Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆಯ ವತಿಯಿಂದ ಭಾರತ ರತ್ನ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ ಅಂಗವಾಗಿ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕøತ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ-2025 ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕøತರಿಗೆ, ಮಲೆನಾಡ ಗಾಂಧಿ ಮತ್ತು ಮಾಜಿ ಸಚಿವ ಹೆಚ್.ಬಿ.ಗೋವಿಂದಗೌಡ ಪ್ರಶಸ್ತಿ ಪುರಸ್ಕøತ ಶಾಲೆಗಳಿಗೆ ಹಾಗೂ ನ್ಯಾಕ್ ಮಾನ್ಯತೆ ಪಡೆದ ಸರ್ಕಾರಿ ಕಾಲೇಜುಗಳಿಗೆ ಅಭಿನಂದನಾ ಪತ್ರ ಪ್ರದಾನ ಸಮಾರಂಭವನ್ನು ಸೆಪ್ಟೆಂಬರ್ 5ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ವಿಧಾನಸೌಧದಲ್ಲಿರುವ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮದ ಉದ್ಘಾಟನೆ ಮತ್ತು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಣ್ಣ, ಅತಿ ಸಣ್ಣ ಹಾಗೂ ಮಧ್ಯಮ ಕೈಗಾರಿಕೆ ಹಾಗೂ ಕಾರ್ಮಿಕ ಮತ್ತು ಉದ್ಯೋಗ ರಾಜ್ಯ ಸಚಿವೆ ಕು. ಶೋಭಾ ಕರಂದ್ಲಾಜೆ ಅವರು ವಿಶೇಷ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಧಾನಪರಿಷತ್‍ನ ಸಭಾಪತಿ ಬಸವರಾಜ ಎಸ್.ಹೊರಟ್ಟಿ, ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಅವರ ಘನ ಉಪಸ್ಥಿತಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ. ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಸಚಿವರು, ವಿಧಾನಸಭೆ ಮತ್ತು ವಿಧಾನಪರಿಷತ್ ಸದಸ್ಯರು ಸೇರಿದಂತೆ  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಆಯುಕ್ತರು, ನಿರ್ದೇಶಕರು ಮತ್ತು ಹಿರಿಯ ಅಧಿಕಾರಿಗಳು ರಾಜ್ಯ ಮಟ್ಟದ ಎಲ್ಲಾ ಬೋಧಕ ವೃಂದದ ಸಂಘಗಳು, ಗುರು ವೃಂದ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿರುತ್ತಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

 

 

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ