Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಕ್ಫ್ ಹೆಸರಿನಲ್ಲಿ ರೈತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ನಿಲ್ಲಿಸಿ- ಅಶೋಕ್

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಕ್ಫ್ ವಿಚಾರದಲ್ಲಿ ದಿನಕ್ಕೊಂದು ನಾಟಕ, ಕ್ಷಣಕ್ಕೊಂದು ಸುಳ್ಳು ಹೇಳುತ್ತಲೇ ಬರುತ್ತಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರ ಈಗ ಮತ್ತೊಮ್ಮೆ ಜನರ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಸಿಎಂ ಸಿದ್ದರಾಮಯ್ಯನವರೇ, ವಕ್ಫ್ ವಿಚಾರ ಮೊದಲ ಪ್ರಸ್ತಾಪವಾದಾಗ ಸರ್ಕಾರ ಯಾರಿಗೂ ನೋಟಿಸು ಕಳಿಸುತ್ತಲೇ ಇಲ್ಲ ಎಂದು ಸುಳ್ಳು ಹೇಳಿದಿರಿ.

ನಂತರ ವಿಜಯಪುರ ಜಿಲ್ಲೆಯಲ್ಲಿ ರೈತರು ಸಿಡಿದ್ದೆದ್ದಾಗ, ನೋಟಿಸು ವಾಪಸ್ಸು ಪಡೆದು, ಈ ಪ್ರಕ್ರಿಯೆ ನಿಲ್ಲಿಸುತ್ತೇವೆ ಎಂದು ಮತ್ತೊಂದು ಸುಳ್ಳು ಹೇಳಿದಿರಿ. ಆದರೆ ರೈತರಿಗೆ, ಮಠ-ಮಂದಿರಗಳಿಗೆ ಕಳಿಸುವುದು, ರಾತ್ರೋರಾತ್ರಿ ತರಾತುರಿಯಲ್ಲಿ ಭೂದಾಖಲೆಗಳನ್ನು ತಿದ್ದುವುದು ಮಾತ್ರ ನಿಲ್ಲಲೇ ಇಲ್ಲ ಎಂದು ಅವರು ಆರೋಪಿಸಿದ್ದಾರೆ.

ಮೇಲಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಇದೆಲ್ಲಾ ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ನಡೆಯುತ್ತಿದೆ ಎಂದು ಹೇಳುವ ವಿಡಿಯೋ ಬಹಿರಂಗ ಆದಮೇಲೆ ತಮ್ಮ ಸುಳ್ಳು ಸಂಪೂರ್ಣ ಬಯಲಾಯಿತು ಎಂದು ಸಿಎಂ ವಿರುದ್ಧ ಅಶೋಕ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಸ್ತಾವನೆಯೇ ಸರ್ಕಾರದ ಮುಂದಿಲ್ಲ ಎಂದು ಸತ್ಯದ ತಲೆಯ ಮೇಲೆ ಹೊಡೆದ ಹಾಗೆ ಮತ್ತೊಂದು ಸುಳ್ಳು ಹೇಳಿದಿರಿ. ಆದರೆ ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ 4% ಮೀಸಲಾತಿ ಕೊಡಬೇಕು ಎಂದು ತಮ್ಮ ರಾಜಕೀಯ ಕಾರ್ಯದರ್ಶಿ ನಾಸೀರ್ ಅಹ್ಮದ್, ಸಚಿವ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಮುಸ್ಲಿಂ ಶಾಸಕರು ಆಗಸ್ಟ್ 24, 2024 ರಂದು ತಮಗೆ ಪತ್ರ ಬರೆಯುತ್ತಾರೆ.

ತಾವು ಅದೇ ದಿನವೇ ಈ ಪತ್ರವನ್ನ ಪರಿಶೀಲಿಸಿ ಮಂಡಿಸಿ ಎಂದು ಆರ್ಥಿಕ ಇಲಾಖೆಗೆ ನಿರ್ದೇಶನ ನೀಡಿದ್ದೀರಿ. ಈ ಸಂಬಂಧ ಕೆಟಿಪಿಪಿ ಕಾಯ್ದೆಗೆ ತಿದ್ದುಪಡಿ ತರಲೂ ಸಹ ತಾವು ಅನುಮೋದನೆ ನೀಡಿದ್ದೀರಿ ಎಂದು ವಿಪಕ್ಷ ನಾಯಕ ಅಶೋಕ್ ಸಿಎಂ ನಡೆ ವಿರುದ್ಧ ಕಿಡಿ ಕಾರಿದ್ದಾರೆ.

ಈಗ ವಕ್ಫ್ ವಿಚಾರದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲೇ ಅತಿಹೆಚ್ಚು ನೋಟಿಸುಗಳು ನೀಡಲಾಗಿದೆ ಎಂದು ಮತ್ತೊಂದು ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದ್ದೀರಿ. ಓಲೈಕೆ ರಾಜಕಾರಣಕ್ಕೆ ಇನ್ನೆಷ್ಟು ಸುಳ್ಳು ಹೇಳುತ್ತೀರಿ?

ಕಾಂಗ್ರೆಸ್ ಪಕ್ಷದ ಅನೇಕ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಪ್ರಭಾವಿ ಮುಖಂಡರು ಬಡವರಿಗೆ ಸೇರಿದ ಸಾವಿರಾರು ಎಕರೆ ವಕ್ಫ್ ಭೂಮಿಯನ್ನ ಕಬಳಿಸಿದ್ದಾರೆ ಎಂಬ ವರದಿ ನಮ್ಮ ಸರ್ಕಾರಕ್ಕೆ ಬಂದಿತ್ತು. ಆಗ ಆ ವರದಿಯ ಆಧಾರದ ಮೇಲೆ ತನಿಖೆ ಮಾಡಲು ಸಂಬಂಧಪಟ್ಟವರಿಗೆ ನೋಟಿಸುಗಳನ್ನು ನೀಡಲಾಗಿತ್ತೇ ಹೊರತು ಇದರ ಹಿಂದೆ ಯಾವುದೇ ಕುತಂತ್ರ, ಷಡ್ಯಂತ್ರ ಇರಲಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇಷ್ಟಕ್ಕೂ ಬಿಜೆಪಿ ಸರ್ಕಾರ ಬಡ ರೈತರು ತಲೆತಲಾಂತರಗಳಿಂದ ಉಳುಮೆ ಮಾಡಿಕೊಂಡು ಬಂದಿರುವ ಕೃಷಿ ಜಮೀನುಗಳಿಗೆ, ಗೋಮಾಳಗಳಿಗೆ, ಸ್ಮಶಾನಗಳಿಗೆ, ನೂರಾರು ವರ್ಷ ಇತಿಹಾಸ ಇರುವ ಸರ್ಕಾರಿ ಶಾಲೆಗಳಿಗೆ, ದೇವಸ್ಥಾನಗಳಿಗೆ, ಮಠ-ಮಾನ್ಯಗಳಿಗೆ, ಪಾರಂಪರಿಕ ತಾಣಗಳಿಗೆ, ಜನಸಾಮಾನ್ಯರ ಆಸ್ತಿ-ಪಾಸ್ತಿಗಳಿಗೆ, ಮಾಜಿ ಶಾಸಕರ ಮನೆಗಳಿಗೆ ನೋಟಿಸು ಕಳಿಸಿಲ್ಲ.

ಬಡವರ ಭೂಮಿ ನುಂಗಿರುವ ದೊಡ್ಡ ದೊಡ್ಡ ತಿಮಿಂಗಿಲಗಳನ್ನು ಹಿಡಿಯುವ ಉದ್ದೇಶದಿಂದ ನೋಟಿಸು ಕೊಟ್ಟಿತ್ತು. ಇಷ್ಟಕ್ಕೂ ಈಗ ತಮ್ಮದೇ ಸರ್ಕಾರ ಇದೆ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೊಟ್ಟ ನೋಟಿಸುಗಳಲ್ಲಿ ಏನಾದರೂ ತಪ್ಪಿದ್ದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ ಎಂದು ಸರ್ಕಾರವನ್ನು ಅವರು ಒತ್ತಾಯಿಸಿದ್ದಾರೆ.

ವಕ್ಫ್ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣ ಜನರಿಗೆ ಸ್ಪಷ್ಟವಾಗಿ ಅರ್ಥವಾಗಿದೆ. ಕೇಂದ್ರ ಸರ್ಕಾರ ವಕ್ಫ್ ಕಾಯ್ದೆಗೆ ತರಲು ಉದ್ದೇಶಿಸಿರುವ ತಿದ್ದುಪಡಿಗೆ ಮೊದಲು ಹೇಗಾದರೂ ಮಾಡಿ ಜಮೀನು ಕಬಳಿಸಬೇಕು ಎಂಬ ಕಾಂಗ್ರೆಸ್ ಪಕ್ಷದ ಷಡ್ಯಂತ್ರ, ಕುತಂತ್ರ ಬಹುಸಂಖ್ಯಾತ ಹಿಂದೂಗಳಿಗೆ ಬಹಳ ಸ್ಪಷ್ಟವಾಗಿ ಮನವರಿಕೆಯಾಗಿದೆ.

ಈಗ ಮತ್ತೊಂದು ಸುಳ್ಳು ಹೇಳಿ ಜನರ ದಿಕ್ಕು ತಪ್ಪಿಸುವ ಪ್ರಯತ್ನ ಬಿಡಿ. ವಕ್ಫ್ ಹೆಸರಿನಲ್ಲಿ ನಡೆಯುತ್ತಿರುವ ದಬ್ಬಾಳಿಕೆ ನಿಲ್ಲಿಸಿ. ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷ ಹಿಂದೂಗಳ ಕೆಂಗಣ್ಣಿಗೆ ಗುರಿಯಾಗಿ ಮಹಾರಾಷ್ಟ್ರ, ಹರಿಯಾಣ ರಾಜ್ಯಗಳಲ್ಲಿ ಆದಂತೆ ಕರ್ನಾಟಕದಲ್ಲೂ ಧೂಳೀಪಟ ಆಗುವುದು ನಿಶ್ಚಿತ ಎಂದು ಅಶೋಕ್ ಎಚ್ಚರಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ