Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

Advertisement
ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹಲವು ವಿಚಾರಗಳ ಕುರಿತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವಾಗ್ದಾಳಿ ನಡೆಸಿದ್ದಾರೆ.

ದ್ವೇಷ ಭಾಷಣ ವಿರೋಧಿಸುವ ವಿಧೇಯಕ ಜಾರಿಗೆ ತರುವ ಸರ್ಕಾರದ ನಿರ್ಧಾರವನ್ನು ಅವರು ತೀವ್ರವಾಗಿ ಪ್ರಶ್ನಿಸಿದ್ದಾರೆ. ಹೈದರಾಬಾದ್‌ನ ಓವೈಸಿ ಮತ್ತು ದೆಹಲಿಯ ಇಮಾಮ್‌ನಂತಹವರ ಪ್ರಚೋದನಕಾರಿ ಭಾಷಣಗಳಿಂದ ದ್ವೇಷ ಭಾಷಣ ಪ್ರಾರಂಭವಾಗಿದ್ದು, ಇದಕ್ಕೆ ಹಿಂದೂಗಳು ಪ್ರತಿಕ್ರಿಯಿಸುವುದು ಅನಿವಾರ್ಯ ಎಂದು ಯತ್ನಾಳ್ ಹೇಳಿದರು.

ರಾಜ್ಯ ಕಾಂಗ್ರೆಸ್ ಸರ್ಕಾರ ಸದಾ ಹಿಂದೂ ವಿರೋಧಿ ಕಾನೂನುಗಳನ್ನು ರಚಿಸುತ್ತಿದೆ, ಗೋಹತ್ಯೆ ನಿಷೇಧ ಕಾಯ್ದೆಯ ಸಡಿಲಿಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಟಿಪ್ಪು ಸುಲ್ತಾನ್ ಜಯಂತಿ ಪುನರಾರಂಭ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸುವ ಸಿದ್ಧತೆ ಕುರಿತು ಪ್ರತಿಕ್ರಿಯಿಸಿದ ಯತ್ನಾಳ್, ಕಾಂಗ್ರೆಸ್ ಟಿಪ್ಪುವನ್ನು ಬೆಂಬಲಿಸಿದಾಗಲೆಲ್ಲಾ ನಾಶವಾಗಿದೆ ಎಂದು ಯತ್ನಾಳ್ ಎಚ್ಚರಿಸಿದರು.

ಕಾಂಗ್ರೆಸ್ ಸರ್ಕಾರ ಪುನಃ ನಾಶವಾಗಬೇಕಿದ್ದರೆ ಟಿಪ್ಪು ಜಯಂತಿ ಪ್ರಾರಂಭಿಸಲಿ ಎಂದು ಯತ್ನಾಳ್ ಸವಾಲು ಹಾಕಿದ್ದಾರೆ. ಉತ್ತರ ಕರ್ನಾಟಕದ ವಿಷಯಗಳ ಚರ್ಚೆಗೆ ಅಧಿವೇಶನದಲ್ಲಿ ಅವಕಾಶ ನೀಡುವ ಸರ್ಕಾರದ ನಿರ್ಧಾರವನ್ನು ಯತ್ನಾಳ್ ಸ್ವಾಗತಿಸಿದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ