Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಗರಸಭೆ ನೂತನ ಉಪಾಧ್ಯಕ್ಷರಾಗಿ ಬಂತಿ ವೆಂಕಟೇಶ್‌ಪದ ಗ್ರಹಣ

Advertisement
Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ : 
ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ  ಬಿಜೆಪಿಯಿಂದ ವೆಂಕಟೇಶ್ (ಬಂತಿ)  ನೂತನ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದು ಮೇ 29 ರಂದು ಗಣ್ಯರ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಿದರು.

ಅಧಿಕಾರ ಸ್ವೀಕಾರದ ವೇಳೆ ಮಾತನಾಡಿದ ಅವರು  ತಾಲೂಕಿನ ಹೆಮ್ಮೆಯ ಶಾಸಕರಾದ ಧೀರಜ್ ಮುನಿರಾಜು,ನಗರಸಭೆ ಅಧ್ಯಕ್ಷರಾದ ಸುಮಿತ್ರಾ ಆನಂದ್, ಬಿಜೆಪಿ ಹಾಗೂ ಜೆಡಿಎಸ್ ಬೆಂಬಲಿತ ನಗರಸಭೆಯ ಸರ್ವ ಸದಸ್ಯರ ಸಹಕಾರದೊಂದಿಗೆ ಹಾಗೂ ತಾಲ್ಲೂಕು ಘಟಕದ ಅಧ್ಯಕ್ಷ ಹರೀಶ್ ಗೌಡರ ಬೆಂಬಲದೊಂದಿಗೆ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದು ಎಲ್ಲರ ಸಮ್ಮುಖದಲ್ಲಿ ಅಧಿಕಾರ ವಹಿಸಿಕೊಂಡಿದ್ದೇನೆ.

ಪ್ರಸ್ತುತ ಇರುವ 5ತಿಂಗಳ ಅಲ್ಪಾವಧಿಯಲ್ಲಿ  ನಗರದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ಕೊಡುವ ಮೂಲಕ  ನಗರದ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುದು. ನಗರಸಭೆ ಗ್ರೇಡ್ 1ಆಗಿ ಪರಿವರ್ತನೆಗೊಂಡಲ್ಲಿ ಹೆಚ್ಚಿನ ಅನುದಾನ ಪಡೆಯಲು ಸಹಾಯಕವಾಗುತ್ತದೆ ನಗರದ ಅಭಿವೃದ್ಧಿ ಮತ್ತಷ್ಟು ಮಾಡಬಹುದಾಗಿದೆ ಎಂದರು.

ನೂತನವಾಗಿ ನಗರ ಸಭೆ ಉಪಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಂತಿ ವೆಂಕಟೇಶ್ ಅವರನ್ನು  ಶಾಸಕ ಧೀರಜ್ ಮುನಿರಾಜು, ಬಮುಲ್ ನಿರ್ದೇಶಕ ಬಿ ಸಿ ಆನಂದ್ ಕುಮಾರ್, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಅಧ್ಯಕ್ಷ ಪ್ರೇಮ್ ಕುಮಾರ್,

 

ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್,ದೊಡ್ಡತುಮಕೂರು ಗ್ರಾಮಪಂಚಾಯಿತಿ ಮಾಜಿ ಸದಸ್ಯ ಎಲ್. ಐ. ಸಿ. ಮಂಜುನಾಥ್, ನಗರಸಭೆಯ ಎಲ್ಲಾ  ಸದಸ್ಯರು ,ಬಿಜೆಪಿ ಪಕ್ಷದ ಜಿಲ್ಲಾ ಹಾಗೂ ತಾಲ್ಲೂಕು ಘಟಕದ ಪ್ರಮುಖರು ಸೇರಿದಂತೆ ಹಲವಾರು ಗಣ್ಯರು ಅಭಿನಂದಿಸಿ ಶುಭ ಹಾರೈಸಿದರು.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ್ಯಾಷನಲ್ ಫ್ರೈಡ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಪಟ್ಟಣ ಪಂಚಾಯತಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸಿ.ನಾರಾಯಣಸ್ವಾಮಿ ಆಯ್ಕೆಕೆ.ಹೆಚ್ ಮುನಿಯಪ್ಪ ರವರ ಹಿರಿತನಕ್ಕೆ ತಕ್ಕ ಖಾತೆ ನೀಡಬೇಕು-ಆರ್.ವಿ ಮಹೇಶ್ಹಸಿರ ಒಡಲಿಗೆ ಚಿಣ್ಣರ ಪ್ರೀತಿಯ ಸ್ಪರ್ಶ: ಕರಗಿದ ಕಲ್ಲುಕೋಟೆಯ ನಾಡು!ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ ಸೇರಿ ಮೂವರಿಂದ ನಾಮಪತ್ರ ಸಲ್ಲಿಕೆಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ: 6 ವರ್ಷಗಳ ಸುದೀರ್ಘ ಸಂಬಂಧ ಅಂತ್ಯ, ರಾಜೀನಾಮೆ ಅಂಗೀಕರಿಸಿದ ಹೈಕಮಾಂಡ್ಸರ್ಕಾರಕ್ಕೆ ಮೊದಲ ಶಾಕ್: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ!ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪಿಲ್ಲ, ಅದು ಪಕ್ಷದ ‘ಒಬ್ಬರಿಗೆ ಒಂದು ಹುದ್ದೆ’ ಸೂತ್ರ: ಸಚಿವ ಸತೀಶ್ ಜಾರಕಿಹೊಳಿಖಾತೆ ಕಿಚ್ಚು: ಸಚಿವರ ಅಸಮಾಧಾನದ ಸವಾಲಿಗೆ 'ಕನಕಪುರ ಬಂಡೆ' ರೆಡಿ!ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ಶಂಕಿತ ಉಗ್ರನ ಬಂಧನ: ತುಮಕೂರು ಪೊಲೀಸರ ಭರ್ಜರಿ ಕಾರ್ಯಾಚರಣೆ!