Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಲಾ ಪ್ರದರ್ಶನಕ್ಕೆ ರಂಗಮಂದಿರ ಅವಶ್ಯ-ವೆಂಕಟರಮಣಯ್ಯ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ರಂಗ ಕಲೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಮ್ಮ ಸಂಸ್ಕೃತಿಯ ಭಾಗವಾಗಿದ್ದು
, ಈ ಕಾರ್ಯಕ್ರಮಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕಲಾವಿದರಿಗೆ ಹೆಚ್ಚಿನ ನೆರವು ನೀಡುವ ಅಗತ್ಯವಿದ್ದು, ಈ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಹೇಳಿದರು.

ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ಜಾತ್ರಾ ಸಾಂಸ್ಕೃತಿಕ ಸಮಿತಿ,ತಾಲ್ಲೂಕು ಕಲಾವಿದರ ಸಂಘ ಸಹಯೋಗದೊಂದಿಗೆ ನಗರದ ತೇರಿನ ಬೀದಿಯಲ್ಲಿ ನಡೆದ ನಾಟಕೋತ್ಸವ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ನಾಟಕ ಪ್ರದರ್ಶನಕ್ಕೆ ಅರಳು ಮಲ್ಲಿಗೆ ಶಾಲೆಯ ಆಟದ ಮೈದಾನ ನೀಡದಿರುವ ಸಂಗತಿ ವಿವಾದಕ್ಕೀಡಾಗಿದ್ದು, ಇದನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಕಲಾ ಪ್ರದರ್ಶನಕ್ಕೆ ರಂಗ ಮಂದಿರದ ಅಗತ್ಯತೆಯನ್ನು ಸರ್ಕಾರದ ಗಮನಕ್ಕೆ ತರಲಾಗುವುದು. ಕಲೆಯ ಉತ್ತೇಜನಕ್ಕೆ ಸರ್ಕಾರ ಹಾಗೂ ಸಮುದಾಯ ಸ್ಪಂಧಿಸಿದಾಗ ಕಲಾವಿದರು ಅಸ್ತಿತ್ವ ಉಳಿಸಿಕೊಳ್ಳಲಿದ್ದಾರೆ ಎಂದರು.

ಜಿಲ್ಲಾ ರಂಗಭೂಮಿ ಕಲಾವಿದ ಸಂಘದ ಗೌ.ಅಧ್ಯಕ್ಷ ಕೆ.ಎಂ.ಕೃಷ್ಣಮೂರ್ತಿ ಮಾತನಾಡಿಆರ್ಥಿಕವಾಗಿ ಹಿಂದುಳಿದ ಕಲಾವಿದರಿಗೆ ಸರ್ಕಾರ ಮಾಸಾಶನ ನೀಡುತ್ತಿರುವುದು ಸ್ವಾಗತಾರ್ಹ. ಆದರೆ 2.5 ಸಾವಿರ ರೂ ಮಾಸಾಶನ ಕಲಾವಿದರು ಜೀವನ ನಡೆಸಲು ಸಾಲುವುದಿಲ್ಲ. ಈ ನಿಟ್ಟಿನಲ್ಲಿ ಸರ್ಕಾರ 5 ಸಾವಿರ ರೂ ಮಾಸಾಶನ ಹೆಚ್ಚಿಸಬೇಕು. ಕಲಾ ಚಟುವಟಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಕಲಾವಿದರು ವಿಭಿನ್ನ ಪ್ರದರ್ಶನಗಳನ್ನು ನೀಡುವ ಮೂಲಕ ರಂಗಭೂಮಿಯ ಜೀವಂತಿಕೆಗೆ ಶ್ರಮಿಸಬೇಕು ಎಂದರು.

 ಕಾರ್ಯಕ್ರಮದಲ್ಲಿ  ಹಿರಿಯ ಕಲಾವಿದರಾದ ಕೆ.ಟಿ.ಮಾದೇಶ್‌ವೀರಭದ್ರಪ್ಪ, ಗಂಗಮ್ಮ, ತೇರು ನಿರ್ಮಾಣ ಮಾಡುವ ಸುಬ್ಬಣ್ಣ, ಜಯಣ್ಣ, ನಾಣ್ಯ ಸಂಗ್ರಹಕಾರ ಎಂ.ಶಿವಕುಮಾರ್  ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ  ನಗರಸಭೆ  ಉಪಾಧ್ಯಕ್ಷ ಎಂ.ಮಲ್ಲೇಶ, ಸದಸ್ಯರಾದ ಪ್ರಭಾ ನಾಗರಾಜ್‌, ಎಚ್‌.ಎಸ್‌.ಶಿವಶಂಕರ್‌, ಚಂದ್ರ ಮೋಹನ್, ಗ್ಯಾರೆಂಟಿ ಯೋಜನೆಗಳ ಅನುಷ್ಟಾನ ಸಮಿತಿ ತಾಲೂಕು ಅಧ್ಯಕ್ಷ ವಿಶ್ವನಾಥ ರೆಡ್ಡಿ, ಕರವೇ (ಪ್ರವಿಣ್‌ಶೆಟ್ಟಿಬಣ) ರಾಜ್ಯ ಕಾರ್ಯದರ್ಶಿ ರಾಜಘಟ್ಟರವಿ,

ಜಿಲ್ಲಾ ರಂಗಭೂಮಿ ಕಲಾವಿದರ ಸಂಘದ ಅಧ್ಯಕ್ಷ  ರಬ್ಬನಹಳ್ಳಿ ಕೆಂಪಣ್ಣ, ಕನ್ನಡ ಜಾಗೃತ ಪರಿಷತ್‌ಕಾರ್ಯದರ್ಶಿ ಡಿ.ಪಿ.ಆಂಜನೇಯ, ತಾಲೂಕು ಶಿವರಾಜ್‌ಕುಮಾರ್‌ಅಭಿಮಾನಿಗಳ ಸಂಘದ ಅಧ್ಯಕ್ಷ ಚೌಡರಾಜ್ ಮುಖಂಡರಾದ ಬಿ.ಜಿ.ಹೇಮಂತ ರಾಜ್, ಪರಮೇಶ್, ಶ್ರೀಧರ್ ಗೌಡ, ರಾಜ್ ಗೋಪಾಲ್ ಕಂಟನ ಕುಂಟೆ, ವೆಂಕಟ ರಾಜು, ನಾಗೇಶ್, ನಾಗೇಂದ್ರ, ಸಂಚಾಲಕರಾದ ಪ್ರಕಾಶ್‌ರಾವ್‌, ಡಿ.ವೆಂಕಟೇಶ್‌, ,ಗಂಗರಾಜು ಶಿರವಾರ, ನಂದ ಕುಮಾರ್‌ಮೊದಲಾದವರು ಭಾಗವಹಿಸಿದ್ದರು. 

ನಾಟಕೋತ್ಸವದ ಅಂಗವಾಗಿ  ಪದ್ಮಪ್ರಿಯಾ ಕಲಾ ಟ್ರಸ್ಟ್‌ಬೀಡಿಕೆರೆ ವತಿಯಿಂದ ಕುರುಕ್ಷೇತ್ರ ಪೌರಾಣಿಕ ನಾಟಕ ಹಾಗೂ ರಾತ್ರಿ ತಬಲ ಕಾಂತರಾಜು ಅಭಿಮಾನ ಬಳಗ, ತುಮಕೂರು ಇವರಿಂದ ದುರ್ಯೋಧನನ ಗರ್ವಭಂಗ ಪೌರಾಣಿಕ ನಾ​ಟಕ ಪ್ರದರ್ಶನಗಳು ನಡೆದವು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ