ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ‘ಅಭಿಮಾನೋತ್ಸವ’ ಕಾರ್ಯಕ್ರಮದ ಅಂಗವಾಗಿ ನಗರದ ವಾಲ್ಮೀಕಿ ಭವನದಲ್ಲಿ ಮಾದಿಗ ಸಮುದಾಯದ ಪ್ರಮುಖ ಮುಖಂಡರ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.
ಬಿಜೆಪಿ ಭದ್ರಕೋಟೆಯಾದ ಚಿತ್ರದುರ್ಗದಲ್ಲಿ ನಡೆದ ಈ ಸಭೆಯಲ್ಲಿ ಕಾರ್ಯಕ್ರಮದ ಯಶಸ್ಸಿಗೆ ಸಮುದಾಯದ ಬೆಂಬಲ ಮತ್ತು ಮುಂದಿನ ಕಾರ್ಯತಂತ್ರಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಯಿತು.
ಈ ಸಭೆಯಲ್ಲಿ ರಾಜ್ಯ ಮತ್ತು ಕೇಂದ್ರ ಮಟ್ಟದ ಪ್ರಮುಖ ನಾಯಕರು ಭಾಗವಹಿಸಿದ್ದರು.
ಸಂಸದರು ಹಾಗೂ ಹಿರಿಯ ನಾಯಕ ಗೋವಿಂದ ಕಾರಜೋಳ, ಮಾಜಿ ಕೇಂದ್ರ ಸಚಿವ ನಾರಾಯಣಸ್ವಾಮಿ, ಮಾಜಿ ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ, ಕನಕಗಿರಿ ಕ್ಷೇತ್ರದ ಮಾಜಿ ಶಾಸಕ ಬಸವರಾಜ್ ಸೇರಿದಂತೆ ಮತ್ತಿತರಿದ್ದರು.
ಸಭೆಯಲ್ಲಿ ಮಾತನಾಡಿದ ನಾಯಕರು, ಬಿ.ಎಸ್. ಯಡಿಯೂರಪ್ಪ ಅವರು ಸಮುದಾಯಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಿದರು. ಮುಂಬರುವ ಅಭಿಮಾನೋತ್ಸವಕ್ಕೆ ಮಾದಿಗ ಸಮುದಾಯದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.
ಸಮುದಾಯದ ಒಗ್ಗಟ್ಟು:
ಸಭೆಯಲ್ಲಿ ಚಿತ್ರದುರ್ಗ ಜಿಲ್ಲೆಯಾದ್ಯಂತ ಆಗಮಿಸಿದ್ದ ನೂರಾರು ಮಾದಿಗ ಸಮುದಾಯದ ಮುಖಂಡರು ಭಾಗವಹಿಸಿ, ಪಕ್ಷದ ಸಂಘಟನೆ ಮತ್ತು ಬಿಎಸ್ ವೈ ಅವರ ಅಭಿಮಾನೋತ್ಸವಕ್ಕೆ ಸಂಪೂರ್ಣ ಬೆಂಬಲ ಸೂಚಿಸಿದರು.


