Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಸಕ್ಕರೆ ಕಾಯಿಲೆ ಕುರಿತು ಜಾಗೃತಿ ಮೂಡಬೇಕಿದೆ

 ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ಭಾರತದಲ್ಲಿ ಚಿಕ್ಕ ಮಕ್ಕಳಿಗೂ ಸೇರಿದಂತೆ ದಿನೇ ದಿನೇ ಮಧುಮೇಹಿಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು
, ಮಧುಮೇಹವನ್ನು ಆರಂಭದಲ್ಲಿಯೇ ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ಪಡೆದರೆ ನಿಯಂತ್ರಣದಲ್ಲಿಡಬಹುದು ಎಂದು ತಜ್ಞ ವೈದ್ಯರಾದ ಡಾ.ಕೆ.ವಿ.ರಾಘವೇಂದ್ರ ತಿಳಿಸಿದರು. 

 ಇಲ್ಲಿನ ಶ್ರೀ ರಾಮ ಆಸ್ಪತ್ರೆಯಲ್ಲಿ ಶ್ರೀ ರಾಮ ನರ್ಸಿಂಗ್ ಕಾಲೇಜಿನ ಸಹಯೋಗದಲ್ಲಿ ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ಮಧುಮೇಹ ಸತಪಾಸಣೆ ಶಿಬಿರ ಮತ್ತು ಆರೋಗ್ಯ ಶಿಕ್ಷಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಧುಮೇಹದ ಲಕ್ಷಣಗಳು ಕಂಡ ಕೂಡಲೇ ವೈದ್ಯರನ್ನು ಸಂಪರ್ಕಿಸಬೇಕು. ಇದಕ್ಕೆ ಚಿಕಿತ್ಸೆಯೊಂದಿಗೆ ಸಮತೋಲನ ಆಹಾರ, ನಡಿಗೆ, ಸೂರ್ಯ ನಮಸ್ಕಾರದಂತಹ ನಿಯಮಿತ ವ್ಯಾಯಾಮ ಸಹ ಅವಶ್ಯವಾಗಿದೆ. ಇಂದಿನ ಆಧುನಿಕ ಯುಗದಲ್ಲಿ ಒತ್ತಡದ ಬದುಕು, ನಾವು ದೇಹಕ್ಕೆ ಸಾಕಷ್ಟುವ್ಯಾಯಾಮ ನೀಡದ ಪರಿಣಾಮ, ಮಧುಮೇಹ ರಕ್ತದೊತ್ತಡಗಳು ಹೆಚ್ಚಾಗುತ್ತಿವೆ.

ಇತರೆ ಕಾಯಿಲೆಗಳಿಗೂ ಕಾರಣವಾಗಿರುವ ಮಧುಮೇಹದ ಬಗ್ಗೆ ಜಾಗೃತಿ ಮೂಡಿಸಿ, ರೋಗ ನಿಯಂತ್ರಣದ ಅಂಶಗಳನ್ನು ತಿಳಿಸುವ ಸಲುವಾಗಿ ಮಧುಮೇಹ ದಿನಾಚರಣೆ ಆಚರಿಸಲಾಗುತ್ತಿದ್ದು, ಈ ಬಗ್ಗೆ ಹೆಚ್ಚಿನ ಜಾಗೃತಿ ಮೂಡಬೇಕಿದೆ ಹಾಗೂ ಸಮತೋಲನ ಆಹಾರ ನೀಡುತ್ತಿಲ್ಲ.

ಇದರ ಫಲವಾಗಿ ನಾನಾ ರೀತಿಯ ಸಮಸ್ಯೆಗಳು ಕಾಡುತ್ತಿವೆ. ಇದರಲ್ಲಿ ಮಧುಮೇಹವೂ ಒಂದಾಗಿದೆ. ಮಧುಮೇಹ ಬರೀ ರಕ್ತ ಮೂತ್ರದಲ್ಲಿ ಕಾಣಿಸಿಕೊಂಡು ದೇಹವನ್ನು ನಿಶ್ಚಕ್ತಿ ಮಾಡುವುದಷ್ಟೇ ಅಲ್ಲದೇ, ಮಧುಮೇಹದಿಂದ ಹೃದಯ ಸಂಬಂಧಿ  ಕಾಯಿಲೆಗಳು, ಮೂತ್ರಪಿಂಡಕ್ಕೆ ಹನಿ, ಕಣ್ಣಿನ ತೊಂದರೆ, ನರಗಳ ದೌರ್ಬಲ್ಯಗಳು ಕಾಣಿಸಿಕೊಳ್ಳುತ್ತವೆ.

ಗ್ರಾಮೀಣ ಪ್ರದೇಶಕ್ಕಿಂತ ನಗರ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಧುಮೇಹಿಗಳಿದ್ದಾರೆ. ಮೇದೋಜೀರಕ ಗ್ರಂಥಿಯಲ್ಲಿ ಉತ್ಪತ್ತಿಯಾಗುವ ಇನ್ಸುಲಿನ್ ಪ್ರಮಾಣದಲ್ಲಿ ಕಡಿಮೆಯಾಗುವುದರಿಂದ ರಕ್ತದಲ್ಲಿರುವ ಸಿಹಿ ಅಂಶವನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸುವುದು ಕಷ್ಟವಾಗುವ ಪರಿಸ್ಥಿತಿ ಎದುರಾಗುತ್ತದೆ.

ಮಕ್ಕಳಿಂದ ಹಿಡಿದು ಯಾವುದೇ ವಯೋಮಾನದವರಲ್ಲಿ ಮಧುಮೇಹ ಕಾಣಿಸಿಕೊಳ್ಳುವ ಸಾಧ್ಯತೆಗಳಿವೆ. ಆದರೆ ಅತಿ ಹೆಚ್ಚು ಅರುವತ್ತಕ್ಕೆ ಮೇಲ್ಪಟ್ಟವರಲ್ಲೇ ಮಧುಮೇಹ ಹೆಚ್ಚಾಗಿ ಬಾಧಿಸಲ್ಪಡುತ್ತಿದೆ. ಇನ್ಸುಲಿನ್ ಉತ್ಪತ್ತಿ ಸ್ಥಗಿತವಾದಲ್ಲಿ ರಕ್ತದಲ್ಲಿ ಸಕ್ಕರೆ ಅಂಶ ವಿಭಜನೆಗೊಳ್ಳುವುದಿಲ್ಲ. ಇದನ್ನೇ ಮಧುಮೇಹ ಎನ್ನುತ್ತೇವೆ.

  ಇತ್ತೀಚಿನ ದಿನಗಳಲ್ಲಿ ಒಂದನೇ ಹಂತದ ಮಧುಮೇಹ ಸಾಮಾನ್ಯವಾಗಿ ನಿಯಂತ್ರಣದಲ್ಲಿಡಬಹುದು. ಆದರೆ ಎರಡನೇ ಹಂತದ ಮಧುಮೇಹಕ್ಕೆ ಕಾಲಕಾಲಕ್ಕೆ ತಪಾಸಣೆ ಅಗತ್ಯವಾಗಿದೆ. ವೈದ್ಯರೊಂದಿಗೆ ನಿಮ್ಮ ಕಾಯಿಲೆಯ ಪೂರ್ಣ ವಿವರಗಳನ್ನು ತಿಳಿಸಿ ಸೂಕ್ತ ಚಿಕಿತ್ಸೆ ಪಡೆಯ ಬೇಕಿದೆ. ಔಷಧಿಯೊಂದಿಗೆ ಆಹಾರ ಪದ್ದತಿಯು ಅತಿ ಮುಖ್ಯವಾಗುತ್ತದೆ. ಮಧುಮೇಹದ ಕಾರಣಗಳನ್ನು ಸರಿಯಾಗಿ ತಿಳಿದುಕೊಂಡು ಮುಂಜಾಗ್ರತೆ ವಹಿಸಿದರೆ ಮಾತ್ರ ರೋಗ ನಿಯಂತ್ರಣದಲ್ಲಿಡಬಹುದು ಎಂದರು.

ಶ್ರೀ ರಾಮ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಎಚ್.ಜಿ.ವಿಜಯ ಕುಮಾರ್ ಮಾತನಾಡಿ, ಜೀವನದ ಎಲ್ಲಾ ಹಂತಗಳಲ್ಲಿ ಮಧುಮೇಹ ಎಂಬುದು ಈ ವರ್ಷದ ಘೋಷವಾಕ್ಯವಾಗಿದೆ.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು