Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲೋಕಾಯುಕ್ತ ದಾಳಿ, ಲಂಚ ಪಡೆಯುವಾಗ ಬ್ಯಾಂಕ್ ನೌಕರ ಬಂಧನ

Advertisement
ಚಂದ್ರವಳ್ಳಿ ನ್ಯೂಸ್, ಹೊಸದುರ್ಗ:
ಹೊಸದುರ್ಗ ಡಿಸಿಸಿ ಬ್ಯಾಂಕ್ ನೌಕರ ನವೀನ್ ಲಂಚ ಪಡೆಯುವಾಗ
 ಲೋಕಾಯುಕ್ತ ಎಸ್ಪಿ ಎನ್.ವಾಸುದೇವರಾಮ ಅವರ ಮಾರ್ಗದರ್ಶನದಲ್ಲಿ ಪೊಲೀಸರು ಬಂಧಿಸಿದ್ದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ರೈತರು ಸಾಲಕ್ಕಾಗಿ ಸಲ್ಲಿಸಿದ ಅರ್ಜಿಗಳನ್ನು ಪರಿಶೀಲಿಸಿ ಮುಂದಿನ ಕ್ರಮಕೈಗೊಳ್ಳಲು 15000 ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಹೊಸದುರ್ಗ ಡಿ.ಸಿ.ಸಿ. ಬ್ಯಾಂಕ್‌ನ ಮೇಲ್ವಿಚಾರಕ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದು ಈಗ ಜೈಲು ಕಂಬಿ ಎಣಿಸುತ್ತಿದ್ದಾರೆ.
ಮಾಡದಕೆರೆ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪಿ. ಕುಮಾರ್ ಇವರು ರೈತರುಗಳು ಸಾಲಕ್ಕಾಗಿ ಕೋರಿ ಸಲ್ಲಿಸುವ ಅರ್ಜಿಗಳನ್ನು ಹೊಸದುರ್ಗ ಶಾಖೆಗೆ ಪರಿಶೀಲನೆಗಾಗಿ ನೀಡಿರುತ್ತಾರೆ.


ಈ ಸಂದರ್ಭದಲ್ಲಿ ಮೇಲ್ವಿಚಾರಕ ನವೀನ್ ಅವರು 15,000 ರೂ.ಗಳ ಲಂಚದ ಹಣಕ್ಕಾಗಿ ಬೇಡಿಕೆಯಿಟ್ಟಿರುತ್ತಾರೆ. ಅವರು ಲಂಚದ ಹಣಕ್ಕೆ ಬೇಡಿಕೆಯಿಟ್ಟ ಸಮಯದಲ್ಲಿ ನಡೆದ ಸಂಭಾಷಣೆಗಳನ್ನು ತಮ್ಮ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡು ಲೋಕಾಯುಕ್ತ ಪೊಲೀಸ್ ತನಿಖಾಧಿಕಾರಿ ಬಸವರಾಜ ಬಿ. ಲಮಾಣಿ ಅವರಿಗೆ ದೂರು ಸಲ್ಲಿಸಿದ್ದು ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ದಾಳಿ ಮಾಡಿ ಡಿಸಿಸಿ ಬ್ಯಾಂಕಿನ‌ ಮೇಲ್ವಿಚಾರಕ ಆರೋಪಿ ನವೀನ್ ಅವರನ್ನು ಬಂಧಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ