Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಎಂ ಹಾಗೂ ಡಿಸಿಎಂ ವಿರುದ್ಧ ಹರಿಹಾಯ್ದ ಅಶೋಕ್

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರೇ, ತಾವಿಬ್ಬರೂ ದೆಹಲಿಯಿಂದ ಇಂದೇ ರಾಜ್ಯಕ್ಕೆ ವಾಪಸ್ಸು ಪ್ರಯಾಣ ಬೆಳೆಸುತ್ತಿದ್ದೀರಾ? ಎಂದು ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.

ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯಬೇಕಿದ್ದ ಮತಗಳ್ಳತನ ನಾಟಕ ಕ್ಯಾನ್ಸಲ್ ಆಯಿತಾ? ಯಾಕೆ ಕೇಳುತ್ತಿದ್ದೇನೆ ಅಂದರೆ, ನಿಮ್ಮ ಪರಮೋಚ್ಛ ನಾಯಕ ರಾಹುಲ್ ಗಾಂಧಿ ಅವರು ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ - UDF ಮೈತ್ರಿಕೂಟದ ಗೆಲುವಿನ ಸಂಭ್ರಮಾಚರಣೆ ಆಚರಿಸುತ್ತಿದ್ದಾರಲ್ಲ, ಹಾಗಾಗಿ ಮತಯಂತ್ರ ಸರಿ ಹೋಯಿತೇನೋ ಅಂತ, ಚುನಾವಣಾ ಆಯೋಗ ಸರಿ ಹೋಯಿತೇನೋ ಅಂತ? ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ಇಷ್ಟಕ್ಕೂ ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆ ನಡೆದಿದ್ದು ಮತಯಂತ್ರದಲ್ಲೋ ಅಥವಾ ಮಾತಪೆಟ್ಟಿಗೆಯಲ್ಲೋ? ಕೇರಳದಲ್ಲಿ ಚುನಾವಣೆ ಗೆಲುವಿನ ಸಂಭ್ರಮಾಚರಣೆ, ದೆಹಲಿಯಲ್ಲಿ ಮತಗಳ್ಳತನ ಎಂಬ ನಾಟಕ.

ನಾಚಿಕೆಯಾಗಬೇಕು ಕಾಂಗ್ರೆಸ್ ಪಕ್ಷದ ಆಷಾಡಭೂತಿತನಕ್ಕೆ, ಬೂಟಾಟಿಕೆಗೆ. ಸೋತಾಗ ಇವಿಎಂ, ಚುನಾವಣಾ ಆಯೋಗವನ್ನ ದೂಷಿಸುವುದು, ಗೆದ್ದಾಗ ಸಂಭ್ರಮ ಪಡುವುದು. ಭಾರತದ ಮತದಾರರು ಈ ಕಪಟ ನಾಟಕವನ್ನ ಎಂದಿಗೂ ಕ್ಷಮಿಸುವುದಿಲ್ಲ ಎಂದು ಅಶೋಕ್ ಎಚ್ಚರಿಸಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ