Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆಳಗೋಟೆ ಆಂಜನೇಯಸ್ವಾಮಿಗೆ ಬಾಳೆಹಣ್ಣಿನ ಅಲಂಕಾರ  

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಕೆಳಗೋಟೆಯಲ್ಲಿರುವ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಶನಿವಾರ ಬಾಳೆಹಣ್ಣಿನಿಂದ ಅಲಂಕರಿಸಿ ಪೂಜಿಸಲಾಯಿತು.


ಈ ಬಾರಿ ಪಚ್ಚಬಾಳೆಹಣ್ಣಿನ ಗೊನೆಯಿಂದ ಆಂಜನೇಯಸ್ವಾಮಿಯನ್ನು ವಿಶೇಷವಾಗಿ ಸಿಂಗರಿಸಲಾಗಿತ್ತು. ಬೆಳಗಿನಿಂದ ಸಂಜೆಯತನಕ ನೂರಾರು ಭಕ್ತರು ಧಾವಿಸಿ ಆಂಜನೇಯಸ್ವಾಮಿಗೆ ಶ್ರದ್ದಾ ಭಕ್ತಿಯನ್ನು ಸಮರ್ಪಿಸಿದರು.

 

 

ಬಿ.ಶಿವಲಿಂಗಪ್ಪನವರ ಹಂತಕರನ್ನು ಶೀಘ್ರ ಬಂಧಿಸಿ
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಐದು ದಿನಗಳ ಹಿಂದೆ ಕಾಣೆಯಾಗಿದ್ದ ಬಿ.ಶಿವಲಿಂಗಪ್ಪ ಗುರುವಾರ ಶವವಾಗಿ ಪತ್ತೆಯಾಗಿರುವುದನ್ನು ಗಮನಿಸಿದರೆ ಇದೊಂದು ಪೂರ್ವಯೋಜಿತ ಹತ್ಯೆ ಎನ್ನುವ ಅನುಮಾನವಿದ್ದು
, ಸಮಗ್ರ ತನಿಖೆ ನಡೆಸಿ ಹತ್ಯೆಕೋರರನ್ನು ಬಂಧಿಸಿ ಉಗ್ರ ಶಿಕ್ಷೆಗೆ ಗುರಿಪಡಿಸುವಂತೆ ಜಿಲ್ಲಾ ಮಡಿವಾಳರ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಸಹಾಯಕರ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಶನಿವಾರ ಮನವಿ ಸಲ್ಲಿಸಲಾಯಿತು.

ಮಡಿವಾಳರ ಸಂಘದ ಜಿಲ್ಲಾಧ್ಯಕ್ಷ ಬಿ.ರಾಮಪ್ಪ ಮಾತನಾಡಿ ಜಿಲ್ಲಾ ಕಾಂಗ್ರೆಸ್ ಕಿಸಾನ್ ವಿಭಾಗದ ಉಪಾಧ್ಯಕ್ಷರಾಗಿದ್ದ ಬಿ.ಶಿವಲಿಂಗಪ್ಪನವರು ಕೇವಲ ಮಡಿವಾಳ ಜನಾಂಗದವರಿಗಷ್ಟೆ ಸೀಮಿತವಾಗಿರಲಿಲ್ಲ. ಎಲ್ಲಾ ಜಾತಿ ಧರ್ಮದವರೊಡನೆ ಅನ್ಯೋನ್ಯವಾಗಿದ್ದರು. ರೇಣುಕಾ ಆಗ್ರೋ ಫರ್ಟಿಲೈಸರ್‍ಸ್ ಅಂಗಡಿಯಿಟ್ಟುಕೊಂಡಿದ್ದ ಇವರು ಬಿತ್ತನೆ ಸಮಯದಲ್ಲಿ ರೈತರಿಗೆ ಗೊಬ್ಬರ ನೀಡುವ ಮೂಲಕ ಕಷ್ಟಕ್ಕೆ ಸ್ಪಂದಿಸುತ್ತಿದ್ದರು. ಇವರ ಏಳಿಗೆಯನ್ನು ಸಹಿಸದ ಯಾರೋ ದುಷ್ಕರ್ಮಿಗಳು ಮಾನವೀಯತೆ ಮೀರಿ ಕೊಲೈಗೈದಿರುವುದು ಮಡಿವಾಳ ಸಮಾಜಕ್ಕೆ ಹಾಗೂ ಅವರ ಕುಟುಂಬಕ್ಕೆ ಅತೀವ ನೋವುಂಟು ಮಾಡಿದೆ. ಪೊಲೀಸರು ತನಿಖೆಯನ್ನು ಚುರುಕುಗೊಳಿಸಿ ಹಂತಕರನ್ನು ಬಂಧಿಸಿ ನ್ಯಾಯ ಒದಗಿಸಬೇಕು. ಇಲ್ಲವಾದಲ್ಲಿ ಉಗ್ರವಾದ ಹೋರಾಟ ಮಾಡಲಾಗುವುದೆಂದು ಎಚ್ಚರಿಸಿದರು.

ಜಿಲ್ಲಾ ಮಡಿವಾಳರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಆರ್.ಮಂಜುನಾಥ್, ಬಸವರಾಜ್, ಗೋವಿಂದರಾಜ್, ನವೀನ್, ರಮೇಶ್, ಲಕ್ಷ್ಮಣ, ದೇವರಾಜ್, ಓಬಳೇಶ್, ಮಧು, ರಾಜಣ್ಣ ಈ ಸಂದರ್ಭದಲ್ಲಿ ಹಾಜರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ