Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಹಕಾರ ಕಾಯ್ದೆಗಳ ಅರಿವು ಸಂಘದ ಏಳಿಗೆಗೆ ಪೂರಕ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸಹಕಾರ ಕ್ಷೇತ್ರದಲ್ಲಿ ಕಾಲಕಾಲಕ್ಕೆ ಜಾರಿಗೆ ಬರುವ ಕಾಯ್ದೆ-ಕಾನೂನುಗಳ ತಿದ್ದುಪಡಿ ಹಾಗೂ ಬದಲಾವಣೆಗಳ ಬಗ್ಗೆ ಪದಾಧಿಕಾರಿಗಳು ಜಾಗೃತರಾದಾಗ ಮಾತ್ರ ಸಂಘಗಳನ್ನು ಯಶಸ್ವಿಯಾಗಿ ಮುನ್ನಡೆಸಲು ಸಾಧ್ಯ ಎಂದು ಸಹಕಾರರತ್ನ ಪುರಸ್ಕೃತರು ಹಾಗೂ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಆರ್. ಮಲ್ಲೇಶಪ್ಪ ಅಭಿಪ್ರಾಯಪಟ್ಟರು.


      ನಗರದ ದುರ್ಗದ ಸಿರಿ ಹೋಟೆಲ್‍ನಲ್ಲಿ ಗುರುವಾರ ಸಹಕಾರ ಇಲಾಖೆ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಹಾಗೂ ಜಿಲ್ಲಾ ಸಹಕಾರ ಯೂನಿಯನ್ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರು ವಿಭಾಗದಲ್ಲಿ ಬರುವ ಆಯ್ದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪದಾಧಿಕಾರಿಗಳು, ಆಡಳಿತ ಮಂಡಳಿಯ ನಿರ್ದೇಶಕರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಒಂದು ದಿನದ ರಾಜ್ಯಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ತರಬೇತಿಯಲ್ಲಿ ನೀಡಲಾಗುವ ಕಾನೂನು ಮಾಹಿತಿಯು ಕೇವಲ ಕೇಳಿಸಿಕೊಳ್ಳುವುದಕ್ಕೆ ಸೀಮಿತವಾಗಬಾರದು. ಬದಲಾಗಿ, ಪ್ರತಿಯೊಬ್ಬ ನಿರ್ದೇಶಕರು ಮತ್ತು ಕಾರ್ಯನಿರ್ವಹಣಾಧಿಕಾರಿಗಳು ಇಲ್ಲಿ ಪಡೆದ ಜ್ಞಾನವನ್ನು ತಮ್ಮ ಸಂಘಗಳ ಆಡಳಿತ ವ್ಯವಸ್ಥೆಯಲ್ಲಿ ಅಳವಡಿಸಿಕೊಳ್ಳಬೇಕು. ಈ ಮೂಲಕ ತರಬೇತಿಯ ಸದುಪಯೋಗ ಪಡೆದುಕೊಂಡು ಸಂಘದ ಪಾರದರ್ಶಕತೆಗೆ ಒತ್ತು ನೀಡಬೇಕು ಎಂದು ಅವರು ಕರೆ ನೀಡಿದರು.

ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಜೆ. ಶಿವಪ್ರಕಾಶ್ ಮಾತನಾಡಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಉದ್ದೇಶ ಶಿಕ್ಷಣ, ತರಬೇತಿ ಮತ್ತು ಪ್ರಚಾರದ ಉದ್ದೇಶವಿದ್ದು, ತಾವುಗಳು ತಮ್ಮ ಸಹಕಾರ ಸಂಘಗಳಿಂದ ಲಾಭದಲ್ಲಿ ನೀಡುವ ಶೇ.02 ಸಹಕಾರ ಶಿಕ್ಷಣ ನಿಧಿಯನ್ನು ಉಪಯೋಗಿಸಿಕೊಂಡು ಮಹಾಮಂಡಳ ಮತ್ತು ಜಿಲ್ಲಾ ಸಹಕಾರ ಯೂನಿಯನ್‍ಗಳು ಇಂತಹ ತರಬೇತಿ ಕಾರ್ಯಕ್ರಮವನ್ನು ನಿರಂತರವಾಗಿ ಆಯೋಜಿಸಿ ಉತ್ತಮವಾದ ತರಬೇತಿಯನ್ನು ನೀಡಲಾಗುತ್ತಿದೆ.  ಸಹಕಾರ ಸಂಘಗಳಿಂದ ಬಂದಿರುವ  ಪ್ರತಿನಿಧಿಗಳು ಇಂತಹ ತರಬೇತಿಯನ್ನು ಸದುಪಯೋಗ ಪಡಿಸಿಕೊಂಡು, ಜ್ಞಾನ ಪಡೆದುಕೊಂಡಲ್ಲಿ ತಮ್ಮ ಸಂಘಗಳ ಪಾಲನೆ, ಅಭಿವೃದ್ದಿಪಡಿಲು  ಸಾಧ್ಯವಾಗಲಿದೆ ಎಂದು ಹೇಳಿದರು.

ಸಹಕಾರ ರತ್ನ ಪುರಸ್ಕøತರು ಹಾಗೂ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಜಿ.ಈ. ಅಜ್ಜಪ್ಪ ಮಾತನಾಡಿ, ಸಹಕಾರ ಕಾಯ್ದೆ, ಕಾನೂನುಗಳಲ್ಲಿ ಇತ್ತೀಚೆಗೆ ಆಗುವ ಬದಲಾವಣೆಗಳು, ತಿದ್ದುಪಡಿಗಳ ಮಾಹಿತಿಯನ್ನು ನುರಿತ ಉಪನ್ಯಾಸಕರಿಂದ ಪಡೆದು ತಮ್ಮ ಸಹಕಾರ ಸಂಘಗಳಲ್ಲಿ ಅಳವಡಿಸಿಕೊಳ್ಳುವುದರ ಮುಖಾಂತರ ಈ ತರಬೇತಿ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಸಹಕಾರ ಸಂಘಗಳ ಉಪನಿಬಂಧಕ ಆರ್.ಎಸ್.ದಿಲೀಪ್‍ಕುಮಾರ್ ಮಾತನಾಡಿ, ಜ್ಞಾನ ಎಂಬುದು ಯಾರ ಸ್ವತ್ತು ಅಲ್ಲ, ನಿಂತ ನೀರು ಅಲ್ಲ, ಇದಕ್ಕೆ ಕೊನೆ ಎಂಬುದಿಲ್ಲ. ಎಲ್ಲರೂ ಇದನ್ನು ಅರಿತುಕೊಂಡು ಎಲ್ಲಾ ಕ್ಷೇತ್ರಗಳಲ್ಲೂ ಜ್ಞಾನ ಪಡೆದುಕೊಳ್ಳಬೇಕಾಗಿದೆ ಎಂದು ಹೇಳಿದರು.

ಸಹಕಾರ ಸಂಘಗಳಲ್ಲಿ ಇತ್ತೀಚೆಗೆ ತಿದ್ದುಪಡಿಯಾದ ಕಾಯ್ದೆ ಕಾನೂನಿನ ಮುಖ್ಯಾಂಶಗಳ ಕುರಿತು ಬೆಂಗಳೂರಿನ ಸಹಕಾರ ಸಂಘಗಳ ಅಪರ ನಿಬಂಧಕ ಹೆಚ್.ಎಸ್.ನಾಗರಾಜಯ್ಯ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರಾದ ಜಿ.ವಿ.ಗಂಗಾಧರಪ್ಪ, ಎ.ಚನ್ನಬಸಪ್ಪ, ಮಂಜಮ್ಮ, ಕಾರ್ಯಕ್ರಮದ ಸಮನ್ವಯಾಧಿಕಾರಿ ಎಸ್.ವಿ.ಹಿರೇಮಠ್, ಜಿಲ್ಲಾ ಸಹಕಾರ ಯೂನಿಯನ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜಯಶ್ರೀ ಪಿ.ಹುನಗುಂದ, ಶಿಕ್ಷಕ ನಾಗರಾಜ್ ಪಾಟೀಲ್, ಯೂನಿಯನ್ ಸಿಬ್ಬಂದಿ ಟಿ.ಎನ್.ಶ್ರೀನಿವಾಸ್ ಸೇರಿದಂತೆ ಬೆಂಗಳೂರು ವಿಭಾಗದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪದಾಧಿಕಾರಿಗಳು, ಆಡಳಿತ ಮಂಡಳಿ ನಿರ್ದೇಶಕರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಇದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ