Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಿಬಿಎ (ಬಿಬಿಎಂಪಿ) ಚುನಾವಣೆಗೆ ಆಗಸ್ಟ್ 31 ಅಂತಿಮ ಗಡುವು: ಸುಪ್ರೀಂ ಖಡಕ್ ಆದೇಶ!

Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ – ನಿಕಟಪೂರ್ವ ಬಿಬಿಎಂಪಿ) ಚುನಾವಣೆಯನ್ನು ಎದುರು ನೋಡುತ್ತಿದ್ದ ರಾಜಧಾನಿಯ ಜನತೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. ಜೂನ್ 30ರೊಳಗೆ ಚುನಾವಣೆ ಪೂರ್ಣಗೊಳಿಸಬೇಕಾಗಿದ್ದ ಗಡುವನ್ನು ಸುಪ್ರೀಂಕೋರ್ಟ್ ಆಗಸ್ಟ್ 31
, 2026ರವರೆಗೆ ವಿಸ್ತರಿಸಿದೆ. ಆದರೆ, ಯಾವುದೇ ಕಾರಣಕ್ಕೂ ಮತ್ತೊಮ್ಮೆ ಕಾಲಾವಕಾಶ ನೀಡುವುದಿಲ್ಲ ಎಂದು ನ್ಯಾಯಪೀಠವು ರಾಜ್ಯ ಸರ್ಕಾರಕ್ಕೆ ಕಟ್ಟುನಿಟ್ಟಾಗಿ ಸ್ಪಷ್ಟಪಡಿಸಿದೆ.

ರಾಜ್ಯ ಸರ್ಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿಪುಲ್ ಪಂಚೋಲಿ ಅವರಿದ್ದ ತ್ರಿಸದಸ್ಯ ನ್ಯಾಯಪೀಠವು ಈ ಅಂತಿಮ ಗಡುವನ್ನು ವಿಧಿಸಿದೆ.

ಸಿಬ್ಬಂದಿ ಕೊರತೆಯ ನೆಪ ಒಡ್ಡಿದ ಸರ್ಕಾರ
ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ
, "ರಾಜ್ಯದಲ್ಲಿ ಪ್ರಸ್ತುತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ನಡೆಯುತ್ತಿದೆ. ಇದಕ್ಕಾಗಿ ಸರ್ಕಾರದ ಬಹುತೇಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಹೀಗಾಗಿ ಸದ್ಯಕ್ಕೆ ಚುನಾವಣಾ ಪ್ರಕ್ರಿಯೆ ನಡೆಸಲು ಸಿಬ್ಬಂದಿ ಕೊರತೆ ಇದೆ. ಈ ಹಿನ್ನೆಲೆಯಲ್ಲಿ ಚುನಾವಣೆಯನ್ನು 2 ರಿಂದ 3 ತಿಂಗಳು ಮುಂದೂಡಬೇಕು," ಎಂದು ಕೋರಿದರು. ರಾಜ್ಯ ಚುನಾವಣಾ ಆಯೋಗದ ಪರ ವಕೀಲರು ಸರ್ಕಾರದ ಈ ವಾದಕ್ಕೆ ಸಹಮತ ವ್ಯಕ್ತಪಡಿಸಿದರು.

ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಮೂಲ ಅರ್ಜಿದಾರರ ಪರ ವಕೀಲರು, "ಹಲವು ವರ್ಷಗಳಿಂದ ಯಾವುದೋ ಒಂದು ನೆಪ ಒಡ್ಡಿ ಚುನಾವಣೆಯನ್ನು ಮುಂದೂಡುತ್ತಾ ಬರಲಾಗುತ್ತಿದೆ. ಕಳೆದ ವಿಚಾರಣೆಯಲ್ಲೇ ಜೂನ್ ಅಂತ್ಯಕ್ಕೆ ಗಡುವು ನೀಡಲಾಗಿತ್ತು. ಈಗ ಮತ್ತೆ ಸಮಯ ಕೇಳುತ್ತಿರುವುದಕ್ಕೆ ಅವಕಾಶ ನೀಡಬಾರದು," ಎಂದು ಪೀಠವನ್ನು ಒತ್ತಾಯಿಸಿದರು. ಉಭಯ ಪಕ್ಷಗಳ ವಾದ ಆಲಿಸಿದ ನ್ಯಾಯಾಲಯ, ಆಗಸ್ಟ್ 31 ಕೊನೆಯ ಗಡುವು ಎಂದು ಆದೇಶಿಸಿತು.

ಸುದೀರ್ಘ ಕಾನೂನು ಹೋರಾಟದ ಹಿನ್ನೆಲೆ
ಜಿಬಿಎ (ಬಿಬಿಎಂಪಿ) ಚುನಾವಣೆ ವಿಳಂಬದ ಹಿಂದೆ ಆರು ವರ್ಷಗಳ ಸುದೀರ್ಘ ಕಾನೂನು ಪ್ರಕ್ರಿಯೆಯಿದೆ.

2020ರ ಹೈಕೋರ್ಟ್ ಆದೇಶ: ಮತದಾರರ ಅಂತಿಮ ಪಟ್ಟಿ ಪ್ರಕಟವಾದ 6 ವಾರಗಳ ಒಳಗೆ ಚುನಾವಣೆ ನಡೆಸುವಂತೆ 2020ರ ಡಿಸೆಂಬರ್ 4ರಂದು ಹೈಕೋರ್ಟ್ ರಾಜ್ಯ ಚುನಾವಣಾ ಆಯೋಗಕ್ಕೆ ಸೂಚಿಸಿತ್ತು.

ಸುಪ್ರೀಂಕೋರ್ಟ್ ತಡೆ ಮತ್ತು ವಾರ್ಡ್ ಮರುವಿಂಗಡಣೆ: ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತು. ಡಿಸೆಂಬರ್ 18, 2020 ರಂದು ಸುಪ್ರೀಂಕೋರ್ಟ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿ, ವಾರ್ಡ್‌ಗಳ ಪುನರ್ ವಿಂಗಡಣೆ (ಡಿಲಿಮಿಟೇಶನ್) ಪ್ರಕ್ರಿಯೆ ಮುಗಿಸಲು ಸೂಚಿಸಿತು.

ವಾರ್ಡ್‌ಗಳ ಸಂಖ್ಯೆ ಹೆಚ್ಚಳದ ವಿವಾದ: 2020ರ ತಿದ್ದುಪಡಿ ಕಾಯ್ದೆಯನ್ವಯ ಬಿಬಿಎಂಪಿ ವಾರ್ಡ್‌ಗಳ ಸಂಖ್ಯೆಯನ್ನು 198ರಿಂದ 243ಕ್ಕೆ ಹೆಚ್ಚಿಸಲಾಯಿತು. ಹೈಕೋರ್ಟ್ ಈ ಕಾಯ್ದೆಯನ್ನು ಮಾನ್ಯ ಮಾಡಿದರೂ, ಆಗ ಆಡಳಿತಾವಧಿ ಮುಗಿದಿದ್ದ ಸ್ಥಳೀಯ ಸಂಸ್ಥೆಗಳಿಗೆ ಇದು ಅನ್ವಯಿಸುವುದಿಲ್ಲ ಎಂದು ಹೇಳಿ, ಹಳೆಯ 198 ವಾರ್ಡ್‌ಗಳ ಆಧಾರದ ಮೇಲೆಯೇ ಮೀಸಲಾತಿ ಪಟ್ಟಿ ಪ್ರಕಟಿಸಲು ಸೂಚಿಸಿತ್ತು.

ಸರ್ಕಾರದ ಪಟ್ಟು: ಆದರೆ, 243 ವಾರ್ಡ್‌ಗಳಿಗೇ ಚುನಾವಣೆ ನಡೆಸಬೇಕು ಎಂದು ಪಟ್ಟು ಹಿಡಿದ ರಾಜ್ಯ ಸರ್ಕಾರ, ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಕಾನೂನು ಹೋರಾಟ ಮುಂದುವರಿಸಿತ್ತು.

ಪ್ರಸ್ತುತ ಸುಪ್ರೀಂಕೋರ್ಟ್ ನೀಡಿರುವ ಆಗಸ್ಟ್ 31ರ ಅಂತಿಮ ಗಡುವಿನಿಂದಾಗಿ, ಇಷ್ಟು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣಾ ಪ್ರಕ್ರಿಯೆಗೆ ಕೊನೆಗೂ ಚಾಲನೆ ಸಿಗುವುದು ನಿಶ್ಚಿತವಾಗಿದೆ.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿಸಭೆಗ್ರಾಮಾಂತರ ಪೋಲಿಸರ ಕಾರ್ಯಾಚರಣೆ ಒಣಗಾಂಜ ವಶ ಆರೋಪಿ ಬಂಧನಬೆಳಗೆರೆ ಕೃಷ್ಣ ಶಾಸ್ತ್ರಿಗಳ 111ನೇ ಜಯಂತಿ: ಮೇ 22 ಮತ್ತು 23ರಂದು ದ್ವಿ ದಿನ ಆಚರಣೆಜಗನ್ಮಾತೃತ್ವವನ್ನು ಜಗತ್ತಿಗೆ ಸಾಬೀತುಪಡಿಸಿದ್ದೇ ಷೋಡಶೀ ಪೂಜೆ: ಎಂ ಗೀತಾ ನಾಗರಾಜ್ದೇವೇಗೌಡರು ಎಂಬುದೇ ಬಹುದೊಡ್ಡ ಗೌರವವನ್ನು ಕನ್ನಡಿಗರಿಗೆ ತಂದಿದೆಇದು ಕಾಂಗ್ರೆಸ್‌ನ ಸಾಧನಾ ಸಮಾವೇಶವಲ್ಲ, ಕನ್ನಡಿಗರಿಗೆ ಬಗೆದ ‘ದ್ರೋಹದ ಮಹಾಸಮಾವೇಶ’: ಆರ್. ಅಶೋಕ್ಹೊಸ ಬಸ್‌ಗಳಿಗೆ ಯಾವುದೇ ಅನುದಾನ ಬಿಡುಗಡೆ ಮಾಡದ ಸರ್ಕಾರಸ್ಮಾರ್ಟ್ ಮೀಟರ್ ಹಂಚಿಕೆಯಲ್ಲಿ ಮಹಾ ಅವಾಂತರ: ಆರ್. ಅಶೋಕ್ ಗಂಭೀರ ಆರೋಪರೋಮ್‌ನಲ್ಲಿ ಪ್ರಧಾನಿ ಮೋದಿಗೆ ಅದ್ಧೂರಿ ಸ್ವಾಗತ: ಅನಿವಾಸಿ ಭಾರತೀಯರಿಗೆ ಧನ್ಯವಾದ ತಿಳಿಸಿದ ಪಿಎಂವಿಶಾಖಪಟ್ಟಣಂ ಸ್ಟೀಲ್ ಪ್ಲಾಂಟ್ ಪುನಶ್ಚೇತನಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಉನ್ನತ ಮಟ್ಟದ ಸಭೆ