Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್​ ಶಾಸಕರ ಪಟ್ಟಿ ಕುರಿತು ಕಾಶಪ್ಪನವರನ್ನೇ ಕೇಳಿ-ಪರಮೇಶ್ವರ್

Advertisement
ಚಂದ್ರವಳ್ಳಿ ನ್ಯೂಸ್, ತುಮಕೂರು:
ಕಾಂಗ್ರೆಸ್‌ ಮುಖಂಡ ರಣದೀಪ್‌ ಸಿಂಗ್ ಸುರ್ಜೇವಾಲಾ ಅವರು ಶಾಸಕರನ್ನು ಮಾತನಾಡಿಸಿ ಅಭಿಪ್ರಾಯ
, ಕ್ಷೇತ್ರದ ಬಗ್ಗೆ ಹಾಗೂ ಆಡಳಿತದ ಕುರಿತು ಮಾತನಾಡಿಕೊಂಡು ಹೋಗಿದ್ದಾರೆ. ಅವರ ಅನಿಸಿಕೆಗಳನ್ನು ತಿಳಿದುಕೊಂಡು ಆ ನಂತರ ಸಿಎಂ ಜೊತೆ ಚರ್ಚೆ ಮಾಡುತ್ತಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್​ ಶಾಸಕರ ಪಟ್ಟಿ ಕುರಿತು ವಿಜಯಾನಂದ ಕಾಶಪ್ಪನವರ್ ಅವರ ಹೇಳಿಕೆ ವಿಚಾರ ನನಗೆ ಗೊತ್ತಿಲ್ಲ, ಅವರನ್ನೇ ಕೇಳಬೇಕು ಎಂದು ಪರಮೇಶ್ವರ್ ತಿಳಿಸಿದರು.
ಕಾಂಗ್ರೆಸ್​ನಲ್ಲಿ ಕುದುರೆ ವ್ಯಾಪಾರ ನಡೆಯುತ್ತಿದೆ ಎಂಬ ಬಿಜೆಪಿಯವರ ಆರೋಪಕ್ಕೆ
ಅದೆಲ್ಲ ನನಗೆ ಗೊತ್ತಿಲ್ಲ ಎಂದರು.

ಬೆಂಗಳೂರಿನಲ್ಲಿ ಕಂಠೀರವ ಸ್ಟೇಡಿಯಂ ಬಿಟ್ಟರೆ ತುಮಕೂರಿನಲ್ಲಿ ಉತ್ತಮ ಕ್ರೀಡಾಂಗಣವಿದೆ. ಅದರ ನಿರ್ವಹಣೆಗೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಗೃಹ ಸಚಿವರು ತಿಳಿಸಿದರು.

ತುಮಕೂರು ನಗರದ ಬಸ್‌ ನಿಲ್ದಾಣಕ್ಕೆ ದಿಢೀರ್‌ ಭೇಟಿ ನೀಡಿದ ಅವರು, ಬಸ್‌ ನಿಲ್ದಾಣದಲ್ಲಿನ ಸ್ವಚ್ಛತೆಯ ಬಗ್ಗೆ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು.

ನಿಲ್ದಾಣದಲ್ಲಿನ ಹೋಟೆಲ್​​ಗೆ ಭೇಟಿ ನೀಡಿ ಆಹಾರದ ಗುಣಮಟ್ಟ ಮತ್ತು ಹೋಟೆಲ್‌ನ ಒಳಗೆ ಸ್ವಚ್ಛತೆ ಕುರಿತು ಖುದ್ದು ಜನರನ್ನು ಭೇಟಿ ಮಾಡಿ ಮಾಹಿತಿ ಪಡೆದ ಸಚಿವರು ಗ್ರಾಹಕರಿಗೆ ಆಹಾರ ವಿತರಿಸಿದರು.

ಜಿಲ್ಲಾಧಿಕಾರಿ ಶುಭ ಕಲ್ಯಾಣ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಕೆಎಸ್​​ಆರ್​​ಟಿಸಿ ಸಿಬ್ಬಂದಿ ಹಾಗು ಡಿಸಿ ಅವರೊಂದಿಗೆ ಕುಳಿತು ಪರಮೇಶ್ವರ್ ಅವರು ಹೋಟೆಲ್​​ನಲ್ಲಿಯೇ ಕಾಫಿ ಕುಡಿದರು.


ನಂತರ ಬಸ್‌ ನಿಲ್ದಾಣದ ಬಳಿ ಇದ್ದ ಆಟೋ ಚಾಲಕರ ಸಮಸ್ಯೆಗಳ ಬಗ್ಗೆ ವಿಚಾರಿಸಿದರು. ಸಾರ್ವಜನಿಕರಿಗೆ ಪೂರಕವಾದ ವ್ಯವಸ್ಥೆ ಕಲ್ಪಿಸುವ ಕುರಿತು ಚರ್ಚಿಸಿದರು. ಈ ವೇಳೆ, ಪೊಲೀಸರು ಸಣ್ಣ ತಪ್ಪುಗಳಾದ ದಂಡ ವಿಧಿಸುವುದನ್ನು ನಿಲ್ಲಿಸಬೇಕು ಎಂದು ಆಟೋ ಚಾಲಕರು ಗೃಹ ಸಚಿವರಿಗೆ ಮನವಿ ಮಾಡಿದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ