Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ನಕಲಿ ಗಾಂಧಿಗಳು ನೀಲಿ ಶಾಲು ಧರಿಸಿದ್ದ ಪೋಟೋ ತೋರಿಸಲು ಸವಾಲ್ ಹಾಕಿದ ಅಶೋಕ್

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸ್ವಾಮಿ ಪ್ರಿಯಾಂಕ್ ಖರ್ಗೆ ಅವರೇ, ನಾವು ನಿಮ್ಮ ನಕಲಿ ಗಾಂಧಿ ಕಾಂಗ್ರೆಸ್ ಪಕ್ಷದವರ ರೀತಿ ಎಲೆಕ್ಷನ್ ಹಿಂದೂಗಳು ಅಲ್ಲ, ಎಲೆಕ್ಷನ್ ಅಂಬೇಡ್ಕರ್ ವಾದಿಗಳೂ ಅಲ್ಲ ಎಂದು ಬಿಜೆಪಿ ನಾಯಕ, ವಿರೋಧ ಪಕ್ಷಗಳ ನಾಯಕ ಆರ್.ಅಶೋಕ್ ತರಾಟೆ ತೆಗೆದುಕೊಂಡಿದ್ದಾರೆ.

ನನ್ನದೊಂದು ಸವಾಲು. ತಾವು ಹೇಳಿಕೊಳ್ಳುವಂತೆ ತಮ್ಮ ನಕಲಿ ಗಾಂಧಿ ಕಾಂಗ್ರೆಸ್ ಪಕ್ಷದವರು ನಿಜವಾಗಿಯೂ ಅಂಬೇಡ್ಕರ್ ವಾದಿಗಳಾಗಿದ್ದಾರೆ ನೆಹರು ಅವರಾಗಲಿ, ಇಂದಿರಾ ಗಾಂಧಿ ಅವರಾಗಲಿ, ರಾಜೀವ್ ಗಾಂಧಿ ಅವರಾಗಲಿ ನೀಲಿ ಶಾಲು ಧರಿಸಿದ್ದ ಒಂದೇ ಒಂದು ಫೋಟೋ ತೋರಿಸಿ ನೋಡೋಣ ಎಂದು ಅಶೋಕ್ ಸವಾಲ್ ಹಾಕಿದ್ದಾರೆ.

 ಅದು ಹೋಗಲಿ ಬಿಡಿ. ಪಾಪ ನಿಮ್ಮ ನಕಲಿ ಗಾಂಧಿ ಪಕ್ಷದ ಥರ್ಡ್ ಟೈಂ ಫೇಲ್ ಸ್ಟಾರ್ ಕಾಮಿಡಿಯನ್ ಚುನಾವಣೆ ಬಂದಾಗಲೆಲ್ಲಾ ಕೇಸರಿ ಬಟ್ಟೆ, ಕೇಸರಿ ಶಾಲು, ಹಣೆಗೆ ವಿಭೂತಿ, ಕುಂಕುಮ ಹಚ್ಚಿಕೊಂಡು ದೇವಸ್ಥಾನಕ್ಕೆ ಹೋಗುತ್ತಾರೆ. ತಾನು ಕೌಲ ದತ್ತಾತ್ರೇಯ ಗೋತ್ರದ ಬ್ರಾಹ್ಮಣ ಎಂದು ಹೇಳಿಕೊಳ್ಳುತ್ತಾರೆ. ಆದರೆ ಅವರ ಮುತ್ತಜ್ಜ ನೆಹರೂ ಅವರಾಗಲಿ, ಅಜ್ಜಿ ಇಂದಿರಾ ಗಾಂಧಿ ಅವರಾಗಲಿ, ಅಪ್ಪ ರಾಜೀವ್ ಗಾಂಧಿ ಅವರಾಗಲಿ, ಅಮ್ಮ ಸೋನಿಯಾ ಗಾಂಧಿ ಅವರಾಗಲಿ ಒಂದು ದಿನವೂ ಕೇಸರಿ, ಕುಂಕುಮ, ಗುಡಿ ಗೋಪುರಗಳ ಹತ್ತಿರವೂ ಸುಳಿದಿದ್ದನ್ನು ನಾನಂತೂ ಕಂಡಿಲ್ಲ. ನೀವೇನಾದರೂ ಕಂಡಿದ್ದರೆ ಒಂದು ಫೋಟೋ ತೋರಿಸಿ.

ಇನ್ನು ಅಂಬೇಡ್ಕರ್ ಅವರನ್ನ ನಿಮ್ಮ ನಕಲಿ ಗಾಂಧಿ ಕಾಂಗ್ರೆಸ್ ಪಕ್ಷ ಹೇಗೆ ನಡೆಸಿಕೊಂಡಿತು ಎಂದು ಮತ್ತೆ ಮತ್ತೆ ಹೇಳಬೇಕಾಗಿಲ್ಲ. ಇತ್ತೀಚೆಗೆ ಸಂಸತ್ತಿನಲ್ಲಿ ಸಂವಿಧಾನದ ಬಗ್ಗೆ ನಡೆದ ಚರ್ಚೆಯಲ್ಲಿ ಎಲ್ಲವೂ ಶಾಶ್ವತವಾಗಿ ದಾಖಲಾಗಿದೆ. ಕಂಟ್ರಾಕ್ಟರ್ ಗಳ ಆತ್ಮಹತ್ಯೆ, ಡಿನ್ನರ್ ಮೀಟಿಂಗ್ ಇವೆಲ್ಲಾ ಗೊಜಲುಗಳಿಂದ ಬಿಡುವಿದ್ದಾಗ ಒಮ್ಮೆ ಆ ಚರ್ಚಗಳನ್ನ ಓದಿಕೊಳ್ಳಿ ಎಂದು ವಿರೋಧ ಪಕ್ಷದ ನಾಯಕ ಅಶೋಕ್ ತಾಕೀತು ಮಾಡಿದ್ದಾರೆ.

ಚುನಾವಣಾ ಭಾಷಣಗಳಲ್ಲಿ ಮೀಸಲಾತಿ ಪರವಾಗಿ ಮೊಸಳೆ ಕಣ್ಣೀರು ಸುರಿಸುವುದು, ವಿದೇಶಿ ವೇದಿಕೆಗಳಲ್ಲಿ ಮೀಸಲಾತಿ ವಿರುದ್ಧವಾಗಿ ಮಾತನಾಡುವ ಡೋಂಗಿ ಅಂಬೇಡ್ಕರ್ ವಾದ ಅಲ್ಲ ನಮ್ಮದು. ಬಾಬಾ ಸಾಹೇಬ್ ಅಂಬೇಡ್ಕರರ ಸಿದ್ಧಾಂತಕ್ಕೆ ಸಮನಾದ ಸಿದ್ಧಾಂತ ಯಾವುದಾದರೂ ಇದ್ದರೆ ಅದು ಬಿಜೆಪಿಯ ಏಕಾತ್ಮ ಮಾನವತಾವಾದ ಮತ್ತು ಅಂತ್ಯೋದಯ.

ಮಹಾತ್ಮ ಗಾಂಧೀಜಿ ಅವರು ವಿಸರ್ಜನೆ ಮಾಡಬೇಕು ಅಂದ ಮೇಲೂ ಅಧಿಕಾರಕ್ಕಾಗಿ ಒಂದು ಕುಟುಂಬದ ಆಸ್ತಿಯಾಗಿ ಉಳಿದುಕೊಂಡಿರುವ ನಕಲಿ ಗಾಂಧಿ ಕಾಂಗ್ರೆಸ್ ಪಕ್ಷದ ಏಕೈಕ ಸಿದ್ಧಾಂತ ಅಂದರೆ ಅದು ಅಧಿಕಾರವಾದ. ಅಧಿಕಾರಕ್ಕಾಗಿ ಲಜ್ಜೆ ಇಲ್ಲದ ಅವಕಾಶವಾದ. ಮಿಕ್ಕಿದ್ದೆಲ್ಲ ಬರೀ ಬೊಗಳೆ ಎಂದು ಅಶೋಕ್ ತರಾಟೆ ತೆಗೆದುಕೊಂಡಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ