Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿವಿ ಸಾಗರಕ್ಕೆ ಶೀಘ್ರ ಮುಖ್ಯಮಂತ್ರಿಗಳಿಂದ ಬಾಗಿನ-ಜಿಲ್ಲಾಧಿಕಾರಿ ಟಿ. ವೆಂಕಟೇಶ್

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಬಯಲುಸೀಮೆಯ ಜನರ ಜೀವನಾಡಿ ವಾಣಿ ವಿಲಾಸ ಸಾಗರ ಜಲಾಶಯ ಕೋಡಿ ಬೀಳಲು ಕ್ಷಣಗಣನೆ ಪ್ರಾರಂಭವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶೀಘ್ರವೇ ಜಿಲ್ಲೆಗೆ ಆಗಮಿಸಿ ಭರ್ತಿಯಾಗಿರುವ ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಜಿ.ಪಂ. ಸಿಇಒ ಎಸ್.ಜೆ. ಸೋಮಶೇಖರ್ ಅವರು ಮಂಗಳವಾರದಂದು ವಿವಿ ಸಾಗರಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ವಾಣಿವಿಲಾಸ ಸಾಗರ ಜಲಾಶಯಕ್ಕೆ ನಿತ್ಯ ಭದ್ರಾದಿಂದ 693 ಕ್ಯೂಸೆಕ್ ನೀರು ಒಳಹರಿವಿದ್ದು, ಮಂಗಳವಾರದಂದು ಜಲಾಶಯದ ನೀರಿನ ಮಟ್ಟ 129.80 ಅಡಿಗೆ ತಲುಪಿದೆ. ಹೀಗಾಗಿ ನೀರಿನ ಮಟ್ಟ ಜಲಾಶಯದ ಗರಿಷ್ಟ ಮಟ್ಟ 130 ಅಡಿಗೆ ತಲುಪಿ, ಹೆಚ್ಚುವರಿ ನೀರು ಕೋಡಿ ಮೂಲಕ ಹರಿದುಹೋಗಲಿದೆ.

ಜಲಾಶಯ ಸಂಪೂರ್ಣ ಭರ್ತಿಯಾಗುತ್ತಿರುವುದು ಇಡೀ ಜಿಲ್ಲೆಗೆ ಸಂತಸದ ಕ್ಷಣವಾಗಿದ್ದು, ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಶೀಘ್ರವೇ ಜಿಲ್ಲೆಗೆ ಆಗಮಿಸಿ, ಭರ್ತಿಯಾಗಿರುವ ವಿ.ವಿ. ಸಾಗರ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರುಗಳು, ಜನಪ್ರತಿನಿಧಿಗಳು, ಉನ್ನತ ಅಧಿಕಾರಿಗಳು ಕೂಡ ಈ ಕ್ಷಣಕ್ಕೆ ಕಾತರರಾಗಿದ್ದು, ಬಾಗಿನ ಅರ್ಪಣೆ ಕಾರ್ಯಕ್ರಮ ಯಶಸ್ವಿಗೊಳಿಸುವ ನಿಟ್ಟಿನಲ್ಲಿ

ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಜಿ.ಪಂ. ಸಿಇಒ ಸೋಮಶೇಖರ್ ಅವರು ಮಂಗಳವಾರದಂದು ವಿವಿ ಸಾಗರ ಜಲಾಶಯ ಪ್ರದೇಶಕ್ಕೆ ಭೇಟಿ ನೀಡಿ, ಕೋಡಿ ಬೀಳುವ ಸ್ಥಳ, ಬಾಗಿನ ಅರ್ಪಣೆಗೆ ಸೂಕ್ತ ಸ್ಥಳ ನಿಗದಿಪಡಿಸುವುದು, ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳ ಆಗಮನಕ್ಕೆ ಸೂಕ್ತ ಹೆಲಿಪ್ಯಾಡ್ ಸೇರಿದಂತೆ ವಿವಿಧ ಸಿದ್ಧತೆಗಳನ್ನು ಕೈಗೊಳ್ಳುವ ಸಲುವಾಗಿ ಸ್ಥಳ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ಕಾರ್ಯಪಾಲಕ ಅಭಿಯಂತರ ಬಾರಿಕರ ಚಂದ್ರಪ್ಪ, ಸಹಾಯಕ ಕಾರ್ಯಪಾಲಕ ಅಭಿಯಂತರ ಚಂದ್ರಶೇಖರಯ್ಯ, ಸಹಾಯಕ ಅಭಿಯಂತರ ವೆಂಕಟೇಶ್, ತಹಸಿಲ್ದಾರ್ ರಾಜೇಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಗಣ್ಯರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ