Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅರಿವು ಶೈಕ್ಷಣಿಕ ಸಾಲ ಯೋಜನೆ: ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವತಿಯಿಂದ 2026-27ನೇ ಸಾಲಿನ ಅರಿವು' ಶೈಕ್ಷಣಿಕ ಸಾಲ ಯೋಜನೆಯಡಿ ಸೌಲಭ್ಯ ಪಡೆಯಲು ಮತೀಯ ಅಲ್ಪಸಂಖ್ಯಾತ ಸಮುದಾಯದ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮೇ 30 ಅರ್ಜಿ ಸಲ್ಲಿಸಲು ಕೊನೆಯ ದಿನ.

ಸಿಇಟಿ ಅಥವಾ ನೀಟ್ ಮೂಲಕ ವೃತ್ತಿಪರ ಕೋರ್ಸ್‍ಗಳಿಗೆ ಪ್ರವೇಶ ಪಡೆಯುವ ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಬೌದ್ಧರು, ಸಿಖ್ಖರು ಮತ್ತು ಆಂಗ್ಲೋ ಇಂಡಿಯನ್ ಸಮುದಾಯದ ವಿದ್ಯಾರ್ಥಿಗಳು ಈ ಯೋಜನೆಯ ಲಾಭ ಪಡೆಯಬಹುದು.

ಆಸಕ್ತ ವಿದ್ಯಾರ್ಥಿಗಳು ನಿಗಮದ ವೆಬ್‍ಸೈಟ್ kmdconline.karnataka.gov.in  ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕು. ಆನ್‍ಲೈನ್‍ನಲ್ಲಿ ಭರ್ತಿ ಮಾಡಿದ ಅರ್ಜಿಯ ಪ್ರಿಂಟೌಟ್‍ನೊಂದಿಗೆ ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ ಮತ್ತು ಪಿಯುಸಿ ಅಂಕಪಟ್ಟಿ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿದ್ಯಾರ್ಥಿ ಹಾಗೂ ಫೋಷಕರ ಭಾವಚಿತ್ರಗಳು, ಸಿಇಟಿ ಮತ್ತು ನೀಟ್ ಪರೀಕ್ಷೆಯ ಎಲ್ಲಾ ಪ್ರತಿಗಳು ಮತ್ತು ಹಾಲ್ ಟಿಕೆಟ್ ಹಾಗೂ ನೋಟರಿಯಿಂದ ದೃಢೀಕರಿಸಲ್ಪಟ್ಟ ಇಂಡೆಮ್ನಿಟಿ ಬಾಂಡ್ ಅನ್ನು ಲಗತ್ತಿಸಿ ಜಿಲ್ಲಾ ಕಚೇರಿಗೆ ಸಲ್ಲಿಸಬೇಕಾಗುತ್ತದೆ.

ವಿದ್ಯಾರ್ಥಿಗಳು ಭರಿಸಬೇಕಾದ ಬೋಧನಾ ಶುಲ್ಕವನ್ನು ನಿಗಮದ ವತಿಯಿಂದ ನೇರವಾಗಿ ಸಂಬಂಧಪಟ್ಟ ಕಾಲೇಜುಗಳಿಗೆ ಪಾವತಿಸಲಾಗುವುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ 2026ರ ಮೇ 30ರ ಒಳಗೆ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ ದೂರವಾಣಿ ಸಂಖ್ಯೆ: 08194-226412, 8431669372, 8277944213 ಕ್ಕೆ ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯುತ್ ಖಾಸಗಿಕಾರಣಕ್ಕೆ ನೇಕಾರ ಸಂಘಟನೆಗಳ ವಿರೋಧಜೂನ್ 27 ರಂದು ಕೆಂಪೇಗೌಡರ 517 ನೇ ಜಯಂತಿ ಆಚರಣೆಉದ್ಘಾಟನೆಗೆ ಮುನ್ನವೇ ಕುಸಿದ ರಸ್ತೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಅಶೋಕ್ ಆಕ್ರೋಶ"ದ್ವೇಷದ ಭಾಷಣ ಮುತ್ಸದ್ದಿತನಕ್ಕೆ ಕಪ್ಪು ಚುಕ್ಕೆ" :ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಿಜಯೇಂದ್ರ ವಾಗ್ದಾಳಿಯಾವುದೇ ಬೆದರಿಕೆಗಳಿಗೆ ಹೆದರುವ ಪ್ರಶ್ನೆಯೇ ಇಲ್ಲ; ರೈತರಿಗಾಗಿ ಹೋರಾಟಕ್ಕೆ ಸಿದ್ಧ: ನಿಖಿಲ್ಕೆಎಸ್‌ಐಐಡಿಸಿಯಿಂದ ಸಿಎಂ ಪರಿಹಾರ ನಿಧಿಗೆ ₹3 ಕೋಟಿ ದೇಣಿಗೆಪದವಿಪೂರ್ವ ವಿದ್ಯಾರ್ಥಿಗಳಿಗೆ 'SCOUT-2.0' ಕಾರ್ಯಕ್ರಮ: ಸಿಎಂ ಡಿಕೆಶಿ ಚಾಲನೆವಿಪ ಕ್ರಾಸ್ ವೋಟಿಂಗ್: ಹೈಕಮಾಂಡ್‌ಗೆ ವರದಿ ನೀಡಲು ದೆಹಲಿಗೆ ವಿಜಯೇಂದ್ರ, ಅಶೋಕ್!2028ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ, ಸಚಿವನೂ ಆಗ್ತೀನಿ: ರಮೇಶ್ ಜಾರಕಿಹೊಳಿಮದುವೆಗೆ ಒಂದೇ ದಿನ ಬಾಕಿ: ಯುವಕನ ಕಿರುಕುಳಕ್ಕೆ ಬೇಸತ್ತು ಮಗಳು, ಹೆತ್ತವರು ಒಟ್ಟಿಗೆ ಆತ್ಮಹತ್ಯೆ!