Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Education News

ಬಿ.ಇಡಿ. ದಾಖಲೆಗಳ ಪರಿಶೀಲಿನಗೆ ಮತ್ತೊಂದು ಅವಕಾಶ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
2025
ನೇ ಸಾಲಿನ ಬಿ. ಇಡಿ. ದಾಖಲಾತಿ ಸಂಬಂಧ ಅರ್ಜಿ ಸಲ್ಲಿಸಲು ಅಧಿಸೂಚನೆಯನ್ನು ಹೊರಡಿಸಲಾಗಿದ್ದು, 2025ನೇ ಅಕ್ಟೋಬರ್ 03 ರಿಂದ ನವೆಂಬರ್ 03 ರ ವರೆಗೆ ಅರ್ಜಿ ಸಲ್ಲಿಸಿ ದಾಖಲೆಗಳನ್ನು ನೋಡಲ್ ಕೇಂದ್ರಗಳಲ್ಲಿ ಪರಿಶೀಲಿಸಿಕೊಳ್ಳಲು ಸೂಚಿಸಲಾಗಿತ್ತು.


ಅದರಂತೆ ಅರ್ಜಿ ಸಲ್ಲಿಸಿದವರಲ್ಲಿ 28976 ಅರ್ಹ ಮತ್ತು 6793 ಅಪೇಕ್ಷಿತ ಅಭ್ಯರ್ಥಿಗಳ ಪಟ್ಟಿಯನ್ನು ಇಲಾಖೆಯ ಜಾಲತಾಣ https://schooleducation.karnataka.gov.in  ರಲ್ಲಿ ಪ್ರಕಟಿಸಲಾಗಿದೆ.


ಇವರಲ್ಲಿ 6174 ಮಂದಿ ಅಭ್ಯರ್ಥಿಗಳು ಪತ್ರಿಕಾ ಪ್ರಕಟಣೆ ನೀಡಿದರೂ, ನೋಡಲ್ ಕೇಂದ್ರದವರು ಫೋನ್ ಮೂಲಕ ಸಂಪರ್ಕಿಸಿ ತಿಳಿಸಿ ಹೇಳಿದರೂ ಸಹಾ ದಾಖಲೆಗಳ ಪರಿಶೀಲನೆಯನ್ನು ಮಾಡಿಸಿಕೊಂಡಿರುವುದಿಲ್ಲ. ಆದರೂ ಇವರಿಗೆ ದಾಖಲೆಗಳನ್ನು ಪರಿಶೀಲಿಸಿಕೊಂಡು ಅಪ್‍ಡೇಟ್ ಮಾಡಿಸಿಕೊಳ್ಳಲು ಇನ್ನೊಂದು ಅವಕಾಶವನ್ನು ನೀಡಿ ಈ ಮೂಲಕ ಅಂತಿಮ ಸೂಚನೆಯನ್ನು ನೀಡಲಾಗಿದೆ.


ಈ ಎರಡೂ ಪಟ್ಟಿಗಳಲ್ಲಿರುವ ಪ್ರತಿಯೊಬ್ಬ ಅಭ್ಯರ್ಥಿಯೂ ಪಟ್ಟಿಯಲ್ಲಿ ನೀಡಲಾಗಿರುವ ಕೋಡ್ ಸಂಖ್ಯೆಯನುಸಾರ  ಪಟ್ಟಿಯನ್ನು ಪುನಃ ಪರಿಶೀಲಿಸಿಕೊಳ್ಳತಕ್ಕದು ಮತ್ತು ಅದರಲ್ಲಿ ಯಾವುದೇ ತಪ್ಪು ಅಥವಾ ದೋಷ ಇದ್ದರೆ 2025ನೇ ನವೆಂಬರ್ 15 ರೊಳಗೆ ಸಂಬಂಧಿತ ನೋಡಲ್ ಕೇಂದ್ರಕ್ಕೆ ಎಲ್ಲಾ ಮೂಲ ದಾಖಲೆಗಳೊಂದಿಗೆ ಹಾಜರಾಗಿ ಸರಿಪಡಿಸಿಕೊಳ್ಳತಕ್ಕದ್ದು.


ಈ ದಿನಾಂಕದ ನಂತರ ಯಾವುದೇ ತಿದ್ದುಪಡಿಯನ್ನು ಮಾಡಲಾಗುವುದಿಲ್ಲ. ಮೂಲ ದಾಖಲೆಗಳನ್ನು ಪರಿಶೀಲಿಸಿಕೊಳ್ಳದ ಹಾಗೂ ಅಗತ್ಯ ತಿದ್ದುಪಡಿಯನ್ನು ಮಾಡಿಸಿಕೊಳ್ಳದ ಆಕ್ಷೇಪಿತ/ಅನರ್ಹ ಅಭ್ಯರ್ಥಿಗಳನ್ನು ಕೈಬಿಟ್ಟು ಉಳಿದವರ ಅಂತಿಮ ಆಯ್ಕೆ ಪಟ್ಟಿಯನ್ನು ತಯಾರು ಮಾಡಿ ಕಾಲೇಜುಗಳ ಹಂಚಿಕೆಯನ್ನು ಮಾಡಲಾಗುವುದು ಎಂದು ಅಂತಿಮವಾಗಿ ತಿಳಿಸಲಾಗಿದೆ.


ಹಾಗೆಯೇ, ಅಭ್ಯರ್ಥಿಗಳು ಈಗಾಗಲೇ ತಮಗೆ ಬೇಕಾಗುವ ಕಾಲೇಜುಗಳ ಆಯ್ಕೆಯನ್ನು ಮಾಡಿದ್ದು ಅದರಲ್ಲಿ ಏನಾದರೂ ಬದಲಾವಣೆಯನ್ನು ಮಾಡ ಬಯಸಿದರೆ ಆನ್ ಲೈನ್ ಮೂಲಕ ಲಾಗ್ ಇನ್ ಆಗಿ
2025
ನೇ ನವೆಂಬರ್ 15 ರೊಳಗೆ ಮಾಡಿಕೊಳ್ಳುವಂತೆ ಶಾಲಾ ಶಿಕ್ಷಣ ಇಲಾಖೆಯ ಬೆಂಗಳೂರು ಕೇಂದ್ರೀಕೃತ ದಾಖಲಾತಿ ಘಟಕದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು