ಹೊತ್ತು ಗ್ರಾಮದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ನಡೆಸಿದರು. ಬಳಿಕ ಗ್ರಾಮದ ಹೊರವಲಯದಲ್ಲಿರುವ ನೆಲೆದೇವರಾದ ಶ್ರೀ ಮುತ್ತುರಾಯಸ್ವಾಮಿ ದೇವಾಲಯಕ್ಕೆ ತೆರಳಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಗ್ರಾಮದ ಸುಖ, ಶಾಂತಿ ಹಾಗೂ ಸಮೃದ್ಧಿಗಾಗಿ ಪ್ರಾರ್ಥಿಸಿದರು.

ಪೂಜೆ ಬಳಿಕ ಭಕ್ತರಿಗೆ ಪ್ರಸಾದ ವಿತರಿಸಲಾಯಿತು. ಇದೇ ವೇಳೆ ಪಟಾಕಿ ಸಿಡಿಸಿ ಹಬ್ಬದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಲಾಯಿತು. ಗ್ರಾಮಸ್ಥರ ಪ್ರಕಾರ, ಈ ಹಬ್ಬವನ್ನು ಗ್ರಾಮ ಜಾತ್ರೆಯ ರೀತಿಯಲ್ಲಿ ಆಚರಿಸುವ ಸಂಪ್ರದಾಯವಿದ್ದು, ನೆಂಟರು ಹಾಗೂ ಹಿತೈಷಿಗಳನ್ನು ಮನೆಗಳಿಗೆ ಆಹ್ವಾನಿಸಿ ಸಿಹಿ ಹಬ್ಬದ ಊಟವನ್ನು ಬಡಿಸಲಾಗುತ್ತದೆ. 

ಮಧುರನಹೊಸಹಳ್ಳಿ ಗ್ರಾಮದಲ್ಲಿ ಆಷಾಡ ಏಕಾದಶಿ ಆಚರಣೆಗೆ ವಿಶೇಷ ಮಹತ್ವವಿದ್ದು, ಪ್ರತಿವರ್ಷ ಗ್ರಾಮಸ್ಥರೆಲ್ಲರೂ ಒಗ್ಗಟ್ಟಿನಿಂದ ಪಾಲ್ಗೊಂಡು ಸಂಪ್ರದಾಯವನ್ನು ಉಳಿಸಿಕೊಂಡು ಬರುತ್ತಿದ್ದಾರೆ. ಹಬ್ಬದಲ್ಲಿ ಗ್ರಾಮಸ್ಥರು, ಹಿರಿಯರು, ಯುವಕರು, ಮಹಿಳೆಯರು ಹಾಗೂ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಭಕ್ತಿಭಾವದಿಂದ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈತರಿಗೆ 3 ದಿನಗಳ ವಸತಿಯುಕ್ತ ಉಚಿತ ಸಾವಯವ ಕೃಷಿ ತರಬೇತಿ ಹಾಗೂ ಪ್ರವಾಸಬಿಡದಿ ಟೌನ್‌ಶಿಪ್‌ ಯೋಜನೆ ವಿರುದ್ಧ ಕುಮಾರಸ್ವಾಮಿ, ಆರ್.ಅಶೋಕ್ ಚಾಲನೆ: ಪಾದಯಾತ್ರೆಯಲ್ಲಿ ಹಿರಿಯೂರು ಮುಖಂಡರು ಭಾಗಿಸರ್ಕಾರಿ ಶಾಲೆಗೆ ಭೂಮಿ ದಾನ ಅತ್ಯಂತ ಶ್ರೇಷ್ಠ ಕಾರ್ಯ-ಎನ್. ಶ್ರೀನಿವಾಸ್ ಚಿನ್ಮೂಲಾದ್ರಿ ಅಕ್ಷರೋತ್ಸವ ಕವಿಗೋಷ್ಟಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿದ ಡಾ.ಎಲ್.ಪಾಲಾಕ್ಷಯ್ಯಬಿಡದಿ ಟೌನ್‌ಶಿಪ್ ವಿರೋಧಿ ಪಾದಯಾತ್ರೆಗೆ ಸಿಎಂ ಡಿ.ಕೆ. ಶಿವಕುಮಾರ್ ಪ್ರತ್ಯುತ್ತರ:ಬಿಡದಿ ಟೌನ್‌ಶಿಪ್ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಸಮರ: ಬೈರಮಂಗಲದಿಂದ ಬೆಂಗಳೂರಿಗೆ 'ಪಾದಯಾತ್ರೆ' ಆರಂಭ"ನನ್ನನ್ನು ಕೊಂಡುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ": ಹೆಚ್.ಡಿ. ಕೆ ವಾಗ್ದಾಳಿ ಖಾತೆ ಹಂಚಿಕೆ, ಸಂಪುಟ ಪುನಾರಚನೆ ಕಸರತ್ತು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ ಸಿಎಂ ಶಿವಕುಮಾರ್ಪೊಲೀಸರ ಮೆಗಾ ಆಪರೇಷನ್: 105 ಅಕ್ರಮ ಬಾಂಗ್ಲಾ ವಲಸಿಗರ ಬಂಧನ, ಗಡಿಪಾರಿಗೆ ಕ್ರಮಸಚಿವ ನಾಗೇಂದ್ರ ರಾಜೀನಾಮೆಗೆ ಶ್ರೀರಾಮುಲು ಆಗ್ರಹ; ರೆಡ್ಡಿ ಬ್ರದರ್ಸ್‌ಗೆ ಈಶ್ವರ್ ಖಂಡ್ರೆ ತಿರುಗೇಟು