Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಜಯ ಚೌಡೇಶ್ವರಿ ದೇವಿ ಜಾತ್ರಾ ಮಹೋತ್ಸವದಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಭಾಗಿ

Advertisement
Advertisement

ಚಂದ್ರವಳ್ಳಿ ನ್ಯೂಸ್, ​ತುಮಕೂರು:
ಜಿಲ್ಲೆಯ ಗೂಳೂರು ಹೋಬಳಿಯ ಮುಳುಕುಂಟೆ ಗ್ರಾಮದಲ್ಲಿ ಅತ್ಯಂತ ಸಡಗರ ಸಂಭ್ರಮದಿಂದ ಜರುಗಿದ ಶ್ರೀ ವಿಜಯ ಚೌಡೇಶ್ವರಿ ದೇವಿ ಅಮ್ಮನವರ ಜಾತ್ರಾ ಮಹೋತ್ಸವದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಭಕ್ತಿಪೂರ್ವಕವಾಗಿ ಭಾಗವಹಿಸಿ ದೇವಿಯ ದರ್ಶನ ಪಡೆದರು.

​ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಮಾತನಾಡಿದ ಅವರು, "ನಮ್ಮ ನಾಡಿನ ಸಾಂಸ್ಕೃತಿಕ ಪರಂಪರೆ ಮತ್ತು ಭಕ್ತಿಶ್ರದ್ಧೆಯ ಪ್ರತೀಕವಾಗಿ ಜಾತ್ರಾ ಮಹೋತ್ಸವಗಳು ದಾರಿದೀಪವಾಗಿವೆ. ಇಂತಹ ಧಾರ್ಮಿಕ ಕಾರ್ಯಕ್ರಮಗಳು ಸಮಾಜದಲ್ಲಿ ಸೌಹಾರ್ದತೆ ಮತ್ತು ಭಕ್ತಿಯನ್ನು ಬೆಳೆಸುತ್ತವೆ ಎಂಬುದು ನನ್ನ ಅಚಲ ನಂಬಿಕೆ," ಎಂದು ತಿಳಿಸಿದರು.

​ಈ ಸಂದರ್ಭದಲ್ಲಿ ವಿಧಾನಸಭೆಯ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್ ಬಾಬು, ಶಾಸಕರುಗಳಾದ ಎಂ.ಟಿ. ಕೃಷ್ಣಪ್ಪ, ಸುರೇಶ್ ಗೌಡ, ತುಮಕೂರು ಜಿಲ್ಲಾ ಜೆಡಿಎಸ್ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ ನಿಂಗಪ್ಪ ಸೇರಿದಂತೆ ಹಲವು ಪ್ರಮುಖ ನಾಯಕರು ಉಪಸ್ಥಿತರಿದ್ದರು.

​ಕಾರ್ಯಕ್ರಮದಲ್ಲಿ ಜೆಡಿಎಸ್ ಪಕ್ಷದ ಮುಖಂಡರು, ನೂರಾರು ಸಂಖ್ಯೆಯ ಕಾರ್ಯಕರ್ತರು ಹಾಗೂ ಅಸಂಖ್ಯಾತ ಭಕ್ತಾದಿಗಳು ಭಾಗವಹಿಸಿ ದೇವಿಯ ಕೃಪೆಗೆ ಪಾತ್ರರಾದರು.

news_1778026626_1_545.webp

 

 ಗ್ರಾಮದಲ್ಲಿ ಹಬ್ಬದ ವಾತಾವರಣ ಮನೆಮಾಡಿದ್ದು, ಭಕ್ತರಿಗಾಗಿ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿತ್ತು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗ್ರಾಮೀಣ ಸಾಹಿತ್ಯದ ಕೊಂಡಿ, ಹಿರಿಯ ಪತ್ರಕರ್ತ ಜಿ.ಎಸ್. ಉಜ್ಜಿನಪ್ಪ ಇನ್ನಿಲ್ಲ​ಮೇಕೆದಾಟು ಯೋಜನೆ: ಮೈತ್ರಿ ರಾಜಕಾರಣಕ್ಕೆ ಕರ್ನಾಟಕದ ಹಿತಬಲಿ ನೀಡಿದ ಕಾಂಗ್ರೆಸ್‌; ಆರ್‌ ಅಶೋಕ್ ತೀವ್ರ ವಾಗ್ದಾಳಿ​ರಾಜ್ಯದಲ್ಲಿ ಇವಿ ಉತ್ಪಾದನಾ ಸಾಮರ್ಥ್ಯ ವಿಸ್ತರಣೆ: ಸಚಿವ ಎಂ.ಬಿ. ಪಾಟೀಲ್ ಜೊತೆ ರಿವರ್ ಮೊಬಿಲಿಟಿ ಸಿಇಒ ಚರ್ಚೆಧಾರ್ಮಿಕ ಕ್ಷೇತ್ರ ತಿರುಮಲಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದ ಡಿ ಕೆ ಶಿವಕುಮಾರ್ ರಾಜ್ಯದ ಹಿತಕ್ಕೆ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಪಕ್ಷಾತೀತ ಬೆಂಬಲ: ಡಿ.ಕೆ. ಶಿವಕುಮಾರ್ ಸಂತಸಹಣಬಲ, ತೋಳ್ಬಲದ ನಡುವೆಯೂ ಜೆಡಿಎಸ್‌ ರಕ್ಷಣೆ: ಕಾರ್ಯಕರ್ತರೇ ಪಕ್ಷದ ಜೀವಾಳ ಎಂದ ಹೆಚ್.ಡಿ. ಕುಮಾರಸ್ವಾಮಿಕೃಷಿ ಮತ್ತು ಗ್ರಾಮೀಣಾಭಿವೃದ್ಧಿಗೆ ಸಂಬಂಧಿಸಿದ ಮಹತ್ವದ ವಿಷಯಗಳ ಕುರಿತು ಸುದೀರ್ಘವಾಗಿ ಚರ್ಚಿಸಿದ ಡಾ ಪ್ರಭಾ "ಜ್ಞಾನ ಸಂಪಾದನೆ ವಿದ್ಯಾರ್ಥಿ ಜೀವನದ ಮುಖ್ಯ ಗುರಿಯಾಗಬೇಕು":- ಮಾತಾಜೀ ತ್ಯಾಗಮಯೀ. ಪ್ರಬಂಧ ಸಾಹಿತ್ಯ ಕ್ಷೇತ್ರದಲ್ಲಿ ಅಗ್ರಗಣ್ಯ ಕೊಡುಗೆ ನೀಡಿದ  ಮೂರ್ತಿರಾಯರುಅಪ್ರಾಪ್ತೆ ಆತ್ಮಹತ್ಯೆ ಪ್ರಕರಣ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಆಗ್ರಹ