Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಾನ್ ಮಾನವತಾವಾದಿ ಅಂಬೇಡ್ಕರ್ ಕಂಡ ಸಮಾಜ ನಿರ್ಮಾಣಕ್ಕೆ ಪ್ರಯತ್ನ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸರ್ಕಾರ ಅಂಬೇಡ್ಕರ್ ಅವರು ಪ್ರತಿಪಾದಿಸಿದ್ದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮಂತ್ರ ಅನುಸರಿಸುವ ಪ್ರಯತ್ನ ಮಾಡುತ್ತಿದ್ದು, ಅವರು ಬಯಸಿದಂತ ಸಮಾಜವನ್ನು ನಿರ್ಮಾಣ ಮಾಡಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಸಂವಿಧಾನ ಶಿಲ್ಪಿ ಡಾ: ಬಿ. ಆರ್.ಅಂಬೇಡ್ಕರ್ ಅವರ 134 ನೇ ಜನ್ಮ ದಿನಾಚರಣೆಯ ಅಂಗವಾಗಿ ವಿಧಾನಸೌಧದ ಪೂರ್ವ ದ್ವಾರದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ನಮ್ಮ ಸರ್ಕಾರವತ್ಯಂತ ಗೌರವ, ನಮ್ರತೆಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನವನ್ನು ಆಚರಿಸುತ್ತಿದೆ. ಅಂಬೇಡ್ಕರ್ ಅವರು ಕೇವಲ ದಲಿತರ ನಾಯಕರಾಗಿರದೇ ಸಮಾಜದಲ್ಲಿ ಶೋಷಿತರು, ಅನ್ಯಾಯ ಹಾಗೂ ದೌರ್ಜನ್ಯಕ್ಕೆ ಒಳಗಾದವರ ಪರವಾಗಿ ಅನ್ಯಾಯದಿಂದ ಮುಕ್ತಿ ಪಡೆಯಬೇಕೆಂದು ತಮ್ಮ ಬದುಕನ್ನೇ ಮುಡಿಪಾಗಿಟ್ಟಿದ್ದರು.  

ಅಂಬೇಡ್ಕರ್ ಎಲ್ಲರಿಗೂ ಆರ್ಥಿಕ, ಸಾಮಾಜಿಕ, ರಾಜಕೀಯ ಸ್ವಾತಂತ್ರ್ಯ ದೊರಕಿಸಲು ಶ್ರಮಿಸಿದವರು. ಮಹಾನ್ ಮೇಧಾವಿಯಾಗಿದ್ದ ಅಂಬೇಡ್ಕರ್, ಅವರ ಸ್ವಾರ್ಥಕ್ಕಾಗಿ ಓದಿಕೊಳ್ಳದೆ ಶೋಷಿತರ, ಅಸ್ಪೃಶ್ಯತೆಯಿಂದ ನರಳುತ್ತಿರುವವ ಜನರಿಗೆ ವಿಮೋಚನೆ ನೀಡಲೆಂದೇ ಜ್ಞಾನಾರ್ಜನೆ ಮಾಡಿಕೊಂಡಿದ್ದರು. ದೇಶದ ಕೆಲವೇ ಮೇಧಾವಿಗಳಲ್ಲಿ ಅವರೂ ಒಬ್ಬರು. ದೇಶ ಕಂಡ ಮಹಾನ್ ನಾಯಕರು ಹಾಗೂ ಮಾನವತಾವಾದಿ. ಎಲ್ಲರೂ ಮನುಷ್ಯರಾಗಿ ಬದುಕಬೇಕು. ಸಮಾಜದಲ್ಲಿ ಎಲ್ಲರಿಗೂ ಸಮಾನತೆ ದೊರಕಬೇಕು. ಆರ್ಥಿಕ, ಸಾಮಾಜಿಕ, ರಾಜಕೀಯ ಸ್ವಾತಂತ್ರ್ಯ ದೊರಕಬೇಕು. ಹಾಗಾದಾಗ ಮಾತ್ರ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಸಿಗುತ್ತದೆ. ಮಹಿಳೆಯರು ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರಾಗಬೇಕು. ಅಸ್ಪೃಶ್ಯತೆ ನಾಶವಾಗಬೇಕು ಎಂದು ಅಂಬೇಡ್ಕರ್  ಶ್ರಮಿಸಿದ್ದರು  ಎಂದರು.

ಮನುವಾದಿಗಳು  ಇಂದು ಗಾಂಧಿ ಮತ್ತು ಅಂಬೇಡ್ಕರ್ ಅವರನ್ನು ತಮ್ಮ ಸ್ವಂತ  ಎಂಬಂತೆ ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ.

 ಇತ್ತೀಚೆಗೆ ಕೆಲವರು ಮಹಾತ್ಮಾ ಗಾಂಧಿ ಹಾಗೂ ಅಂಬೇಡ್ಕರ್ ಅವರನ್ನು ತಮಗೆ ಸೇರಿದವರೆಂದು(own) ಬಿಂಬಿಸಲು  ಪ್ರಾರಂಭಿಸಿದ್ದಾರೆ. ಮಹಾತ್ಮಾ ಗಾಂಧಿಯವರನ್ನು ಕೊಂದವರು, ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೋಧಿಸಿದ ಮನುವಾದಿಗಳೇ ಇಂದು ಅವರನ್ನು ತಮ್ಮ ಸ್ವಂತ ಎನ್ನಲು ಪ್ರಾರಂಭಿಸಿದ್ದಾರೆ. ಸಂವಿಧಾನ ಜಾರಿಗೆ ಬಂದ ನಾಲ್ಕೈದು ದಿನಗಳಲ್ಲೇ 'ದಿ ಆರ್ಗನೈಜರ್ಪತ್ರಿಕೆಯಲ್ಲಿ ವಿರೋಧ ಮಾಡಿ ಬರೆದಿದ್ದರು. ಈಗ ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಸೋಲಿಸಿತ್ತು ಎಂದು ಮಾತನಾಡುತ್ತಾರೆ.

ಅಂಬೇಡ್ಕರ್ ಅವರೇ ನನ್ನನ್ನು ಸೋಲಿಸಿದವರು ಸಾವರ್ಕರ್ ಮತ್ತು ಕಮ್ಯುನಿಸ್ಟ್ ನಾಯಕ ಎಸ್.ಎ ಡಾಂಗೆ  ಎಂದು ಪತ್ರ ಬರೆದಿದ್ದರು. ಬಿಜೆಪಿ ಸ್ವಾರ್ಥಕ್ಕಾಗಿ ಮಹಾತ್ಮಾ ಗಾಂಧಿ, ಸರ್ದಾರ್ ವಲ್ಲಭಭಾಯ್ ಪಟೇಲ್, ಅಂಬೇಡ್ಕರ್ ಅವರನ್ನು ತಮ್ಮದೇ ಸ್ವಂತ ಎಂದು ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ.

ಅಂಬೇಡ್ಕರ್ ಅವರು   'ನಾನು ಹಿಂದೂ ಆಗಿ ಹುಟ್ಟಿದೆ ಆದರೆ ಹಿಂದೂವಾಗಿ ಸಾಯಲಾರೆ' ಎಂದು ಹೇಳಿದ್ದರು. ಹಿಂದೂ ಧರ್ಮ ತ್ಯಜಿಸಿ ಭೌದ್ಧ ಧರ್ಮವನ್ನು ಸ್ವೀಕಾರ ಮಾಡಿದರು. ಹಿಂದೂ ಧರ್ಮದ ಸುಧಾರಣೆಗೆ ಪ್ರಯತ್ನಿಸಿ, ಅದು ಸಾಧ್ಯವಾಗುವುದಿಲ್ಲ ಎಂದು ಅರಿವಾದ ನಂತರ ಹಿಂದೂ ಧರ್ಮವನ್ನು ತ್ಯಜಿಸಿ, ಮಾನವೀಯತೆ ಮತ್ತು ಸಮಾನತೆ ಇದ್ದ ಭೌದ್ಧ ಧರ್ಮವನ್ನು ಸ್ವೀಕರಿಸಿದರು ಎಂದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ