Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಸಿಎಂ ಆಗಿ ಡಿ.ಕೆ.ಶಿ ಪ್ರಮಾಣ ವಚನ ಹಿನ್ನೆಲೆ--ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ಕರ್ನಾಟಕ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ ಹಿನ್ನಲೆ ತಾಲ್ಲೂಕಿನ ರಾಜಘಟ್ಟ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ಈ ವೇಳೆ ಸ್ಥಳೀಯ ಕಾಂಗ್ರೆಸ್ ಮುಖಂಡ ನಾರಾಯಣಸ್ವಾಮಿ ಮಾತನಾಡಿ ಪಕ್ಷದ ರಾಷ್ಟ್ರೀಯ ವರಿಷ್ಟರ ಆದೇಶದಂತೆ ಸಿದ್ದರಾಮಯ್ಯ ರವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ನುಡಿದಂತೆ ನಡೆದಿದ್ದಾರೆ ಈ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದು ಹೊಸ ಅಧ್ಯಾಯ ಆರಂಭವಾಗಲಿದೆ ಎಂದರು.

Advertisement

ಡಿಕೆ ಶಿವಕುಮಾರ್  ಜೊತೆ  ಡಾ. ಜಿ ಪರಮೇಶ್ವರ್, ಕೆಎಚ್ ಮುನಿಯಪ್ಪ, ಕೆಜೆ ಜಾರ್ಜ್,ಎಂ ಬಿ ಪಾಟೀಲ್, ರಾಮಲಿಂಗಾ ರೆಡ್ಡಿ, ಸತೀಶ್ ಜಾರಕಿಹೋಳಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಯುಟಿ ಖಾದರ್, ಈಶ್ವರ್ ಖಂಡ್ರೆ, ಯತೀಂದ್ರ ಸಿದ್ದರಾಮಯ್ಯ, ಭೈರತಿ ಸುರೇಶ್ ಮತ್ತು ಶರಣ ಪ್ರಕಾಶ್ ಪಾಟೀಲ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಮುಖ್ಯವಾಗಿ ನಮ್ಮ ಜೆಲ್ಲೆಯ ನಾಯಕರಾದ ಕೆ ಎಚ್ ಮುನಿಯಪ್ಪ ಜಿ ವಿಶೇಷ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಪ್ರಮಾಣವಚನ ಪಡೆದ ಕೆಲವೇ ಕ್ಷಣಗಳಲ್ಲಿ ನಾಡಿನ ಜನತೆಗೆ ಗಿಫ್ಟ್ ಪ್ರಮಾಣವಚನ ಪಡೆದ ಕೇವಲ ಅರ್ಧಗಂಟೆಯಲ್ಲೇ ನಾಡಿನ ಜನತೆಗೆ ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಉಡುಗೊರೆ ಕೊಟ್ಟಿದಾರೆ. ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣದ ಉಡುಗೊರೆ ನೀಡಿದ್ದಾರೆ. ಹಾಗೂ ರಾಜ್ಯದ ರೈತರಿಗೆ ಸರ್ಕಾರ ದಿಂದ ನೆರವು ಕಲ್ಪಿಸಿರುವ ಮೂಲಕ ಕಾಂಗ್ರೆಸ್ ಪಕ್ಷವು ಸದಾ ರೈತರ ಪರವಾಗಿ ಶ್ರಮಿಸುತ್ತದೆ ಎನ್ನುವುದಕ್ಕೆ ಉತ್ತಮ ಉದಾಹರಣೆ ನೀಡಿದ್ದಾರೆ ಅಧಿಕಾರ ಪಡೆದ ಸ್ವಲ್ಪ ಹೊತ್ತಿಗೆ ರಾಜ್ಯ ಜನತೆಗೆ ಸಿಹಿ ಸುದ್ದಿಯಲ್ಲಿರುವ  ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರು ಮುಂದೆ ಮತ್ತಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಾರೆ ಎಂಬ ಭರವಸೆ ಇದೆ ಎಂದು ತಿಳಿಸಿದರು.

 ದೊಡ್ಡಬಳ್ಳಾಪುರ ತಾಲೂಕಿನ ಮಾಜಿ ಶಾಸಕರಿಗೆ ನಿಗಮ ಮಂಡಳಿ ನೀಡಿ ಮುಖ್ಯಮಂತ್ರಿಯಲ್ಲಿ ಮನವಿ ಮಾಡಿದ ಮುಖಂಡರು.

 ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ ಆದರೆ ತಾಲೂಕಿನಲ್ಲಿ ಕಳೆದ 3 ವರ್ಷಗಳಿಂದ ನಿಕಟಪೂರ್ವ ಶಾಸಕ ಟಿ ವೆಂಕಟರಮಣಯ್ಯ ಅವರಿಗೆ ಅಧಿಕಾರ ನೀಡಿಲ್ಲ ಇನ್ನೇನು ಎರಡು ವರ್ಷಗಳಲ್ಲಿ ವಿಧಾನಸಭಾ ಚುನಾವಣೆ ಬರುತ್ತದೆ ಪಕ್ಷ ಸಂಘಟನೆ ಹಾಗೂ ಕಾರ್ಯಕರ್ತರ ಹುಮ್ಮಸ್ಸನ್ನು ಹೆಚ್ಚಿಸಲು ಮಾಜಿ ಶಾಸಕರಿಗೆ ರಾಜ್ಯಮಟ್ಟದ ನಿಗಮ ಮಂಡಳಿಯಲ್ಲಿ ಅಧ್ಯಕ್ಷ ಸ್ಥಾನ ಕಲ್ಪಿಸುವ ಮೂಲಕ ಶಕ್ತಿ ತುಂಬಬೇಕು ಎಂದು ರಾಜ್ಯದ ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಲ್ಲಿ ಮುಖಂಡರು ಮನವಿ ಮಾಡಿದರು.

 ರಾಜಘಟ್ಟ ಹಾಲು ಉತ್ಪಾದಕರ ಸಂಘದ  ಅಧ್ಯಕ್ಷ ಜಗದೀಶ್ ಮಾತನಾಡಿ ರಾಜ್ಯದ ನೂತನ ಮುಖ್ಯಮಂತ್ರಿ ಆಗಿ  ಡಿ.ಕೆ ಶಿವಕುಮಾರ್ ಅವರು ಅಧಿಕಾರವಹಿಸಿಕೊಂಡಿರುವುದು ಸಂತಸ ತಂದಿದೆ.ನೂತನ ಮುಖ್ಯಮಂತ್ರಿಗಳು ರಾಜ್ಯದ ಭವಿಷ್ಯದ ಉತ್ತಮ ನಾಯಕರಾಗಲಿದ್ದಾರೆ ರಾಜ್ಯದ ಅಭಿವೃದ್ಧಿಗಾಗಿ ವಿನುತನ ಕಾರ್ಯಕ್ರಮಗಳನ್ನು  ರೂಪಿಸುವ ನಿರೀಕ್ಷೆ ಇದೆ ಎಂದರು.

ರಾಜಘಟ್ಟ ಕಾಂಗ್ರೆಸ್ ಮುಖಂಡರಾದ ನಾರಾಯಣಸ್ವಾಮಿ, ರಾಜಘಟ್ಟ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಜಗನ್ನಾಥ್, ಹಿರಿಯ ಮುಖಂಡರಾದ ಆರ್ ಎ ಚನ್ನಪ್ಪ,ಮುಖಂಡರಾದ ಆರ್ ಎಸ್ ರಾಜು,  ಅಂಬರೀಷ್, ಚೇತನ್,  ರಂಜಿತ್, ಆಂಜಿ,  ಬಾಬಣ್ಣ, ಗೋವಿಂದಪ್ಪ, ರವಿ, ರಮೇಶ್,ಹಾಲು ಉತ್ಪಾದಕರ ಸಂಘದ ನಿರ್ದೇಶಕ ನಾರಾಯಣಪ್ಪ ಸೇರಿದಂತೆ ಹಲವು ಪ್ರಮುಖರು ಹಾಜರಿದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು