Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಎಸ್ ಪಿ ಬಲಿಷ್ಠ ಗೊಳಿಸುವ ನಿಟ್ಟಿನಲ್ಲಿ ಆತ್ಮಾವಲೋಕನ ಸಭೆ-ಅಶೋಕ್ ಚಕ್ರವರ್ತಿ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ಸಾರ್ವಜನಿಕರು ತಮ್ಮ ಮತದಾನದ ಹಕ್ಕನ್ನು ಮಾರಿಕೊಳ್ಳದಂತೆ ಮುಂಬರುವ ಚುನಾವಣೆಗಳಲ್ಲಿ ಮತದಾನದ ಮಹತ್ವವನ್ನು
  ಸಾರುವ ನಿಟ್ಟಿನಲ್ಲಿ  ಪ್ರತಿ ಬೂತ್ ಮಟ್ಟದ ಕಾರ್ಯಕರ್ತರು ಶ್ರಮಿಸಬೇಕೆಂದು ಬಹುಜನ ಸಮಾಜ ಪಕ್ಷದ ರಾಜ್ಯ ಸಂಯೋಜಕ ಅಶೋಕ್ ಚಕ್ರವರ್ತಿ ತಿಳಿಸಿದರು.

ಸ್ಥಳೀಯವಾಗಿ ಪಕ್ಷ ಸಂಘಟನೆಯನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಕಾರ್ಯಕರ್ತರ ಆತ್ಮವಲೋಕನ ಸಭೆಯನ್ನು  ಆಯೋಜನೆ ಮಾಡಲಾಗಿದ್ದು ತಾಲೂಕು ಹಾಗೂ ಹೋಬಳಿ ಮಟ್ಟಗಳ  ಪುನರ್ ರಚನೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಕುರಿತಂತೆ  ಪೂರ್ವಭಾವಿ ಸಭೆ ನಡೆಸಲಾಗಿದೆ ಎಂದು ಬಹುಜನ ಸಮಾಜ ಪಾರ್ಟಿಯ  ರಾಜ್ಯ ಸಂಯೋಜಕರಾದ ಅಶೋಕ್ ಚಕ್ರವರ್ತಿ ತಿಳಿಸಿದರು.


 ನಗರದ ಕನ್ನಡ ಜಾಗೃತ ಭವನದಲ್ಲಿ ನಡೆದ ನೂತನ ಕಾರ್ಯಕರ್ತರ ಸೇರ್ಪಡೆ ಕಾರ್ಯಕ್ರಮ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ನಮ್ಮ ಪಕ್ಷದ ತತ್ವ ಸಿದ್ಧಾಂತವನ್ನು ಒಪ್ಪಿ  ಹಲವು ಪ್ರಮುಖರು ಇಂದು ಅಧಿಕೃತವಾಗಿ ನಮ್ಮ ಪಕ್ಷಕ್ಕೆ ಸೇರ್ಪಡೆಯಗುತ್ತಿದ್ದು, ಬಹುಜನ ಸಮಾಜ ಪಾರ್ಟಿ ಮುಂದಿನ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತಿ ಚುನಾವಣೆಗಳಲ್ಲಿ ಸ್ಪರ್ದಿಸಲು ತಯಾರಿ ನಡೆಸುತ್ತಿದೆ.ಪ್ರಮುಖವಾಗಿ ರಾಜ್ಯದ ಪ್ರತಿ ಗ್ರಾಮಗಳಲ್ಲಿಯೂ  ಬಹುಜನ ಸಮಾಜ ಪಕ್ಷದ ಸಂಘಟನೆ ಬಲಿಷ್ಠಗೊಳಿಸುವ ನಿಟ್ಟಿನಲ್ಲಿ  ಕಾರ್ಯಕರ್ತರಿಗೆ ತರಬೇತಿ ಶಿಬಿರಗಳ ಆಯೋಜನೆ ಮಾಡಲಾಗುತ್ತಿದೆ ಎಂದರು.

ನೂತನವಾಗಿ ಪಕ್ಷಕ್ಕೆ ಸೇರ್ಪಡೆಯಾದವರನ್ನು ಪಕ್ಷದ ರಾಜ್ಯ ಸಂಯೋಜಕ ರಾದ ಅಶೋಕ್ ಚಕ್ರವರ್ತಿ ಪಕ್ಷದ ಶಾಲು ಹೊಡಿಸಿ ಪಕ್ಷಕ್ಕೆ ಸ್ವಾಗತಿಸಿದರು.

 ಬಹುಜನ ಸಮಾಜ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್ ನರಸಿಂಹಯ್ಯ ಮಾತನಾಡಿ ಪಕ್ಷವನ್ನು ತಳಮಟ್ಟದಿಂದ ಕಟ್ಟುವ  ಕಾರ್ಯಕರ್ತರ ಆತ್ಮವಿಶ್ವಾಸವನ್ನು ಹೆಚ್ಚಿಸುವ ನಿಟ್ಟಿನಲ್ಲಿ ನಿರಂತರ ಸಭೆ ತರಬೇತಿಗಳನ್ನು  ರಾಜ್ಯಾದ್ಯಂತ ನಮ್ಮ ಮಾರ್ಗದರ್ಶಕರು ಹಾಗೂ ರಾಜ್ಯಸಂಯೋಜಕರಾದ ಅಶೋಕ್ ಚಕ್ರವರ್ತಿ ರವರ ನೇತೃತ್ವದಲ್ಲಿ  ನೆಡೆಸುತ್ತಿದ್ದು ಮುಂಬರುವ ಚುನಾವಣೆಗಳಲ್ಲಿ ನಮ್ಮ ಪಕ್ಷದಿಂದ  ಅಭ್ಯರ್ಥಿಗಳು ಕಣಕ್ಕಿಳಿಸಲಿದ್ದೇವೆ, ಪಕ್ಷದ ಗೆಲುವುಗಾಗಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಶ್ರಮಿಸಲು ಮುಂದಾಗಬೇಕು ಎಂದರು.

  ಬಹುಜನ ಸಮಾಜ ಪಕ್ಷಕ್ಕೆ ನೂರಾರು ಕಾರ್ಯಕರ್ತರು ಸ್ವಯಂ ಪ್ರೇರಿತರಾಗಿ  ಬಂದು ಸೇರ್ಪಡೆಯಗುತ್ತಿರುವುದು ಸಂತಸ ತಂದಿದೆ ಅಲ್ಲದೇ ಪ್ರತಿಯೊಬ್ಬರಲ್ಲೂ ಪಕ್ಷ ಕಟ್ಟುವ  ಹುಮ್ಮಸ್ಸು  ದುಪ್ಪಟ್ಟಾಗಿದ್ದು   ಬಹುಜನ ಸಮಾಜ ಪಕ್ಷವು  ಮುಂದಿನ ದಿನಗಳಲ್ಲಿ ರಾಜ್ಯದ ಅಧಿಕಾರ ಹಿಡಿಯುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದರು .

ಕಾರ್ಯಕ್ರಮದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ  ಹನುಮಂತರಾಯಪ್ಪ, ರಾಜ್ಯ ಕಾರ್ಯದರ್ಶಿ ಬಂಗಾರಪ್ಪ,ಜಿಲ್ಲಾಧ್ಯಕ್ಷರಾದ  ನರಸಿಂಹರಾಜು, ಬೆಂಗಳೂರು ಗ್ರಾಮಾಂತರ ಉಸ್ತುವಾರಿಗಳಾದ ಆರ್. ಸೋಮಶೇಖರ್, ಜಿಲ್ಲಾ ಉಪಾಧ್ಯಕ್ಷರಾದ ದೊಡ್ಡಯ್ಯಹೊಸಕೋಟೆ ತಾಲೂಕು ಅಧ್ಯಕ್ಷ ಬಲರಾಮು, ಹೊಸಕೋಟೆ ಉಸ್ತುವಾರಿ ನಾರಾಯಣಸ್ವಾಮಿ, ದೊಡ್ಡಬಳ್ಳಾಪುರ 

ತಾಲೂಕು ಅಧ್ಯಕ್ಷ ಪಿ. ಎನ್. ಪಿಳ್ಳಪ್ಪನೆಲಮಂಗಲ ಉಸ್ತುವಾರಿ ಗಂಗಾಧರಪ್ಪ, ಸೌಭಾಗ್ಯಮ್ಮ, ನರಸಿಂಹಮೂರ್ತಿ, ದೇವನಹಳ್ಳಿ ಉಸ್ತುವಾರಿಗಳಾದ ನಂಜಪ್ಪ, ನಾಗಮಣಿ, ದೇವನಹಳ್ಳಿ ತಾಲ್ಲೂಕು ಅಧ್ಯಕ್ಷ ರಾಮಾಂಜಿನಪ್ಪಕಾರ್ಯದರ್ಶಿ ಸೀನಪ್ಪ, ವಿಮಲಾ ಸೇರಿದಂತೆ ಹಲವು ಪ್ರಮುಖರು ಹಾಜರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ