Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾನು ಮುಷ್ತಾಕ್ ದಸರಾ ಉದ್ಘಾಟಿಸುತ್ತಾರೆ ಅನುಮಾನ ಬೇಡ- ಸಚಿವ ರಾಮಲಿಂಗರೆಡ್ಡಿ

Advertisement
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ ಬಾನು ಮುಷ್ತಾಕ್ ಅವರೇ ದಸರಾ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ ಎಂದು ಸಾರಿಗೆ ಮತ್ತು ಮುಜುರಾಯಿ ಸಚಿವರಾದ ರಾಮಲಿಂಗರೆಡ್ಡಿ ಹೇಳಿದರು.
ಬಾನು ಮುಷ್ತಾಕ್ ರ ಆಯ್ಕೆ ಬಗ್ಗೆ  ಸಿಎಂ ಮತ್ತು ಡಿಸಿಎಂ ತಮ್ಮ  ನಿರ್ಧಾರದಲ್ಲಿ ಅಚಲತೆ ಹೊಂದಿದ್ದಾರೆ ಎಂದರು.

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿಯವರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಹ್ವಾನಕ್ಕೆ ಅಪಪ್ರಚಾರ ಮಾಡುತ್ತಿದ್ದಾರೆ. ಚಾಮುಂಡೇಶ್ವರಿ ದೇವಾಲಯ ಮುಜರಾಯಿ ಇಲಾಖೆಗೆ ಸೇರಿದೆ. ಹಿಂದೂಗಳಿಗೆ ಸೇರಿದೆ ಎಂಬುವುದರಲ್ಲಿ ಎರಡು ಮಾತಿಲ್ಲ. ಆದರೆ ಬಿಜೆಪಿಯವರಿಗೆ ಜಾತಿ ರಾಜಕಾರಣದ ಚೇಷ್ಟೆ ಮಾಡದಿದ್ದರೆ ಅವರಿಗೆ ನಿದ್ದೆ ಬರಲ್ಲ ಎಂದು ಕಿಡಿಕಾರಿದರು.

ಚಾಮುಂಡೇಶ್ವರಿ ಪ್ರಾಧಿಕಾರ ಅಧಿಕೃತ ಹೌದೋ ಅಲ್ಲವೋ ಎಂಬುದನ್ನು ಕೋರ್ಟ್ ತಿರ್ಮಾನಿಸುತ್ತದೆ. ದಸರಾ ನಾಡಹಬ್ಬ ನಾಡಿನ ಏಳು ಕೋಟಿ ಜನರಿಗೆ ಸೇರಿರುವ ಹಬ್ಬವಾಗಿದೆ. ಮಾಜಿ ಸಿಎಂ ಯಡಿಯೂರಪ್ಪ ಕಾಲದಲ್ಲಿ ಅಬ್ದುಲ್ ಕಲಾಂ ಅವರನ್ನು ಆಹ್ವಾನಿಸಿದ್ದರು. ಈ ಹಿಂದೆ ಕವಿ ನಿಸಾರ್ ಅಹ್ಮದ್ ಅವರು ದಸರಾ ಉದ್ಘಾಟಿಸಿದ್ದರು. ಆಗ ಬಿಜೆಪಿಯವರು ಕುಂಕುಮ ಹಚ್ಚಿಕೊಂಡು ಬನ್ನಿ ಎಂದಿದ್ರಾ ಎಂದು ಪ್ರಶ್ನಿಸಿದರು.

ಅವರವರ ಧರ್ಮ ಅವರಿಗೆ ಶ್ರೇಷ್ಠ, ಯಾವುದೇ ಧರ್ಮವನ್ನು ಯಾರು ದ್ವೇಷಿಸಬಾರದು. ಮತಕ್ಕಾಗಿ ಬಿಜೆಪಿಯವರು ಏನು ಬೇಕಾದರೂ ಮಾಡ್ತಾರೆ. ಜನ ನೆಮ್ಮದಿಯಿಂದ ಇರವುದು ಬಿಜೆಪಿಯವರಿಗೆ ಬೇಕಾಗಿಲ್ಲ ಎಂದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ